Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ
ಆರೋಗ್ಯಲೈಫ್‌ಸ್ಟೈಲ್

ಮಲಗುವ ಮುನ್ನ ಮಾಡುವ ಈ ತಪ್ಪುಗಳು ನಿಮ್ಮ ನಿದ್ರೆಗೆ ಭಂಗ ತರಬಹುದು ಎಚ್ಚರ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಏಳೆಂಟು ಗಂಟೆ ನಿದ್ರೆ ಮಾಡಲು ಸಾಧ್ಯವಾಗದಿದ್ದರೆ ಆರೋಗ್ಯದ ಮೇಲೆ ತೀವ್ರ ಪರಿಣಾಮ ಬೀರುವುದಲ್ಲದೆ, ದೈನಂದಿನ ಚಟುವಟಿಕೆಯ ಮೇಲೂ ಇದು ಪರಿಣಾಮ ಬೀರುತ್ತದೆ. ಹೀಗೆ ಸರಿಯಾಗಿ ನಿದ್ರೆ ಬಾರದಿರಲು, ನಿದ್ರಾಹೀನತೆ ನಾವು ಮಾಡುವ ಕೆಲವು ತಪ್ಪುಗಳು ಸಹ ಕಾರಣವಂತೆ

ಮಲಗುವ ಮುನ್ನ ಮೊಬೈಲ್ ಮತ್ತು ಲ್ಯಾಪ್‌ಟಾಪ್ ನೋಡುವುದು: ಇದು ನಾವು ಮಾಡುವ ಅತ್ಯಂತ ಸಾಮಾನ್ಯ ತಪ್ಪು. ಮೊಬೈಲ್, ಲ್ಯಾಪ್‌ಟಾಪ್ ಪರದೆಗಳಿಂದ ಹೊರಸೂಸುವ ನೀಲಿ ಬೆಳಕು ನಮ್ಮ ದೇಹದಲ್ಲಿ ಮೆಲಟೋನಿನ್ ಎಂಬ ಹಾರ್ಮೋನ್ ಉತ್ಪಾದನೆಯನ್ನು ಪ್ರತಿಬಂಧಿಸುತ್ತದೆ. ಮೆಲಟೋನಿನ್ ನಮ್ಮ ನಿದ್ರೆ-ಎಚ್ಚರ ಚಕ್ರವನ್ನು ನಿಯಂತ್ರಿಸುವ ಹಾರ್ಮೋನ್ ಆಗಿದ್ದು, ಇದಕ್ಕೆ ಅಡಿಯುಂಟಾದಾಗ, ಸರಿಯಾಗಿ ನಿದ್ರೆ ಮಾಡಲು ಆಗುವುದಿಲ್ಲ. ಆದ್ದರಿಂದ, ಮಲಗುವ ಸಮಯಕ್ಕೆ ಕನಿಷ್ಠ ಒಂದು ಗಂಟೆ ಮೊದಲು ಎಲ್ಲಾ ಗ್ಯಾಜೆಟ್‌ಗಳಿಂದ ದೂರವಿರಿ.
ಮಲಗುವ ಮುನ್ನ ಭಾರವಾದ ಅಥವಾ ಮಸಾಲೆಯುಕ್ತ ಆಹಾರ ಸೇವಿಸವುದು: ರಾತ್ರಿ ಊಟ ಹಗುರವಾಗಿರಬೇಕು ಮತ್ತು ಸುಲಭವಾಗಿ ಜೀರ್ಣವಾಗಬೇಕು. ಮಲಗುವ ಮುನ್ನ ಹುರಿದ ಅಥವಾ ಮಸಾಲೆಯುಕ್ತ ಆಹಾರವನ್ನು ಸೇವಿಸುವುದರಿಂದ ಆಮ್ಲೀಯತೆ ಮತ್ತು ಅಜೀರ್ಣ ಉಂಟಾಗುತ್ತದೆ. ಮತ್ತು ರಾತ್ರಿಯ ಸಮಯ ದೇಹವು ಆಹಾರವನ್ನು ಜೀರ್ಣಿಸಿಕೊಳ್ಳುವುದರಲ್ಲಿಯೇ ನಿರತವಾಗಿರುತ್ತದೆ, ಇದು ವಿಶ್ರಾಂತಿ ಪಡೆಯುವುದನ್ನು ತಡೆಯುತ್ತದೆ ಮತ್ತು ನಿದ್ರೆಗೂ ಅಡ್ಡಿಪಡಿಸುತ್ತದೆ. ಅಷ್ಟೇ ಅಲ್ಲದೆ ಈ ತಪ್ಪಿನಿಂದ ಬೊಜ್ಜು ಮತ್ತು ಇತರ ಜೀರ್ಣಕಾರಿ ಅಸ್ವಸ್ಥತೆಗಳ ಅಪಾಯ ಉಂಟಾಗುವ ಸಾಧ್ಯತೆಯೂ ಇದೆ.
