Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉಚಿತ ಊಟ ಹಾಕುತ್ತಿದ್ದ ಕಮಲಾಕರ್ ಭಟ್; ಸುಚಿತ್ರಾ ಸಹವಾಸದಿಂದ ಜೈಲೂ ಸೇರಿದ್ರು!
ಕರ್ನಾಟಕಪ್ರಮುಖ

ಉಚಿತ ಊಟ ಹಾಕುತ್ತಿದ್ದ ಕಮಲಾಕರ್ ಭಟ್; ಸುಚಿತ್ರಾ ಸಹವಾಸದಿಂದ ಜೈಲೂ ಸೇರಿದ್ರು!

Share
2 Min Read
SHARE

https://youtube.com/shorts/2Z4I0oFUbOQ?si=GQh11tLqq7tz2UFd

Subscribe ನ್ಯೂಸಿಕ್ಸ್ ಕನ್ನಡ

newsics.com

ಅಂದು ಬಡತನದ ಕಾರಣಕ್ಕೆ ವೇದ ಕಲಿತು, ಇಂದು ದಿನಕ್ಕೆ 700 ಜನರಿಗೆ ಉಚಿತ ಅನ್ನದಾನ ಮಾಡುತ್ತಿದ್ದ ವ್ಯಕ್ತಿಯೊಬ್ಬ, ಕೌಟುಂಬಿಕ ಕಲಹಕ್ಕೆ ತುಪ್ಪ ಸುರಿದು ಕೊಲೆ ಮಾಡುವ ಹಂತಕ್ಕೆ ಇಳಿದಿರುವುದು ಇಡೀ ಜಿಲ್ಲೆಯನ್ನು ಸ್ತಬ್ದಗೊಳಿಸಿದೆ

ಬಡ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದ ಕಮಲಾಕರ್ ಭಟ್, ಒಂದು ಹೊತ್ತಿನ ಊಟಕ್ಕೂ ಸಂಕಷ್ಟ ಅನುಭವಿಸಿದವರು. ಕೇರಳದಲ್ಲಿ 14 ವರ್ಷ ವೇದ ಮತ್ತು ಜ್ಯೋತಿಷ್ಯ ಅಧ್ಯಯನ ಮಾಡಿ, ಹಾಸನದ ಅರಸೀಕೆರೆಯ ಮುಸ್ಲಿಂ ಕಾಲೇಜಿನಲ್ಲಿ ಸಂಸ್ಕೃತ ಕಲಿಸಿದ ಹಿನ್ನೆಲೆ ಇವರದ್ದು. ಅನಾಥಾಶ್ರಮಗಳಿಗೆ, ಸ್ಲಂಗಳಿಗೆ 4 ಓಮ್ನಿ ವ್ಯಾನ್‌ಗಳ ಮೂಲಕ ಊಟ ಸಾಗಿಸುವ ಇವರ “ನಿತ್ಯಪೂಜೆ ಭಿಕ್ಷಾ ಪಾತ್ರೆ” ಅಭಿಯಾನ ಅದೆಷ್ಟೋ ಜನರಿಗೆ ಮಾದರಿಯಾಗಿತ್ತು. ಕ್ಯಾನ್ಸರ್ ರೋಗಿಗಳ ಚಿಕಿತ್ಸೆ, ವೃಕ್ಷಾಭಿಯಾನದಂತಹ ಪುಣ್ಯದ ಕೆಲಸಗಳಿಂದಾಗಿ ಸಮಾಜ ಇವರನ್ನು ‘ಗುರೂಜಿ’ ಎಂದು ಗೌರವಿಸಿತ್ತು.

