Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Paris Olympics 2024 ಜಾವೆಲಿನ್ ಥ್ರೋ: ‘ಚಿನ್ನದ ಹುಡುಗ’ ನೀರಜ್‌ ಚೋಪ್ರಾಗೆ ಬೆಳ್ಳಿ, ಭಾರತಕ್ಕೆ ಮೊದಲ ‘ರಜತ’ ಸಂಭ್ರಮ
ದೇಶಪ್ರಮುಖವಿದೇಶ

Paris Olympics 2024 ಜಾವೆಲಿನ್ ಥ್ರೋ: ‘ಚಿನ್ನದ ಹುಡುಗ’ ನೀರಜ್‌ ಚೋಪ್ರಾಗೆ ಬೆಳ್ಳಿ, ಭಾರತಕ್ಕೆ ಮೊದಲ ‘ರಜತ’ ಸಂಭ್ರಮ

Share
2 Min Read
SHARE

newsics.com

ಪ್ಯಾರಿಸ್: ನೀರಜ್ ಚೋಪ್ರಾ ಅವರು ಶುಕ್ರವಾರ(ಆ.9) ಮುಂಜಾನೆ ಪ್ಯಾರಿಸ್ ಒಲಿಂಪಿಕ್ಸ್ 2024 ರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ 89.45 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದುಕೊಂಡರು.

ಈ‌ ಮೂಲಕ ಭಾರತಕ್ಕೆ ಮೊದಲ ಬೆಳ್ಳಿ ಪದಕ ತಂದುಕೊಟ್ಟರು. ಪುರುಷರ ಜಾವೆಲಿನ್ ಥ್ರೋ ಫೈನಲ್, ಒಲಿಂಪಿಕ್ಸ್ 2024ರಲ್ಲಿ ನೀರಜ್ ಚೋಪ್ರಾ ಒಲಿಂಪಿಕ್ಸ್ ಜಾವೆಲಿನ್ ಎಸೆತದಲ್ಲಿ 89.45 ಮೀ ಅತ್ಯುತ್ತಮ ಪ್ರಯತ್ನದೊಂದಿಗೆ ಬೆಳ್ಳಿ ಗೆದ್ದರು, ಪಾಕಿಸ್ತಾನದ ಅರ್ಷದ್ ನದೀಮ್ ಉತ್ತಮ ಪ್ರದರ್ಶನ ನೀಡಿದರು. ಅವರು ಹೊಸ ಒಲಿಂಪಿಕ್ ದಾಖಲೆಯ 92.97 ಮೀಟರ್ ಮಾರ್ಕ್ ಅನ್ನು ನಿರ್ಮಿಸಿ ಚಿನ್ನ ಪಡೆದರು.

ಈ ಮೂಲಕ ಅವರು ಈಗ ಪಾಕಿಸ್ತಾನದ ಮೊದಲ ವೈಯಕ್ತಿಕ ಒಲಿಂಪಿಕ್ ಚಿನ್ನದ ಪದಕ ವಿಜೇತರಾಗಿದ್ದಾರೆ.

ಅರ್ಷದ್ ನದೀಮ್ ಅವರು 2008 ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ ನಾರ್ವೆಯ ಆಂಡ್ರಿಯಾಸ್ ಥೋರ್ಕಿಲ್ಡ್‌ಸೆನ್ ಅವರು ಸ್ಥಾಪಿಸಿದ 90.57 ರ ಹಿಂದಿನ ಒಲಿಂಪಿಕ್ ದಾಖಲೆಯನ್ನು ಮುರಿದರು.
ಗ್ರೆನಡಾದ ಆ್ಯಂಡರ್ಸನ್ ಪೀಟರ್ಸ್ (88.54 ಮೀ) ಕಂಚು ಪಡೆದರು.

ಮೂರು ವರ್ಷಗಳ ಹಿಂದೆ ಟೋಕಿಯೊ ಸಮ್ಮರ್ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿದ್ದ ನೀರಜ್, ಮಂಗಳವಾರ ನಡೆದ ಪ್ಯಾರಿಸ್ ಒಲಿಂಪಿಕ್ಸ್‌ನ ಪುರುಷರ ಜಾವೆಲಿನ್ ಥ್ರೋ ಅರ್ಹತಾ ಸುತ್ತಿನ ಬಿ ಗುಂಪಿನಲ್ಲಿ 89.34 ಮೀಟರ್‌ಗಳ ಬೃಹತ್ ಎಸೆತವನ್ನು ದಾಖಲಿಸಿದರು.

