https://youtube.com/shorts/kIkAyfI4sxw?si=aggVueBL3fodeELS
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಮಕ್ಕಳಾಗದ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆಗಳನ್ನು ‘ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನಾರೋಗ್ಯ ಯೋಜನೆ- ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆಯಡಿ’ ತರಲಾಗಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದ್ದು, ಈ ಆದೇಶ ಒಂದು ವರ್ಷ ಮಾತ್ರ ಜಾರಿಯಲ್ಲಿ ಇರಲಿದೆ.
ಯೋಜನೆಯಡಿ ಬಿಪಿಎಲ್ ಕುಟುಂಬದ 120 ದಂಪತಿಗೆ ಮಾತ್ರ ಈ ಚಿಕಿತ್ಸೆಗೆ ಅನುಮೋದನೆ ದೊರೆತಿದೆ.
‘ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿ’ (ಎಆರ್‌ಟಿ) ಮೂಲಕ ದಂಪತಿಗಳಿಗೆ ಸಂತಾನೋತ್ಪತ್ತಿ ಚಿಕಿತ್ಸೆ ನೀಡಲಾಗುತ್ತದೆ. ಖಾಸಗಿ ವ್ಯವಸ್ಥೆಯಡಿ ಈ ಚಿಕಿತ್ಸೆ ದುಬಾರಿಯಾಗಿರುವುದರಿಂದ ಯೋಜನೆಯಡಿ ಸೇರ್ಪಡೆ ಮಾಡಲಾಗಿದೆ. ಐವಿಎಫ್ ಸೇರಿ ವಿವಿಧ ವಿಧಾನಗಳ ಮೂಲಕ ಆಯ್ದ ದಂಪತಿಗೆ ಈ ಚಿಕಿತ್ಸೆ ನೀಡಲಾಗುತ್ತದೆ ಎಂದು ತಿಳಿಸಲಾಗಿದೆ.
ಜಿಲ್ಲಾ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು, ಸ್ವಾಯತ್ತ ಆರೋಗ್ಯ ಸಂಸ್ಥೆಗಳು ಹಾಗೂ ಯೋಜನೆಯಡಿ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಒದಗಿಸಲಾಗುತ್ತದೆ ಎಂದು ಆದೇಶ ಹೇಳಿದೆ.