https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ‘ಜೀವಮಾನ ಸಾಧನೆ ಪ್ರಶಸ್ತಿ’ಗೆ ಡಾ ಹಂಸಲೇಖ ಅವರನ್ನ ಆಯ್ಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಫಿಲ್ಮ್ ಫೆಸ್ಟಿವಲ್‌ನ ಸಮಾರೋಪ ಸಮಾರಂಭದಲ್ಲಿ ಡಾ ಹಂಸಲೇಖ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಕರ್ನಾಟಕ ಸರ್ಕಾರವು ಅಧಿಕೃತ ಆದೇಶ ಹೊರಡಿಸಿದ್ದು, ಕನ್ನಡ ಚಿತ್ರರಂಗಕ್ಕೆ ಅವರ ನಾಲ್ಕು ದಶಕಗಳ ಕೊಡುಗೆಯನ್ನು ಪರಿಗಣಿಸಿ ಈ ಗೌರವ ನೀಡಲಾಗುತ್ತಿದೆ.
ಕರ್ನಾಟಕ ಚಲನಚಿತ್ರ ಅಕಾಡೆಮಿಯ ಅಧ್ಯಕ್ಷರ ನೇತೃತ್ವದಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯು ಈ ತೀರ್ಮಾನ ಕೈಗೊಂಡಿದೆ. ಹಂಸಲೇಖ ಅವರು ಕಳೆದ ನಾಲ್ಕು ದಶಕಗಳಿಂದ ಕನ್ನಡ ಚಿತ್ರರಂಗಕ್ಕೆ ನೀಡಿದ ಅಪಾರ ಕೊಡುಗೆ, ಅವರ ಸಂಗೀತ ವೈವಿಧ್ಯತೆ ಮತ್ತು ಸಾಹಿತ್ಯದ ಶ್ರೀಮಂತಿಕೆಯನ್ನು ಪರಿಗಣಿಸಿ ಈ ಗೌರವಕ್ಕೆ ಆಯ್ಕೆ ಮಾಡಲಾಗಿದೆ.
https://www.newsics.com/2026/02/06/supreme-court-lifts-9-year-ban-on-anurag-thakur/