ಕೆಫೀನ್ ಮತ್ತು ಮದ್ಯ ಸೇವನೆ: ಮಲಗುವ ಮುನ್ನ ಕಾಫಿ, ಟೀ, ತಂಪು ಪಾನೀಯಗಳು ಅಥವಾ ಮದ್ಯಪಾನ ಸೇವನೆ ಮಾಡುವ ಅಭ್ಯಾಸವು ನಿದ್ರೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಹಾಗಾಗಿ ಯಾವುದೇ ಕಾರಣಕ್ಕೂ ಮಲಗುವ ಮುನ್ನ ಈ ಪಾನೀಯಗಳನ್ನು ಸೇವನೆ ಮಾಡಬೇಡಿ.
ಒಳ್ಳೆಯ ನಿದ್ರೆ ಪಡೆಯುವುದು ಹೇಗೆ?
ರಾತ್ರಿಯ ಉತ್ತಮ ನಿದ್ರೆ ಪಡೆಯಲು, ಕೆಲವು ಅಭ್ಯಾಸಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ. ಮೊದಲಿಗೆ ಮಲಗುವ ಸಮಯವನ್ನು ನಿಗದಿಪಡಿಸಿ ಮತ್ತು ಪ್ರತಿದಿನ ಆ ಸಮಯದಲ್ಲಿಯೇ ಮಲಗಲು ಪ್ರಯತ್ನಿಸಿ. ಮಲಗುವ ಮುನ್ನ ಕೋಣೆಯನ್ನು ಕತ್ತಲೆಯಾಗಿಡಿ. ಶಾಂತ ಮತ್ತು ಆರಾಮದಾಯಕ ವಾತಾವರಣವನ್ನು ರಚಿಸಿ. ಮಲಗುವ ಮುನ್ನ ಪುಸ್ತಕ ಓದುವುದು ಸಹ ವಿಶ್ರಾಂತಿ ಪಡೆಯಲು ಸಹಾಯ ಮಾಡುತ್ತದೆ. ಅಲ್ಲದೆ ಉತ್ತಮ ನಿದ್ರೆಗಾಗಿ ನೀವು ಮಲಗುವ ಮುನ್ನ ಧ್ಯಾನವನ್ನೂ ಮಾಡಬಹುದು.

https://www.newsics.com/2026/02/02/mother-hangs-3-children-murders-them-drinks-diesel-further-action/

TAGGED:Be carefulThese mistakes before bed can disrupt your sleep
Share This Article
Facebook Twitter Copy Link Print
Previous Article 3 ಮಕ್ಕಳನ್ನು ನೇಣಿಗೇರಿಸಿ ಕೊಲೆಗೈದು ಹೊಟ್ಟೆತುಂಬಾ ಡೀಸೆಲ್ ಕುಡಿದ ತಾಯಿ; ಮುಂದೆನಾಯ್ತು?
Next Article ನರೇಂದ್ರ ಮೋದಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಲೈಫ್‌ಸ್ಟೈಲ್ಆರೋಗ್ಯ

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read
ಪ್ರಮುಖಲೈಫ್‌ಸ್ಟೈಲ್

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read
ಲೈಫ್‌ಸ್ಟೈಲ್

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read
ಲೈಫ್‌ಸ್ಟೈಲ್

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?