Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಫ್ರೀ ಮೊಮೋಸ್‌ಗಾಗಿ 85 ಲಕ್ಷ ರೂಪಾಯಿ ಒಡವೆ ಕೊಟ್ಟ ಬಾಲಕ
ದೇಶಪ್ರಮುಖ

ಫ್ರೀ ಮೊಮೋಸ್‌ಗಾಗಿ 85 ಲಕ್ಷ ರೂಪಾಯಿ ಒಡವೆ ಕೊಟ್ಟ ಬಾಲಕ

Share
1 Min Read
SHARE

https://youtu.be/yWrDals90_k?si=0cPpifDPxISTWyJo

Subscribe ನ್ಯೂಸಿಕ್ಸ್ ಕನ್ನಡ

newsics.com

ಮೊಮೊಸ್‌ ತಿನ್ನುವ ಅತಿಯಾದ ಆಸೆಯಿಂದಾಗಿ 7ನೇ ತರಗತಿಯ ಬಾಲಕನೊಬ್ಬ ತನ್ನ ಮನೆಯಲ್ಲಿದ್ದ ಸುಮಾರು 85 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಬೀದಿಬದಿಯ ವ್ಯಾಪಾರಿಗಳಿಗೆ ನೀಡಿರುವ ಘಟನೆ ಉತ್ತರ ಪ್ರದೇಶದ ದೇವೂರಿಯಾ ನಗರದಲ್ಲಿ ನಡೆದಿದೆ.

ವಾರಣಾಸಿಯ ದೇವಾಲಯವೊಂದರಲ್ಲಿ ಅರ್ಚಕರಾಗಿರುವ ವಿಮಲೇಶ್ ಮಿಶ್ರಾ ಅವರ ಮಗನಿಗೆ ಮೊಮೊ ಎಂದರೆ ಪಂಚಪ್ರಾಣ. ಬಾಲಕನ ಈ ಚಪಲವನ್ನೇ ಬಂಡವಾಳ ಮಾಡಿಕೊಂಡ ಸ್ಥಳೀಯ ಮೊಮೊ ಅಂಗಡಿಯ ಮೂವರು ಮಾಲೀಕರು ಆತನಿಗೆ ಬಲೆ ಬೀಸಿದ್ದರು. “ಮನೆಯಿಂದ ಚಿನ್ನಾಭರಣ ತಂದುಕೊಟ್ಟರೆ ನಿನಗೆ ಬೇಕಾದಷ್ಟು ಮೊಮೊಗಳನ್ನು ಉಚಿತವಾಗಿ ನೀಡುತ್ತೇವೆ” ಎಂದು ಆತನಿಗೆ ಆಸೆ ತೋರಿಸಿದ್ದರು. ಈ ಆಮಿಷಕ್ಕೆ ಬಲಿಯಾದ ಅಮಾಯಕ ಬಾಲಕ, ಮನೆಯವರಿಗೆ ತಿಳಿಯದಂತೆ ಹಂತ ಹಂತವಾಗಿ ಮನೆಯಲ್ಲಿದ್ದ ಬೆಲೆಬಾಳುವ ಆಭರಣಗಳನ್ನು ತಂದು ವ್ಯಾಪಾರಿಗಳ ಕೈಗಿಟ್ಟಿದ್ದಾನೆ.

ಈ ಘಟನೆಯು ಬೆಳಕಿಗೆ ಬಂದಿದ್ದು ವಿಮಲೇಶ್ ಅವರ ಸಹೋದರಿ ಮನೆಗೆ ಭೇಟಿ ನೀಡಿದಾಗ. ಸಹೋದರಿಯು ತನ್ನ ಆಭರಣಗಳನ್ನು ಕೇಳಿದಾಗ ಮಿಶ್ರಾ ಕುಟುಂಬದವರು ಕಪಾಟು ತೆರೆದು ನೋಡಿದ್ದಾರೆ. ಅಲ್ಲಿ ಸಂಗ್ರಹಿಸಿಟ್ಟಿದ್ದ ಎಲ್ಲಾ ಒಡವೆಗಳು ಮಾಯವಾಗಿರುವುದನ್ನು ಕಂಡು ಅವರು ಹೌಹಾರಿದ್ದಾರೆ. ಎಲ್ಲ ಕಡೆ ಹುಡುಕಾಡಿ ಕೊನೆಗೆ ಬಾಲಕನನ್ನು ತೀವ್ರವಾಗಿ ವಿಚಾರಿಸಿದಾಗ, ತಾನು ಮೊಮೊ ತಿನ್ನುವ ಸಲುವಾಗಿ ಅಂಗಡಿಯವರಿಗೆ ಒಡವೆಗಳನ್ನು ನೀಡಿರುವ ಸತ್ಯವನ್ನು ಆತ ಒಪ್ಪಿಕೊಂಡಿದ್ದಾನೆ.

ಹೀಗಾಗಿ, ಮೂವರು ಮೋಮೊಸ್‌ ವ್ಯಾಪಾರಿಗಳು ಬಾಲಕನಿಗೆ ಒಂದು ಆಮಿಷವೊಡ್ಡಿದ್ದಾರೆ. ಮನೆಯಲ್ಲಿರುವ ಎಲ್ಲ ಚಿನ್ನಾಭರಣ ತಂದುಕೊಟ್ಟರೆ, ಎಷ್ಟು ಬೇಕೋ ಅಷ್ಟು ಮೋಮೊಸ್‌ ಕೊಡುತ್ತೇವೆ ಎಂದಿದ್ದಾರೆ. ಇದನ್ನೇ ನಂಬಿದ ಬಾಲಕ ಮನೆಯ ಲಾಕರ್‌ನಲ್ಲಿದ್ದ ಚಿನ್ನವನ್ನು ಕದ್ದು ಹಂತ ಹಂತವಾಗಿ ವ್ಯಾಪಾರಿಗಳಿಗೆ ಕೊಟ್ಟಿದ್ದಾನೆ. ಹೀಗೆ ಮನೆಯಲ್ಲಿದ್ದ ಬಹುತೇಕ ಆಭರಣಗಳು ವ್ಯಾಪಾರಿಗಳ ಪಾಲಾಗಿದೆ.

ಸದ್ಯ ಪ್ರಕರಣ ಸಂಬಂಧ ಪೊಲೀಸ್ ಠಾಣೆಯಲ್ಲಿ ವಿಮಲೇಶ್ ಮಿಶ್ರಾ ದೂರು ನೀಡಿದ್ದಾರೆ. ಅವರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ನಾಪತ್ತೆಯಾಗಿರುವ ಮೂವರು ಆರೋಪಿಗಳನ್ನು ಬಂಧಿಸಲು ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾಗಿದೆ.

https://www.newsics.com/2026/02/03/water-supply-disruptions-in-bengaluru-for-the-next-two-days/

 

 

TAGGED:Boy who gave Rs 85 lakh as a gift for free momos
Share This Article
Facebook Twitter Copy Link Print
Previous Article ಬೆಂಗಳೂರಿನಲ್ಲಿ ಈ ಎರಡು ದಿನ ನೀರು ಪೂರೈಕೆಯಲ್ಲಿ ವ್ಯತ್ಯಯ
Next Article ಬೆಂಗಳೂರಿನಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ – ಸ್ಥಳೀಯರಲ್ಲಿ ಆತಂಕ

Popular Posts

ಆರೋಗ್ಯಕರ ಜೀವನ ನಿಮ್ಮದಾಗಲು ಈ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

2 Min Read

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?