Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೆ ಪವರ್​ ಪಾಲಿಟಿಕ್ಸ್ ಶುರು – ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೆ ಪವರ್​ ಪಾಲಿಟಿಕ್ಸ್ ಶುರು – ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ

Share
2 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ದು ಮತ್ತೆ ಜೋರಾಗಿದೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜಹಟ್ಟಿಹೊಳಿ ಹೇಳಿದರೆ, ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್‌, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ನಡುವೆ ಕಾಂಗ್ರೆಸ್‌‍ ನಲ್ಲೂ ರೆಸಾರ್ಟ್‌ ರಾಜಕೀಯ ಶುರುವಾಗಲಿದೆ. ಗೋವಾದ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌‍ನ ಪ್ರಭಾವಿ ನಾಯಕರೊಬ್ಬರು 50ಕ್ಕೂ ಹೆಚ್ಚು ರೂಮ್‌ಗಳನ್ನೂ ಕಾಯ್ದಿರಿಸಿದ್ದಾರೆ ಎಂಬ ವದಂತಿಯೂ ಹರಿದಾಡಿತ್ತು. ಆದರೆ ಅದನ್ನು ತಳ್ಳಿ ಹಾಕಲಾಗಿದೆ.

ರಾಜಕೀಯ ಭಿನ್ನರಾಗಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ ಇಬ್ಬರ ನಡುವೆ ಅಷ್ಟೇನೂ ಮಾತುಕತೆ ನಡೆಯಲಿಲ್ಲ. ಒಬ್ಬರಿಗೊಬ್ಬರು ಔಪಚಾರಿಕವಾಗಿ ಮಾತುಕತೆ ನಡೆಸಿದರಾದರೂ, ಮೊದಲಿನ ಅನ್ಯೋನ್ಯತೆ ಕಂಡು ಬರಲಿಲ್ಲ. ಇಬ್ಬರು ತಮ್ಮ ಪಾಡಿಗೆ ತಾವು ಅನ್ಯಮನಸ್ಕರಾಗಿ ವೇದಿಕೆಯಲ್ಲಿ ಕಾಣಿಸಿಕೊಂಡರು.

ಸಮಯ ಕಳೆಯಲು ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮ ಆಯೋಜಕರನ್ನು ಕರೆದು ಸಲಹೆ ಸೂಚನೆ ನೀಡುವ ಮೂಲಕ ಸಕ್ರಿಯವಾಗಿರಲು ಯತ್ನಿಸಿದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಅವರನ್ನೇ ನೋಡುತ್ತಲಿದ್ದರು. ಈ ಹಂತದಲ್ಲಿ ಸೌಜನ್ಯಕ್ಕಾದರೂ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಪರಸ್ಪರ ಮಾತನಾಡಲಿಲ್ಲ. ತಮ್ಮ ಪಾಡಿಗೆ ತಾವು ಇದ್ದು ಬಿಟ್ಟರು.

ಅಧಿಕಾರ ಹಂಚಿಕೆಯ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುತ್ತಿದ್ದ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ವರಿಷ್ಠರ ಭೇಟಿಯ ಬಳಿಕ ಕಾಲವೇ ಉತ್ತರ ನೀಡುತ್ತದೆ ಎಂದು ಹೇಳಲಾರಂಭಿಸಿದ್ಧಾರೆ.

ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಕಾಂಗ್ರೆಸ್‌‍ ಗೆಲ್ಲುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಮೊದಲೇ ಅಂದಾಜಿಸಿದ್ದರು ಎಂದರೆ ಅವರು ಎಷ್ಟು ಪೂರ್ವತಯಾರಿ ನಡೆಸಿದ್ದರು ಎಂದು ಊಹಿಸಬಹುದು. ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಮೆಲ್ಲರ ಬಯಕೆಯಾಗಿದೆ ಎಂದರು.

ಗೋವಾದಲ್ಲಿ ರೆಸಾರ್ಟ್‌ ರಾಜಕಾರಣ ಮಾಡಲು ತಯಾರಿಯಾಗಿದೆ ಎಂಬುದು ಸುಳ್ಳು, ಡಿ.ಕೆ.ಶಿವಕುಮಾರ್‌ ಹುಟ್ಟಾ ಕಾಂಗ್ರೆಸ್ಸಿಗರು. ಯಾವತ್ತೂ ಅವರು ಗುಂಪುಗಾರಿಕೆ ಮಾಡುವುದಿಲ್ಲ. ರೆಸಾರ್ಟ್‌ ರಾಜಕೀಯ ಕಾಂಗ್ರೆಸ್‌‍ನಲ್ಲಿ ಇಲ್ಲ. ಅಧಿಕಾರ ಹಂಚಿಕೆ ಹೈಕಮಾಂಡ್‌ ನ ನಿರ್ಧಾರಕ್ಕೆ ಸಂಬಂಧಿಸಿದ ವಿಷಯ. ಅವರು ಯಾವತ್ತೂ ಸಮಯ ನಿಗದಿ ಮಾಡುತ್ತಾರೋ ಅಂದು ನೆರವೇರಲಿದೆ ಎಂದು ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿರುವ ರಾಘವೇಂದ್ರ ಹಿಟ್ನಾಳ್‌, ಹೈಕಮಾಂಡ್‌ ನಾಯಕತ್ವ ಬದಲಾವಣೆಯಾಗಲಿದೆ ಎಂದು ಹೇಳಿಲ್ಲ. ಹಾಗೇ ಹೇಳದೆ ಇದ್ದರೆ ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತಾರೆ ಎಂಬ ವಿಶ್ವಾಸ ನಮಲ್ಲಿದೆ. ಸಚಿವ ಸಂಪುಟ ಪುನರ್‌ ರಚನೆಯೂ ಶೀಘ್ರದಲ್ಲೇ ನಡೆಯಲಿದೆ. ತಮಗೂ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

https://www.newsics.com/2026/02/14/learn-ai-or-leave-the-company-googles-advice-to-employees/

 

TAGGED:Power politics has started again in the state - CM-DCM's move has aroused curiosity
Share This Article
Facebook Twitter Copy Link Print
Previous Article ಎಐ ಕಲಿಯಿರಿ, ಇಲ್ಲ ಕಂಪೆನಿ ಬಿಡಿ – ಉದ್ಯೋಗಿಗಳಿಗೆ ‘ಗೂಗಲ್’ ಸೂಚನೆ!
Next Article ಒಂದು ಹುಡುಗನಿಗಾಗಿ ಇಬ್ಬರು ಯುವತಿಯರು ಜಗಳ ಕೊಲೆಯಲ್ಲಿ ಅಂತ್ಯ

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?