https://youtube.com/shorts/Z1cy8EQaCVE?si=VK5NYvAE19o4RofW
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ(ಬಮೂಲ್) ನಂದಿನಿ ಉತ್ಪನ್ನಗಳಿಗೆ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಕುಮಾರ್, ಶಿವರಾಜ್ಕುಮಾರ್ ಹಾಗೂ ಪುನೀತ್ ರಾಜ್ಕುಮಾರ್ ಅವರಂತಹ ಮೇರು ವ್ಯಕ್ತಿಗಳ ಹಾದಿಯನ್ನು ಅನುಸರಿಸಿ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ಕೇವಲ ಅನುಕರಣೆಯಲ್ಲ, ಧನ್ಯತೆ ಮತ್ತು ಹೆಮ್ಮೆಯ ಜವಾಬ್ದಾರಿ. ಅವರಂತೆಯೇ ಉಚಿತವಾಗಿ ಪ್ರಚಾರ ಮಾಡಲು ಒಪ್ಪಿಕೊಂಡಿದ್ದೇನೆ’ ಎಂದು ಸುಧಾರಾಣಿ ತಿಳಿಸಿದ್ದಾರೆ.
ಕೆಎಂಎಫ್ ಆಕ್ಷೇಪ: ‘ಕರ್ನಾಟಕ ಹಾಲು ಮಹಾಮಂಡಳದ(ಕೆಎಂಎಫ್) ಬೈಲಾಗೆ ವಿರುದ್ದವಾಗಿ ಬೆಂಗಳೂರು ಹಾಲು ಒಕ್ಕೂಟ(ಬಮೂಲ್) ರಾಯಭಾರಿಯನ್ನು ನೇಮಕ ಮಾಡಿಕೊಂಡಿದೆ’ ಎನ್ನುವ ಆಕ್ಷೇಪ ವ್ಯಕ್ತವಾಗಿದೆ.
‘ಮಹಾಮಂಡಳದ ಗಮನಕ್ಕೂ ತಾರದೇ ನಂದಿನಿ ಉತ್ಪನ್ನಗಳ ರಾಯಭಾರಿಯನ್ನಾಗಿ ನಟಿ ಸುಧಾರಾಣಿಯನ್ನು ನೇಮಕ ಮಾಡಲಾಗಿದೆ. ಈ ಕುರಿತು ಬಮೂಲ್ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಗುವುದು’ ಎಂದು ಕೆಎಂಎಫ್ನ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.