Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗರ್ಭಪಾತ ಮಹಿಳೆಯ ವೈಯಕ್ತಿಕ ಹಕ್ಕು – ಸುಪ್ರೀಂಕೋರ್ಟ್
ದೇಶಪ್ರಮುಖ

ಗರ್ಭಪಾತ ಮಹಿಳೆಯ ವೈಯಕ್ತಿಕ ಹಕ್ಕು – ಸುಪ್ರೀಂಕೋರ್ಟ್

Share
1 Min Read
SHARE

https://youtube.com/shorts/j6ilMdnEwVU?si=A6Xf6V0cor6Q4zvB

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಗರ್ಭ ಧರಿಸುವುದು ಅಥವಾ ಬೇಡವಾದ ಗರ್ಭವನ್ನು ತೆಗೆಸಿಕೊಳ್ಳುವುದು ಮಹಿಳೆಯ ಸಂಪೂರ್ಣ ವೈಯಕ್ತಿಕ ಹಕ್ಕು. ಮಗುವನ್ನು ಹೆರಲು ಇಷ್ಟವಿಲ್ಲದ ಮಹಿಳೆಯನ್ನು, ಅದರಲ್ಲೂ ವಿಶೇಷವಾಗಿ ಅಪ್ರಾಪ್ತ ಬಾಲಕಿಯನ್ನು ಗರ್ಭ ಮುಂದುವರಿಸುವಂತೆ ಒತ್ತಾಯಿಸುವ ಅಧಿಕಾರ ನ್ಯಾಯಾಲಯಗಳಿಗಿಲ್ಲ ಎಂದು ಸುಪ್ರೀಂಕೋರ್ಟ್ ದೃಢವಾಗಿ ಹೇಳಿದೆ.

ಗರ್ಭಧಾರಣೆಯನ್ನು ಮುಂದುವರಿಸಲು ಅವಳನ್ನು ಒತ್ತಾಯಿಸಲು ಸಾಧ್ಯವಿಲ್ಲ ಎಂದು 30 ವಾರಗಳ ಗರ್ಭಿಣಿಯ ಗರ್ಭಪಾತಕ್ಕೆ ಸುಪ್ರೀಂ ಅನುಮತಿ ನೀಡಿದೆ. ನ್ಯಾಯಾಲಯಗಳು ಮಹಿಳೆ, ವಿಶೇಷವಾಗಿ ಅಪ್ರಾಪ್ತ ವಯಸ್ಕ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಮಹಾರಾಷ್ಟ್ರದ 17 ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳು ನೆರೆಮನೆಯ ಹುಡುಗನೊಂದಿಗಿನ ಸಂಬಂಧದಿಂದ ಗರ್ಭಿಣಿಯಾಗಿದ್ದಳು. ತಾನು ಮಗುವಿಗೆ ಜನ್ಮ ನೀಡಲು ಸಿದ್ಧವಿಲ್ಲ ಎಂದು ಆಕೆ ಗರ್ಭಪಾತಕ್ಕೆ ಅನುಮತಿ ಕೋರಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದಳು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಬಿ.ವಿ. ನಾಗರತ್ನ ಮತ್ತು ಉಜ್ವಲ್ ಭುಯಾನ್ ಅವರ ಪೀಠವು ಬಾಲಕಿಯ ಪರವಾಗಿ ತೀರ್ಪು ನೀಡಿದೆ.

ಗರ್ಭಧಾರಣೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂದು ನಿರ್ಧರಿಸುವ ಹಕ್ಕು ಆ ತಾಯಿಗೆ ಸೇರಿದ್ದು. ಇಲ್ಲಿ ಸಂಬಂಧವು ಪರಸ್ಪರ ಒಪ್ಪಿಗೆಯಿಂದ ನಡೆದಿದೆಯೇ ಅಥವಾ ಲೈಂಗಿಕ ದೌರ್ಜನ್ಯದಿಂದ ನಡೆದಿದೆಯೇ ಎನ್ನುವುದಕ್ಕಿಂತ, ಆಕೆಯ ಸಂತಾನೋತ್ಪತ್ತಿ ಸ್ವಾಯತ್ತತೆ  ಮುಖ್ಯವಾಗುತ್ತದೆ ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.

ಮುಂಬೈನ ಜೆಜೆ ಆಸ್ಪತ್ರೆಯ ವೈದ್ಯಕೀಯ ಮಂಡಳಿಯು ತನ್ನ ವರದಿಯಲ್ಲಿ, ಗರ್ಭಧಾರಣೆ ಮುಂದುವರಿದರೆ ತಾಯಿ ಅಥವಾ ಮಗುವಿನ ಜೀವಕ್ಕೆ ಯಾವುದೇ ಅಪಾಯವಿಲ್ಲ ಎಂದು ಹೇಳಿತ್ತು. ಆದರೆ, ನ್ಯಾಯಾಲಯವು ವೈದ್ಯಕೀಯ ಅಂಶಗಳಿಗಿಂತ ಬಾಲಕಿಯ ಮಾನಸಿಕ ಸಿದ್ಧತೆ ಮತ್ತು ಘನತೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿತು. ಒಂದು ವೇಳೆ ಕಾನೂನುಬದ್ಧವಾಗಿ ಸುರಕ್ಷಿತ ಗರ್ಭಪಾತಕ್ಕೆ ಅವಕಾಶ ನೀಡದಿದ್ದರೆ, ಜನರು ಅಸುರಕ್ಷಿತ ಮತ್ತು ಅನಧಿಕೃತ ಹಾದಿ ತುಳಿಯಬಹುದು, ಇದು ಬಾಲಕಿಯ ಪ್ರಾಣಕ್ಕೆ ಸಂಚಕಾರ ತರಬಹುದು ಎಂದು ನ್ಯಾಯಮೂರ್ತಿ ನಾಗರತ್ನ ಅವರು ಆತಂಕ ವ್ಯಕ್ತಪಡಿಸಿದರು.

https://www.newsics.com/2026/02/07/want-your-face-to-glow-apply-this-on-your-face-before-going-to-bed-at-night/

TAGGED:Abortion is a woman's personal right - Supreme Court
Share This Article
Facebook Twitter Copy Link Print
Previous Article Health care ನಿಮ್ಮ ಮುಖ ಫಳಫಳ ಹೊಳೆಯಬೇಕೇ? ರಾತ್ರಿ ಮಲಗುವ ಮೊದಲು ಇದನ್ನು ಮುಖಕ್ಕೆ ಹಚ್ಚಿ
Next Article ಒಂದೇ ಕುಟುಂಬದ ನಾಲ್ವರು ನೇಣು ಬಿಗಿದ ಸ್ಥಿತಿಯಲ್ಲಿ  ಪತ್ತೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?