https://youtube.com/shorts/8CqHwGKEL5g?si=1-oJ_JGuSNaYETpQ
Subscribe ನ್ಯೂಸಿಕ್ಸ್ ಕನ್ನಡ
newsics.com
ನಕಲಿ ಸುದ್ದಿ ಮತ್ತು ಸಮಾಜ ವಿರೋಧಿ ಡಿಜಿಟಲ್ ಕಂಟೆಂಟ್ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದೆ.
67.26 ಕೋಟಿ ರೂ. ವೆಚ್ಚದಲ್ಲಿ ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್ ಎಂಬ AI ಆಧಾರಿತ ಸಾಫ್ಟ್‌ವೇರ್ ಅಭಿವೃದ್ಧಿಗೆ ಸಂಪುಟ ಅನುಮೋದನೆ ನೀಡಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್ಕೆ ಪಾಟೀಲ್, ಸಾಂಪ್ರದಾಯಿಕ ವಿಧಾನಗಳ ಮೂಲಕ ನಕಲಿ ಸುದ್ದಿಗಳನ್ನು ತಡೆಯಲು ಆಗುತ್ತಿಲ್ಲ. ಹೀಗಾಗಿ, ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನು ಬಳಸುವ ಅಗತ್ಯ ಎದುರಾಗಿದೆ ಎಂದು ತಿಳಿಸಿದರು.
ಸೋಶಿಯಲ್ ಮೀಡಿಯಾ ಅನಾಲಿಟಿಕ್ಸ್ ಸೊಲ್ಯೂಷನ್ಸ್’ ಸಾಫ್ಟ್‌ವೇರ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಡುವ ಡಿಜಿಟಲ್ ಕಂಟೆಂಟ್ಗಳನ್ನು ವಿಶ್ಲೇಷಿಸಲಿದೆ. ಭಯೋತ್ಪಾದನೆ, ದ್ವೇಷ ಭಾಷಣ, ಕೋಮು ಹಿಂಸಾಚಾರಕ್ಕೆ ಪ್ರಚೋದನೆ, ಮಕ್ಕಳ ಅಪಹರಣ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವ ಸಮಾಜ ವಿರೋಧಿ ಚಟುವಟಿಕೆಗಳನ್ನು ಗುರುತಿಸಲಿದೆ. ಅಲ್ಲದೆ, ನಕಲಿ ಸುದ್ದಿಗಳ ಮೂಲವನ್ನು ಪತ್ತೆಹಚ್ಚುವ ಸಾಮರ್ಥ್ಯವೂ ಈ ತಂತ್ರಜ್ಞಾನಕ್ಕಿರಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.