Subscribe ನ್ಯೂಸಿಕ್ಸ್ ಕನ್ನಡ
newsics.com
ಚಳಿಯ ಸಹವಾಸ ಅನ್ನುವಷ್ಟರ ಮಟ್ಟಿಗೆ ಈ ಥಂಡಿ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಕಳೆದ ಎರಡು ಮೂರು ತಿಂಗಳಿಂದ ಚಳಿಯ ಅಬ್ಬರಕ್ಕೆ ರಾಜ್ಯದ ಜನತೆ ಮುದುಡಿಹೋಗಿದ್ದಾರೆ.
ಸಾಮಾನ್ಯವಾಗಿ ಜನವರಿ ಮುಗಿದು ಫೆಬ್ರವರಿ ಕಾಲಿಡುತ್ತಿದ್ದಂತೆ, ರಾಜ್ಯದಲ್ಲಿ ಚಳಿಯ ತೀವ್ರತೆ ಕಡಿಮೆಯಾಗಿ, ಮೆಲ್ಲಗೆ ಬಿಸಿಲ ಝಳ ಆರಂಭವಾಗುತ್ತಿತ್ತು. ಆದರೆ, ಈ ಬಾರಿ ಪ್ರಕೃತಿ ತನ್ನ ನಿಯಮವನ್ನೇ ಬದಲಿಸಿದಂತಿದೆ. ಮುಗಿಯುತ್ತಲೇ ಇಲ್ಲ ಈ ಚಳಿಗಾಲ ಎಂದು ಜನ ಸಾಮಾನ್ಯರು ಉದ್ಗರಿಸುವಂತಾಗಿದೆ.
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿತೀವ್ರ ಚಳಿಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಬೆಂಗಳೂರಿನ ತಾಪಮಾನ ಕನಿಷ್ಠ 15°C ಇದ್ದು, ಗರಿಷ್ಠ 30°C ಇರಲಿದೆ ಎಂದು ಇಲಾಖೆ ತಿಳಿಸಿದೆ. ಈ ರೀತಿಯ ತೀವ್ರ ಚಳಿಯಿಂದ ಜನರ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದು, ಬೆಚ್ಚಗಿನ ಹೊದಿಕೆ ಹೊತ್ತುಕೊಳ್ಳಬೇಕು ಹಾಗೂ ಬಿಸಿ ಆಹಾರ ಸೇವನೆ ಮಾಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಇಂದು ನಗರದಲ್ಲಿ ಎಂದಿನಂತೆ ಚಳಿಯ ವಾತಾವರಣವಿರುವುದರಿಂದ ಮಕ್ಕಳಿಂದ ಹಿಡಿದು ವೃದ್ಧರವರೆಗೂ ಎಚ್ಚರಿಕೆಯಿಂದಿರುವಂತೆ ಸಲಹೆ ನೀಡಿರುವ ಹವಾಮಾನ ಇಲಾಖೆ ತಿಳಿಸಿದೆ.