https://youtube.com/shorts/yWrDals90_k?si=3M7uDFWo7rYXZydS
newsics.com
ಕೊಪ್ಪಳ: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಸಿಹಿ ಸುದ್ದಿ ಸಿಕ್ಕಿದೆ. ಮತ್ತೆ ಎರಡು ಕಂತಿನ ಹಣ ಬಿಡುಗಡೆ ಮಾಡಲಾಗುವುದು.
ಗೃಹಲಕ್ಷ್ಮಿ ಯೋಜನೆಯಡಿ ಇದುವರೆಗೆ 24 ಕಂತಿನ ಹಣ ಬಿಡುಗಡೆ ಮಾಡಲಾಗಿದೆ. ಇದೀಗ ಮತ್ತೆ ಎರಡು ಕಂತು ಹಣ ಬಿಡುಗಡೆ ಮಾಡುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಕೊಪ್ಪಳದಲ್ಲಿ ಮಾತನಾಡಿದ ಅವರು, ಗೃಹಲಕ್ಷ್ಮಿಯೋಜನೆಯಡಿ ಒಟ್ಟು 26 ಕಂತಿನಲ್ಲಿ 52 ಸಾವಿರ ರೂಪಾಯಿ ಫಲಾನುಭವಿಗಳಿಗೆ ನೀಡಿದಂತಾಗುತ್ತದೆ. ಅದನ್ನೇ ಮತ್ತೆ ಮತ್ತೆ ಕೇಳಿ ನನಗೆ ಎಲ್ಲ ತಿಳಿದಿದೆ ಎನ್ನುವಂತೆ ಶಾಸಕ ಮಹೇಶ್ ಟೆಂಗಿನಕಾಯಿ ವರ್ತಿಸುತ್ತಿದ್ದಾರೆ. ಅವರಿಗೆ ಬೇರೆ ಕೆಲಸ ಇಲ್ಲದ ಕಾರಣ ಉತ್ತರ ಕೊಟ್ಟ ಮೇಲೆಯೂ ಪದೇ ಪದೇ ಕೇಳುತ್ತಿದ್ದಾರೆ ಎಂದು ಆಕ್ಷೇಪಿಸಿದ್ದಾರೆ.
Mylaralinga Karnika ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್: ಮೈಲಾರಲಿಂಗ ಕಾರ್ಣಿಕದ ಅರ್ಥವೇನು?