newsics.com
ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯಾಗಿ ಪಾದಯಾತ್ರೆ ಹಮ್ಮಿಕೊಂಡಿದ್ದು, ಸದ್ಯ ರಾಜ್ಯ ಸರ್ಕಾರದ ಹೋರಾಟಕ್ಕಿಂತಲೂ ಮೈತ್ರಿ ಪಕ್ಷದ ಕಾರ್ಯಕರ್ತರನ್ನು ನಿಭಾಯಿಸುವುದೇ ನಾಯಕರಿಗೆ ಸವಾಲಾಗಿ ಪರಿಣಮಿಸಿದೆ.
ಬಿಜೆಪಿ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಒಲ್ಲದ ಮನಸ್ಸಿನಿಂದಲೇ ಜೆಡಿಎಸ್ ಭಾಗಿಯಾಗಿದ್ದು, ಇದೀಗ ಎರಡೂ ಪಕ್ಷಗಳಿಗೆ ದುಬಾರಿಯಾಗಿ ಪರಿಣಮಿಸಿದೆ. ಮಂಡ್ಯದಲ್ಲಿ ನಡೆಯುತ್ತಿದ್ದ ಪಾದಯಾತ್ರೆ ವೇಳೆ ಬಿಜೆಪಿ ಮಾಜಿ ಶಾಸಕ ಪ್ರೀತಂ ಗೌಡ ಮತ್ತು ಎಚ್‌ಡಿ ಕುಮಾರಸ್ವಾಮಿ ಬೆಂಬಲಿಗರು ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಎಚ್‌ಡಿ ಕುಮಾರಸ್ವಾಮಿ ಕೋಟೆ ಮಂಡ್ಯದಲ್ಲಿ ಪ್ರೀತಂ ಗೌಡ ಹವಾ ಮೆರೆದಿದ್ದು, ಎಚ್‌ಡಿಕೆ ವಿರೋಧದ ಮಧ್ಯೆಯೂ ಮಂಡ್ಯಕ್ಕೆ ಬಂದು ಶಕ್ತಿ ಪ್ರದರ್ಶನ ಮಾಡಿದ್ದಾರೆ. ಈ ವೇಳೆ ಎಚ್‌ಡಿಕೆ ಮತ್ತು ಪ್ರೀತಂಗೌಡ ಬೆಂಬಲಿಗರ ಮಧ್ಯೆ ವಾಗ್ವಾದ ಉಂಟಾಗಿ ಕೈ ಕೈ ಮಿಲಾಯಿಸಿಕೊಂಡಿದ್ದಾರೆ.