ಆದರೆ, ಈ ಪುಣ್ಯದ ಕೆಲಸಗಳ ಹಿಂದಿದ್ದ ಸಮಾಜ ಸೇವಕನ ಮುಖವಾಡ ಕಳಚಿದ್ದು ಸುಚಿತ್ರಾ ಎಂಬುವವರ ಸುಂದರ ಸಂಸಾರಕ್ಕೆ ಕೈ ಹಾಕಿದಾಗ. ಬೆಂಗಳೂರಿನಲ್ಲಿ ದುಡಿಯುತ್ತಿದ್ದ ಪತಿ ಮಹೇಶ್ ನಾಯ್ಕ್ ಅವರ ಅನುಪಸ್ಥಿತಿಯಲ್ಲಿ, ಸುಚಿತ್ರಾರನ್ನು ಜ್ಯೋತಿಷ್ಯದ ಹೆಸರಲ್ಲಿ ತನ್ನ ಮರುಳಾಗಿಸಿದ ಈ ಜ್ಯೋತಿಷಿ, ಅವರ ಸಂಸಾರದಲ್ಲಿ ಬಿರುಗಾಳಿ ಎಬ್ಬಿಸಿದ್ದಾನೆ. ತನ್ನ ಸ್ವಂತ ಮಕ್ಕಳಿಗಿಂತ ಈ ಗುರೂಜಿಯೇ ಮುಖ್ಯವೆಂಬಂತೆ ಮಹಿಳೆ ಸಿದ್ದಾಪುರದಿಂದ ಶಿವಮೊಗ್ಗಕ್ಕೆ ಓಡಿ ಹೋಗಿ ಈತನ ಮನೆಯಲ್ಲಿ ಆಶ್ರಯ ಪಡೆದಿದ್ದಳು.
ಗುರೂಜಿಯ ಮನೆಯಲ್ಲಿ ತಾಯಿ ಮತ್ತು ಜ್ಯೋತಿಷಿ ಒಟ್ಟಿಗಿದ್ದರೆ, ಮಕ್ಕಳು ಅನಾಥರಾಗಿದ್ದರು. ಮಕ್ಕಳನ್ನು ಪ್ರಶ್ನಿಸಿದಾಗ ‘ವಿಷ ಹಾಕುತ್ತೇವೆ’ ಎಂದು ಬೆದರಿಕೆ ಹಾಕಲಾಗಿತ್ತು. ಆತಂಕಗೊಂಡ ಮಗಳು ಸುಮಶ್ರೀ, ತನ್ನ ತಂದೆಗೆ ‘ಅಪ್ಪಾ ಸೇವ್ ಮೀ’ ಎಂದು ರಹಸ್ಯ ಸಂದೇಶ ಕಳುಹಿಸಿದ್ದು ಈ ಪ್ರಕರಣದ ಅತಿ ದೊಡ್ಡ ತಿರುವು. ಮಗಳನ್ನು ರಕ್ಷಿಸಿ ಅಣ್ಣ ವಸಂತ್ ನಾಯ್ಕ್ ಮನೆಯಲ್ಲಿ ಇರಿಸಿದ ತಂದೆಯ ವಿರುದ್ಧ ರೊಚ್ಚಿಗೆದ್ದ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಪತ್ನಿ ಸುಚಿತ್ರಾ, ‘ಡೆತ್ ಸ್ಕ್ವಾಡ್’ನಂತೆ ದಾಳಿ ನಡೆಸಿದ್ದಾರೆ.
ದಿನವೂ 700 ಮಂದಿಗೆ ಅನ್ನ ನೀಡುತ್ತಿದ್ದ ಅದೇ ಜ್ಯೋತಿಷಿ, ಅಂದು ಸಂಜೆ ಐವರು ಗೂಂಡಾಗಳನ್ನು ಕರೆತಂದು ರಣರಂಗ ಸೃಷ್ಟಿಸಿದ್ದಾನೆ. ಈ ಭೀಕರ ಹಲ್ಲೆಯಲ್ಲಿ ವಸಂತ್ ನಾಯ್ಕ್ (43) ಪ್ರಾಣ ಕಳೆದುಕೊಂಡರೆ, ಮಹೇಶ್ ನಾಯ್ಕ್ ಮತ್ತು ಜಗಳ ಬಿಡಿಸಲು ಬಂದ ಪಕ್ಕದ ಮನೆಯ ಕುಮಾರ್ ಎನ್ನುವ ಯುವಕ ಆಸ್ಪತ್ರೆಯಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ. ಸದ್ಯ ಜ್ಯೋತಿಷಿ ಕಮಲಾಕರ್ ಭಟ್, ಸುಚಿತ್ರಾ ಮತ್ತು ಮತ್ತು ಮಹಿಳೆಯ ತಂದೆ ಲೋಕನಾಥ್ ಸೇರಿ ಏಳು ಮಂದಿ ಆರೋಪಿಗಳು ಸಿದ್ದಾಪುರ ಪೊಲೀಸರ (FIR: 23/26) ಅತಿಥಿಯಾಗಿದ್ದಾರೆ. ಸಮಾಜ ಸೇವೆಯನ್ನು ಮಾಡಿಕೊಂಡು ಪ್ರಸಿದ್ಧಿ ಗಳಿಸಿದ್ದ ಗುರೂಜಿ ಮಹಿಳೆಯೊಂದಿಗೆ ಬೆಳೆಸಿಕೊಂಡ ಈ ಅಕ್ರಮ ಸಂಬಂಧ ಮತ್ತು ಹಠಮಾರಿ ವರ್ತನೆ ಒಂದು ಹಸನಾದ ಸಂಸಾರವನ್ನು ಸ್ಮಶಾನವಾಗಿಸಿದೆ. ಒಂದು ಕುಟುಂಬದಲ್ಲಿ ಸ್ಮಶಾನ ಮೌನ ಆವರಿಸಿದ್ದು, ಮಕ್ಕಳು ಅಪ್ಪ-ಅಮ್ಮನ ಸ್ಥಿತಿ ಕಂಡು ಕಂಗಾಲಾಗಿದ್ದಾರೆ.

ದೋಷ ನಿವಾರಣೆಯ ಹೆಸರಿನಲ್ಲಿ ಹಲವು ಬಾರಿ ಅತ್ಯಾಚಾರ ಮಾಡಿದ್ದ ಅರ್ಚಕ ಅರೆಸ್ಟ್

TAGGED:ended up in jail due to his association with Suchitra!Kamalakar Bhatwho was distributing free meals
Share This Article
Facebook Twitter Copy Link Print
Previous Article ದೋಷ ನಿವಾರಣೆಯ ಹೆಸರಿನಲ್ಲಿ ಹಲವು ಬಾರಿ ಅತ್ಯಾಚಾರ ಮಾಡಿದ್ದ ಅರ್ಚಕ ಅರೆಸ್ಟ್
Next Article ಪ್ರಯಾಣಿಕರಿದ್ದ ಎರಡು ವಿಮಾನಗಳ ನಡುವೆ ಡಿಕ್ಕಿ: ಅದೃಷ್ಟವಶಾತ್ ತಪ್ಪಿದ ಭಾರೀ ದುರಂತ

Popular Posts

Anurag Kashyap Controversy| ನಗ್ನ ದೃಶ್ಯಕ್ಕೆ ನಿರಾಕರಣೆ; ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು ಎಂದ ನಟಿಯ ಬಹಿರಂಗ

2 Min Read

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Daily Horoscope ಇಂದಿನ ದಿನ ಭವಿಷ್ಯ – 23 ಜುಲೈ 2026

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read
ಕರ್ನಾಟಕದೇಶಪ್ರಮುಖ

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read
ಕರ್ನಾಟಕದೇಶಪ್ರಮುಖ

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?