Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಧಿಕಾರದ ಆಸೆಗೆ ಆರು ವರ್ಷದ ಮಗಳನ್ನುಕಾಲುವೆಗೆ ನೂಕಿ ಕೊಲೆ ಮಾಡಿದ ತಂದೆ
ದೇಶಪ್ರಮುಖ

ಅಧಿಕಾರದ ಆಸೆಗೆ ಆರು ವರ್ಷದ ಮಗಳನ್ನುಕಾಲುವೆಗೆ ನೂಕಿ ಕೊಲೆ ಮಾಡಿದ ತಂದೆ

Share
1 Min Read
SHARE

https://youtube.com/shorts/2Z4I0oFUbOQ?si=_eiZr2Y6IgPak8NX

Subscribe ನ್ಯೂಸಿಕ್ಸ್ ಕನ್ನಡ

newsics.com

ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹತೆ ಪಡೆಯುವ ಸಲುವಾಗಿ, ತಂದೆಯೊಬ್ಬ ತನ್ನ ಆರು ವರ್ಷದ ಮಗಳನ್ನೇ ಕಾಲುವೆಗೆ ನೂಕಿ ಕೊಲೆ ಮಾಡಿರುವ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ನಡೆದಿದೆ.

ನಾಂದೇಡ್ ಜಿಲ್ಲೆಯ ಮುಖೇಡ್ ತಾಲೂಕಿನ ಕೇರೂರ್ ಗ್ರಾಮದ ನಿವಾಸಿ ಪಾಂಡುರಂಗ ಕೊಂಡಮಂಗಲೆ ಎಂಬಾತ ಗ್ರಾಮದಲ್ಲಿ ಸಲೂನ್ ನಡೆಸುತ್ತಿದ್ದ. ಈತನಿಗೆ ಒಬ್ಬ ಮಗ ಮತ್ತು ಆರು ವರ್ಷದ ಅವಳಿ ಹೆಣ್ಣು ಮಕ್ಕಳಿದ್ದರು.

ಮಹಾರಾಷ್ಟ್ರದ ಪಂಚಾಯತ್ ರಾಜ್ ಕಾಯ್ದೆಯ ಪ್ರಕಾರ, ಇಬ್ಬರಿಗಿಂತ ಹೆಚ್ಚು ಮಕ್ಕಳಿರುವವರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಮುಂಬರುವ ಜೂನ್ ತಿಂಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸಿ ಸರಪಂಚನಾಗಬೇಕೆಂಬ ಹಂಬಲ ಹೊಂದಿದ್ದ ಪಾಂಡುರಂಗನಿಗೆ ಮೂರು ಮಕ್ಕಳಿರವುದು ದೊಡ್ಡ ಅಡ್ಡಿಯಾಗಿತ್ತು.

ಪಾಂಡುರಂಗ ತನ್ನ ಸ್ನೇಹಿತ ಹಾಗೂ ಹಾಲಿ ಸರಪಂಚ ಗಣೇಶ್ ರಾಮಚಂದ್ರ ಶಿಂಧೆ ಬಳಿ ಸಲಹೆ ಕೇಳಿದ್ದ. ಮೊದಲು ಮಗುವನ್ನು ದತ್ತು ನೀಡಲು ಯೋಚಿಸಿದರಾದರೂ, ಜನ್ಮ ಪ್ರಮಾಣಪತ್ರದಲ್ಲಿ ತಂದೆಯ ಹೆಸರಿರುವುದರಿಂದ ಅದು ಕಾನೂನುಬದ್ಧವಾಗಿ ಚುನಾವಣೆಗೆ ಅಡ್ಡಿಯಾಗಬಹುದು ಎಂದು ಭಾವಿಸಿದರು.

ಜನವರಿ 29 ರಂದು ಪಾಂಡುರಂಗ ತನ್ನ ಮಗಳಾದ ಪ್ರಾಚಿಯನ್ನು ಬೈಕ್‌ನಲ್ಲಿ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನಿಜಾಮ್ ಸಾಗರ್ ಕಾಲುವೆ ಬಳಿ ಕರೆದೊಯ್ದಿದ್ದಾನೆ. ಅಲ್ಲಿ ಯಾರು ಇಲ್ಲದ ಸಮಯ ನೋಡಿ ಮಗುವನ್ನು ಕಾಲುವೆಗೆ ನೂಕಿ ಅಲ್ಲಿಂದ ಪರಾರಿಯಾಗಿದ್ದಾನೆ. ಹತ್ತಿರದ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದವರು ಶಬ್ದ ಕೇಳಿ ಬರುವಷ್ಟರಲ್ಲಿ ಮಗು ನೀರಿನಲ್ಲಿ ಮುಳುಗಿ ಮೃತಪಟ್ಟಿತ್ತು.

ತೆಲಂಗಾಣ ಪೊಲೀಸರಿಗೆ ಅಪರಿಚಿತ ಮಗುವಿನ ಶವ ಸಿಕ್ಕಾಗ, ಕಾನ್ಸ್ಟೇಬಲ್ ಒಬ್ಬರು ಮಗುವಿನ ಫೋಟೋವನ್ನು ತಮ್ಮ ವಾಟ್ಸಾಪ್ ಸ್ಟೇಟಸ್‌ನಲ್ಲಿ ಹಾಕಿದ್ದರು. ಇದನ್ನು ನೋಡಿದ ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಇದು ಪಾಂಡುರಂಗನ ಮಗಳು ಎಂದು ಗುರುತಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಪಾಂಡುರಂಗನನ್ನು ತೀವ್ರ ವಿಚಾರಣೆಗೆ ಒಳಪಡಿಸಿದಾಗ, ಆತ ತನ್ನ ರಾಜಕೀಯ ಆಸೆಗಾಗಿ ಮಗಳನ್ನು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸದ್ಯ ಪಾಂಡುರಂಗ ಮತ್ತು ಆತನಿಗೆ ಸಹಕರಿಸಿದ ಸರಪಂಚ ಗಣೇಶ್ ಶಿಂಧೆಯನ್ನು ಪೊಲೀಸರು ಬಂಧಿಸಿದ್ದಾರೆ.

https://www.newsics.com/2026/02/04/high-court-orders-famous-actor-rajpal-yadav-to-surrender-to-police/

TAGGED:Father kills six-year-old daughter by pushing her into a canal for power
Share This Article
Facebook Twitter Copy Link Print
Previous Article ಪ್ರಖ್ಯಾತ ನಟ ರಾಜ್‌ಪಾಲ್ ಯಾದವ್‌ಗೆ ಪೊಲೀಸರಿಗೆ ಶರಣಾಗುವಂತೆ ಹೈಕೋರ್ಟ್ ಆದೇಶ – ಕಾರಣವೇನು?
Next Article ಚಿಕ್ಕಬಳ್ಳಾಪುರದಲ್ಲಿ ನೈತಿಕ ಪೊಲೀಸ್’ಗಿರಿ – ಮುಸ್ಲಿಂ ಯುವತಿ-ಹಿಂದೂ ಯುವಕ ಅಡ್ಡಗಟ್ಟಿ ಕಿರಿಕ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?