ಈ ಮೂಲಕ ಒಲಿಂಪಿಕ್ ಕೂಟದಲ್ಲಿ ಎರಡು ಪದಕಗಳನ್ನು ಗೆದ್ದ ಭಾರತದ ಮೊದಲ ಅಥೀಟ್ ಎಂಬ ಹೆಗ್ಗಳಿಕೆಗೆ ನೀರಜ್ ಪಾತ್ರರಾದರು. ಈ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಒಲಿದ ಒಟ್ಟಾರೆ ಐದನೇ ಪದಕ ಇದಾಗಿದೆ. ಅಲ್ಲದೇ ಇದು ಮೊದಲ ಬೆಳ್ಳಿಯಾಗಿದ್ದು, ಉಳಿದ ನಾಲ್ಕು ಕಂಚಿನ ಪದಕಗಳಾಗಿವೆ.

2020ರ ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್‌ ಇಲ್ಲಿಯೂ ಅದೇ ಸಾಧನೆ ಮಾಡುವ ಆತ್ಮವಿಶ್ವಾಸದಲ್ಲಿದ್ದರು. ಆದರೆ ಗುರುವಾರ ರಾತ್ರಿ ಅವರಿಗೆ ಲಯ ಕೈಕೊಟ್ಟಿತು. ಆರು ಅವಕಾಶಗಳಲ್ಲಿ ಅವರು ಐದರಲ್ಲಿ ಫೌಲ್ ಮಾಡಿದರು. ಒಂದರಲ್ಲಿ ಮಾತ್ರ 89.45 ಮೀಟರ್ಸ್ ದೂರ ಜಾವೆಲಿನ್ ಥೋ ಮಾಡಿದರು.

ಆದರೆ, ನೀರಜ್ ಅವರ ‘ಸ್ನೇಹಿತ’ ನದೀಂ ಅವರಿಗೆ ಅದೃಷ್ಟ ಜತೆಗೂಡಿತು. 92.97 ಮೀ. ದೂರ ಎಸೆದು ಚಿನ್ನದ ಪದಕ ಜಯಿಸಿದರು. ಇದು ಒಲಿಂಪಿಕ್ ಕೂಟ ದಾಖಲೆಯೂ ಆಗಿದೆ. ಪಾಕಿಸ್ತಾನಕ್ಕೆ ಇದು ಮೊದಲ ಒಲಿಂಪಿಕ್ ಚಿನ್ನದ ಪದಕವಾಗಿದೆ.

ಗ್ರೆನೆಡಾದ ಆ್ಯಂಡರ್ಸನ್ ಪೀಟರ್ 88.54 ಮೀಟರ್ಸ್ ದೂರ ಥೋ ಮಾಡಿ ಕಂಚು ಗಳಿಸಿದರು.

ಕಣ್ಣು ತೆರೆದ ಮೂಕಾಂಬಿಕಾ ದೇವಿ, ಭಕ್ತರೆದುರೇ ನಡೆಯಿತಂತೆ ಪವಾಡ! ಎಲ್ಲೆಡೆ ಈಗ ಇದೇ ಸುದ್ದಿ…

ಕಂಚಿನ ಪದಕ ಮುಡಿಗೇರಿಸಿಕೊಂಡ ಭಾರತೀಯ ಪುರುಷರ ಹಾಕಿ ತಂಡ

TAGGED:Paris Olympics 2024 Javelin Throw: Silver for 'Golden Boy' Neeraj Chopra
Share This Article
Facebook Twitter Copy Link Print
Previous Article ಅಕ್ರಮ ಸಂಬಂಧ: ವ್ಯಕ್ತಿಯ ಬೆರಳು‌ಗಳನ್ನು ಕಟ್ ಮಾಡಿದ್ರು, ಮೂಳೆ ಮುರಿದರು, ಕಣ್ಣು ಕಿತ್ತರು, ಮರ್ಮಾಂಗ ಕತ್ತರಿಸಿ ಕೊಂದರು…
Next Article ಶುಭೋದಯ, ಇಂದಿನ ಪಂಚಾಂಗ 09-08-2024 ಶುಕ್ರವಾರ, ಇಂದು ನಾಗರಪಂಚಮಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ವಿದೇಶ

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?