https://youtube.com/shorts/fUqc-HD4bis?si=BTQaSysLhuDRvAiz
Subscribe ನ್ಯೂಸಿಕ್ಸ್ ಕನ್ನಡ
newsics.com
ಕಾರವಾರ: ನಗರದ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧೀನದಲ್ಲಿರುವ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ಪೋಕ್ಸೋ ಪ್ರಕರಣದ ಸಂತ್ರಸ್ತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸದ್ಯ ಬಾಲಕಿಯು ಕಾರವಾರದ ಕ್ರಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾಳೆ.
ಕಳೆದ ಆಗಸ್ಟ್ ತಿಂಗಳಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣವೊಂದರ ಸಂತ್ರಸ್ತೆಯಾಗಿದ್ದ ಈ ಬಾಲಕಿ, ಅಂದಿನಿಂದ ಬಾಲಮಂದಿರದ ಆಶ್ರಯದಲ್ಲಿದ್ದಳು. ಶನಿವಾರ ಮಧ್ಯಾಹ್ನ ಯಾರಿಗೂ ತಿಳಿಯದಂತೆ ಕಟ್ಟಡದ ಮೇಲಿನ ಕೋಣೆಗೆ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ತಕ್ಷಣ ಗಮನಿಸಿದ ಸಿಬ್ಬಂದಿ ಆಕೆಯನ್ನು ಕೆಳಗಿಳಿಸಿ ಆಸ್ಪತ್ರೆಗೆ ರವಾನಿಸಿದ್ದಾರೆ. ಕಳೆದ ಎರಡು ವಾರಗಳಿಂದ ತೀವ್ರ ಮಾನಸಿಕ ಖಿನ್ನತೆಯಲ್ಲಿದ್ದ ಈಕೆ ಶಾಲೆಗೂ ಹೋಗದೆ ಬಾಲಮಂದಿರದಲ್ಲೇ ಉಳಿದುಕೊಂಡಿದ್ದಳು ಎಂದು ತಿಳಿದುಬಂದಿದೆ.
ಭಾನುವಾರ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಬಾಲಕಿಯ ಆರೋಗ್ಯ ವಿಚಾರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಲಕಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೈದ್ಯರು ಕಟ್ಟುನಿಟ್ಟಿನ ನಿಗಾ ವಹಿಸಿದ್ದಾರೆ. ಪೋಷಕರಿಂದ ದೂರು ದಾಖಲಾಗಿದ್ದು, ಇಲಾಖಾ ಮಟ್ಟದಲ್ಲಿ ಮತ್ತು ಪೊಲೀಸ್ ಇಲಾಖೆಯಿಂದ ತನಿಖೆ ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದರು.
https://www.newsics.com/2026/02/09/indian-couple-starts-panipuri-business-in-london/