newsics.com
ಮುಂಬೈ: ನಟ ಅಕ್ಷಯ್ ಕುಮಾರ್ ಅವರು ದರ್ಗಾ 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಆಗಸ್ಟ್ 9ರಂದು ಅಕ್ಷಯ್ ಕುಮಾರ್ ಅಭಿನಯದ ‘ಖೇಲ್ ಖೇಲ್ ಮೇ’ ಚಿತ್ರ ತೆರೆಕಾಣಲಿದೆ. ಈ ಹಿನ್ನೆಲೆಯಲ್ಲಿ ಅವರು ಮುಂಬೈನ ಹಾಜಿ ಅಲಿ ದರ್ಗಾಗೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ದರ್ಗಾದ ನವೀಕರಣ ಕಾರ್ಯ ನಡೆಯುತ್ತಿದೆ. ಹಾಗಾಗಿ ಅಕ್ಷಯ್ ಕುಮಾರ್ ಅವರು 1.21 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ.
ಅಕ್ಷಯ್ ಕುಮಾರ್ ಅವರು ಸಮಾಜಮುಖಿ ಕಾರ್ಯಗಳಿಗೆ ತಮ್ಮ ಕೈಲಾದ ಸಹಾಯವನ್ನು ಮಾಡುತ್ತಾ ಬಂದಿದ್ದಾರೆ. ಸಿನಿಮಾಗಳು ಸತತವಾಗಿ ಸೋತಿದ್ದರೂ ಕೂಡ ಅವರ ಮನೋಭಾವದಲ್ಲಿ ಬದಲಾವಣೆ ಆಗಿಲ್ಲ. ಹಾಜಿ ಅಲಿ ದರ್ಗಾಗೆ ಕೋಟ್ಯಂತರ ರೂಪಾಯಿ ನೀಡಿದ್ದಕ್ಕೆ ಅನೇಕರು ಭೇಷ್ ಎಂದಿದ್ದಾರೆ.