https://youtube.com/shorts/kv9in5qxZnE?si=PN7byw9veLqq499c
Subscribe ನ್ಯೂಸಿಕ್ಸ್ ಕನ್ನಡ
newsics.com
ಶಿವಮೊಗ್ಗ: ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ವಸಂತ್ ನಾಯ್ಕ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ. ಸದ್ಯ ಸುಚಿತ್ರಾ ಮತ್ತು ಕಮಲಾಕರ್ ಭಟ್ ಗ್ಯಾಂಗ್ ಜೈಲು ಪಾಲಾಗಿದ್ದಾರೆ. ಆದರೆ ಜ್ಯೋತಿಷಿ ಕಮಲಾಕರ್ ಭಟ್ ಮತ್ತು ಸುಚಿತ್ರಾ ಮಾತನಾಡಿರುವ ಆಡಿಯೋ ಭಾರೀ ವೈರಲ್ ಆಗಿದೆ. ಇದೀಗ ಪೊಲೀಸರ ತನಿಖೆಯ ವೇಳೆ ಸುಚಿತ್ರಾಳ ಮೊಬೈಲ್ ಫೋನ್ ಪರಿಶೀಲನೆ ನಡೆಸಿದಾಗ, ಕಲಬುರಗಿ, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲ ಯುವಕರೊಂದಿಗೆ ಅವಳು ನಿರಂತರ ಸಂಪರ್ಕದಲ್ಲಿದ್ದ ವಿಚಾರ ಬೆಳಕಿಗೆ ಬಂದಿದೆ.
ಈ ಬೆನ್ನಲ್ಲೇ ಆತಂಕಕ್ಕೊಳಗಾದ ಯುವಕರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲೀಟ್ ಮಾಡಿದ್ದು, ಇನ್ನೂ ಕೆಲವರು ತಮ್ಮ ಮೊಬೈಲ್ಗಳನ್ನೇ ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ.
ಇತ್ತ ಶಿವಮೊಗ್ಗದಲ್ಲಿ ಸುಚಿತ್ರಾಳ ಪತಿ ಹಾಗೂ ಮಗಳು ಮಾಧ್ಯಮಗಳ ಮುಂದೆ ನೀಡಿದ ಹೇಳಿಕೆಗಳು ಯುವಕರನ್ನು ಇನ್ನಷ್ಟು ದಂಗು ಮಾಡಿವೆ. ಸುಚಿತ್ರಾಳ ಮೊಬೈಲ್ ಚೆಕ್ ಮಾಡಿದ್ರೆ ಇವಳ ಬಗ್ಗೆ ಅಸಹ್ಯ ಆಗುತ್ತೆ. ಬೇರೆ ಬೇರೆ ಹುಡುಗರ ಜೊತೆ ಇವಳು ನಿತ್ಯ ಸಂಪರ್ಕದಲ್ಲಿ ಇದ್ದಳು ಎಂದು ಆಕೆಯ ಪತಿ ಹೇಳಿಕೆ ನೋಡಿದ ಬೆನ್ನಲ್ಲೇ ಕೆಲವರು ತಮ್ಮ ಇನ್ಸ್ಟಾಗ್ರಾಂ ಖಾತೆಗಳನ್ನು ಡಿಲಿಟ್ ಮಾಡಿಕೊಂಡರೆ, ಇನ್ನೂ ಕೆಲವರು ಮೊಬೈಲ್ಗಳನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಮ್ಮ ಹೆಸರು ತನಿಖೆಯಲ್ಲಿ ಹೊರಬೀಳಬಹುದೆಂಬ ಆತಂಕದಲ್ಲಿ ಯುವಕರು ಸಿಲುಕಿದ್ದಾರೆ.
https://www.newsics.com/2026/02/06/topper-davangere-engineering-student-takes-monastic-vows/