https://youtube.com/shorts/74VSpekXhn4?si=vijWxjVUFibUVb68
Subscribe ನ್ಯೂಸಿಕ್ಸ್ ಕನ್ನಡ
newsics.com
ಗೂಗಲ್ ಮ್ಯಾಪ್ ಎಡವಟ್ಟಿನಿಂದ ಕಾರೊಂದು ಹೊಳೆಗೆ ಬೀಳುವ ಸ್ಥಿತಿಗೆ ತಲುಪಿದ ಘಟನೆ ಕೇರಳದ ಕೋಟ ಸಾೖಬ್ರಕಟ್ಟೆ ಮುಖ್ಯ ರಸ್ತೆಯ ಉಪ್ಲಾಡಿ ಹೊಳೆ ಬದಿಯಲ್ಲಿ ನಡೆದಿದೆ.
ಕೇರಳ ಮೂಲದ ಕುಟುಂಬವೊಂದು ಕೊಲ್ಲೂರು ಮೂಕಾಂಬಿಕೆ ದರ್ಶನಕ್ಕಾಗಿ ಪ್ರಯಾಣಿಸುತ್ತಿದ್ದು, ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚರಿಸುತ್ತಿದ್ದ ವೇಳೆ ಗೂಗಲ್ ಮ್ಯಾಪ್‌ನಲ್ಲಿ ತೋರಿದ ಡೈವರ್ಶನ್ ಅನುಸರಿಸಿ ಬ್ರಹ್ಮಾವರ ಬಳಿ ಬಾರಕೂರು ಮಾರ್ಗವಾಗಿ ಸಾೖಬ್ರಕಟ್ಟೆ ಮೂಲಕ ಕೋಟದತ್ತ ಸಾಗಿತ್ತು.
ಕಾರಿನಲ್ಲಿ ಮಹಿಳೆಯರು ಹಾಗೂ ಮಕ್ಕಳು ಸೇರಿದಂತೆ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆ ತಿಳಿದು ಸ್ಥಳಕ್ಕೆ ಧಾವಿಸಿದ ಕೋಟ ಪೊಲೀಸ್ ಸಿಬ್ಬಂದಿ ರಾಘವೇಂದ್ರ, ಆಂಬ್ಯುಲೆನ್ಸ್ ಚಾಲಕ ಕಿಶೋರ್ ಶೆಟ್ಟಿ ಅವರು ಸ್ಥಳೀಯರ ಸಹಕಾರದಿಂದ ಕಾರಿನಲ್ಲಿದ್ದವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಘಟನೆಗೆ ಸಂಬಂಧಿಸಿ ಕೋಟ ಠಾಣೆಯಲ್ಲಿಪ್ರಕರಣ ದಾಖಲಾಗಿದೆ.
2024ರಲ್ಲಿ ಕೇರಳದ ಕೊಟ್ಟಾಯಂನಲ್ಲಿ ಗೂಗಲ್ ಮ್ಯಾಪ್ ಅವಾಂತರದಿಂದಾಗಿ ತುಂಬಿ ಹರಿಯುತ್ತಿದ್ದ ಹಳ್ಳದೊಳಕ್ಕೆ ಇಳಿದ ಪ್ರವಾಸಿಗರ ಕಾರು ಘಟನೆಯನ್ನು ಇಲ್ಲಿ ಉದಾಹರಣೆಯಾಗಿ ಕೊಡಬಹುದು.