https://youtube.com/shorts/fUqc-HD4bis?si=3mQLhkhAPpT2YTtw
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು : ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆ ಕುರಿತಾಗಿ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ನಡುವೆ ತೀವ್ರ ಹಗ್ಗ ಜಗ್ಗಾಟ ನಡೆದಿತ್ತು. ಸೋಮವಾರದಿಂದ ಆರಂಭವಾಗಲಿರುವ ರಾಜ್ಯ ಸರ್ಕಾರದ ಅನ್ಯಾಯದ ಬೆಂಗಳೂರು ಮೆಟ್ರೋ ಟಿಕೆಟ್ ದರ ಏರಿಕೆಯ ವಿರುದ್ಧ ನಿನ್ನೆ ಸಂಸದ ತೇಜಸ್ವಿ ಸೂರ್ಯ ಕೇಂದ್ರ ಸಚಿವರನ್ನು ಭೇಟಿ ಮಾಡಿ ಈ ಬಗ್ಗೆ ಮಾಹಿತಿ ನೀಡಿದ್ದರು.
ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಾವು ಮೆಟ್ರೋ ಪ್ರಯಾಣದ ದರ ಏರಿಕೆ ಮಾಡಿಲ್ಲ ಕೇಂದ್ರದವರು ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆದರೆ ಇದೀಗ ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್ ಸಿಕ್ಕಿದ್ದು ಕೇಂದ್ರ ಸರ್ಕಾರದ ಸೂಚನೆಯ ಮೇರೆಗೆ ಮೆಟ್ರೋ ಟಿಕೆಟ್ ಪ್ರಯಾಣದ ದರ ಏರಿಕೆಯನ್ನು ಬಿಎಂಆರ್ಸಿಎಲ್ ಕೈಬಿಟ್ಟಿದೆ.
ಹಾಗಾಗಿ ನಾಳೆಯಿಂದ ಮೆಟ್ರೋ ಟಿಕೆಟ್ ದರ ಏರಿಕೆ ಆಗೋದಿಲ್ಲ ಎಂದು ತಿಳಿದುಬಂದಿದೆ. ಈ ವಿಚಾರವಾಗಿ ಬಿಎಂಆರ್ಸಿಎಲ್ ಎಂಡಿ ರವಿಶಂಕರ್ ಅವರಿಗೆ ಕೇಂದ್ರ ಸರ್ಕಾರದಿಂದ ಇ-ಮೇಲ್ ಮೂಲಕ ಸೂಚನೆ ಬಂದಿದ್ದು, ನಾಳೆಯಿಂದ ಮೆಟ್ರೋ ಪ್ರಯಾಣದ ಟಿಕೆಟ್ ದರ ಏರಿಕೆ ಮಾಡಬೇಡಿ ಎಂದು ಇ-ಮೇಲ್ ಬಂದಿದೆ ಹಾಗಾಗಿ ನಾಳೆಯಿಂದ ಎಂದಿನಂತೆ ಈ ಹಿಂದಿನ ದರದಲ್ಲಿ ಮೆಟ್ರೋದಲ್ಲಿ ಪ್ರಯಾಣಿಸಬಹುದಾಗಿದೆ.
https://www.newsics.com/2026/02/08/bike-crashes-into-bridge-couple-daughter-die-on-the-spot/