Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ – ನಟಿ ಗೆಳೆಯ ಬಂಧನ
ಕರ್ನಾಟಕಪ್ರಮುಖಮನರಂಜನೆ

ಉದ್ಯಮಿ ಅರವಿಂದ್‌ ರೆಡ್ಡಿಗೆ ಬೆದರಿಕೆ – ನಟಿ ಗೆಳೆಯ ಬಂಧನ

Share
2 Min Read
SHARE

https://youtube.com/shorts/j6ilMdnEwVU?si=zmhmirtwo-4Y6IAU

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು: ಉದ್ಯಮಿ ಅರವಿಂದ್‌ ವೆಂಕಟೇಶ್‌ ರೆಡ್ಡಿ ಅವರಿಗೆ ಬೆದರಿಕೆ ಹಾಕಿದ ಪ್ರಕರಣದಲ್ಲಿ ಸ್ಯಾಂಡಲ್‌ವುಡ್‌ ನಟಿಯೊಬ್ಬರ ಸ್ನೇಹಿತ ವೈಶಾಕ್‌ ಎಂಬುವವರನ್ನು ಎಚ್‌ಎಎಲ್‌ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ತ ನಟಿ ಲೈಂಗಿಕ ಕಿರುಕುಳ ನೀಡಿದ ಸಂಬಂಧ ಆರೋಪಿ ವಿರುದ್ಧ ಆರ್‌ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಬಳಿಕ ಈ ಪ್ರಕರಣ ಗೋವಿಂದರಾಜನಗರ ಪೊಲೀಸ್ ಠಾಣೆಗೆ ವರ್ಗಾವಣೆಗೊಂಡಿತ್ತು. ವಿಚಾರಣೆ ನಡೆಸಿದ ಪೊಲೀಸರು, ಆರೋಪಿಯನ್ನು 46 ಎಸಿಎಂಎಂ ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಜಾಮೀನು ಮಂಜೂರು ನೀಡಿದೆ.

ಅರವಿಂದ ರೆಡ್ಡಿ ಅವರಿಗೆ ಜನವರಿಯಲ್ಲಿ ಆರೋಪಿ ವೈಶಾಕ್‌ ಅವರು ಕೊರಿಯರ್ ಮೂಲಕ ಬೆದರಿಕೆ ಪತ್ರ ಕಳುಹಿಸಿದ್ದರು. ವಿಳಾಸ ಹಾಗೂ ಸಹಿ ಇಲ್ಲದ ಅನಾಮಧೇಯ ಬೆದರಿಕೆ ಪತ್ರವಾಗಿತ್ತು. ‘ನಟಿಯ ಜತೆಗೆ ಇರುವ ಜಗಳವನ್ನು ಬಗೆಹರಿಸಿಕೊಳ್ಳಬೇಕು. ಇಲ್ಲದಿದ್ದರೆ ನನ್ನ ಗ್ಯಾರೇಜ್‌ಗೆ ₹6ರಿಂದ ₹7 ಕೋಟಿ ಕಳುಹಿಸಬೇಕು. ಬೇಡಿಕೆ ಈಡೇರಿಸದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಈ ಬೆದರಿಕೆ ಪತ್ರದ ವಿರುದ್ಧ ಅರವಿಂದ ರೆಡ್ಡಿ ಅವರು ದೂರು ನೀಡಿದ್ದರು. ಈ ಸಂಬಂಧ ಎಚ್‌ಎಎಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು’ ಎಂದು ಪೊಲೀಸರು ಹೇಳಿದರು.

 

‘ಕಾರ್ಯಾಚರಣೆ ಆರಂಭಿಸಿದಾಗ ಬನಶಂಕರಿ ಬಳಿಯ ಬ್ಲೂ–ಡಾರ್ಟ್ ಕೊರಿಯರ್ ಮೂಲಕ ಪತ್ರ ಬಂದಿರುವುದು ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಲಾಯಿತು. ಗ್ಯಾರೇಜ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಯುವಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಯಿತು. ‘ಮಾಲೀಕರು ಹೇಳಿದಂತೆ ನಾನು ಪತ್ರ ಕೊರಿಯರ್ ಮಾಡಿದ್ದೇನೆ. ಇದನ್ನು ಹೊರತುಪಡಿಸಿ ಹೆಚ್ಚಿನ ಮಾಹಿತಿ ತಿಳಿದಿಲ್ಲ’ ಎಂದು ಯುವಕ ಹೇಳಿದ್ದರು. ಈ ಮಾಹಿತಿಯ ಆಧಾರದಲ್ಲಿ ಗ್ಯಾರೇಜ್ ಮಾಲೀಕನ ಬಗ್ಗೆ ಮಾಹಿತಿ ಕಲೆ ಹಾಕಲಾಯಿತು. ವೈಶಾಕ್ ಅವರು ಪತ್ರ ಕಳುಹಿಸಿರುವುದು ಎಂಬುದು ಪತ್ತೆಯಾಗಿ ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಉದ್ಯಮಿ, ನಿರ್ಮಾಪಕ ಅರವಿಂದ ರೆಡ್ಡಿ ಹಾಗೂ ಸ್ಯಾಂಡಲ್‌ವುಡ್‌ ನಟಿಯ ನಡುವೆ ಈ ಹಿಂದೆ ಗಲಾಟೆ ಆಗಿತ್ತು. ಅರವಿಂದ್‌ ರೆಡ್ಡಿ ವಿರುದ್ಧ ನಟಿ ದೂರು ನೀಡಿದ್ದರು. ಅರವಿಂದ್ ರೆಡ್ಡಿ ಅವರ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆ ಆಗಿದ್ದರು’ ಎಂದು ಪೊಲೀಸರು ಹೇಳಿದರು.

ಅದರಂತೆ ಆರೋಪಿ ಬಂಧನಕ್ಕೆ ಎಸಿಪಿ ಚಂದನ್ ಮತ್ತು ಸುಬ್ರಹ್ಮಣಿ ತಂಡ ರಚಿಸಲಾಗಿತ್ತು.ಈ ಮೊದಲು ಆರೋಪಿ ಬಂಧನಕ್ಕೆ ಪೊಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಆದರೆ ಇಂದು (ನ.15) ಬೆಳಗಿನ ಜಾವ ಶ್ರೀಲಂಕಾದಿಂದ ಬರುವಾಗ ಆರೋಪಿಯನ್ನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

TAGGED:Businessman Arvind Reddy threatened - actress's boyfriend arrested
Share This Article
Facebook Twitter Copy Link Print
Previous Article ಯುವತಿ ಜತೆ ಶಿಕ್ಷಕನ ಕಾಮದಾಟ – ಯುವಕರಿಂದ ಬಿತ್ತು ಗೂಸಾ
Next Article Suspected terrorist died ಪರಪ್ಪನ ಅಗ್ರಹಾರ ಜೈಲಲ್ಲಿ ಶಂಕಿತ ಉಗ್ರ ಸಾದಿಕ್ ಪಾಷಾ ಸಾ*ವು

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?