https://youtube.com/shorts/74VSpekXhn4?si=vijWxjVUFibUVb68
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಅವರು ಪ್ರಮಾಣವಚನ ಸ್ವೀಕರಿಸಲಿರುವ ಕಾರ್ಯಕ್ರಮದಲ್ಲಿ ಭಾರತದ ಪರವಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರು ಭಾಗವಹಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಭಾನುವಾರ ತಿಳಿಸಿದೆ.
ಫೆಬ್ರವರಿ 17ರಂದು ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಬಾಂಗ್ಲಾದೇಶ ಆಹ್ವಾನಿಸಿತ್ತು. ಆದರೆ, ಅಂದು ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಜೊತೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಕಾರಣ, ಲೋಕಸಭಾ ಸ್ಪೀಕರ್ ಅವರನ್ನು ಪ್ರತಿನಿಧಿಯಾಗಿ ಕಳುಹಿಸಲಾಗುತ್ತಿದೆ.
ವಿದೇಶಾಂಗ ಇಲಾಖೆ ಹೇಳಿಕೆ: ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷದ (ಬಿಎನ್ಪಿ) ಅಧ್ಯಕ್ಷ ತಾರಿಕ್ ರೆಹಮಾನ್ ಅವರು ಬಾಂಗ್ಲಾದೇಶದ ನೂತನ ಸರ್ಕಾರದ ಪ್ರಧಾನಿಯಾಗಿ ಫೆಬ್ರವರಿ 17ರಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಆ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈ ಕಾರ್ಯಕ್ರಮದಲ್ಲಿ ಸ್ಪೀಕರ್ ಭಾಗವಹಿಸುತ್ತಿರುವುದು ಭಾರತ ಮತ್ತು ಬಾಂಗ್ಲಾದೇಶದ ಜನರ ನಡುವಿನ ಆಳ ಮತ್ತು ಶಾಶ್ವತ ಸ್ನೇಹದ ಪ್ರತೀಕ. ಇದು ಎರಡು ರಾಷ್ಟ್ರಗಳು ಅನುಸರಿಸುತ್ತಿರುವ ಪ್ರಜಾಪ್ರಭುತ್ವ ಮೌಲ್ಯಗಳಿಗೆ ಭಾರತದ ಬದ್ಧತೆಯಾಗಿದೆ ಎಂದು ಎಂಇಎ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
13 ರಾಷ್ಟ್ರಗಳ ನಾಯಕರಿಗೆ ಆಹ್ವಾನ: ಬಾಂಗ್ಲಾದ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನಸ್, ಭಾರತ, ಚೀನಾ ಮತ್ತು ಪಾಕಿಸ್ತಾನ ಸೇರಿದಂತೆ 13 ದೇಶಗಳ ನಾಯಕರನ್ನು ಹೊಸ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ.
ರಾಜತಾಂತ್ರಿಕ ಮೂಲಗಳ ಪ್ರಕಾರ, ಸೌದಿ ಅರೇಬಿಯಾ, ಟರ್ಕಿ, ಯುನೈಟೆಡ್ ಅರಬ್ ಎಮಿರೇಟ್ಸ್, ಕತಾರ್, ಮಲೇಷ್ಯಾ, ಬ್ರೂನಿ, ಶ್ರೀಲಂಕಾ, ನೇಪಾಳ, ಮಾಲ್ಡೀವ್ಸ್ ಮತ್ತು ಭೂತಾನ್ ನಾಯಕರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ ಎಂದು ತಿಳಿದುಬಂದಿದೆ.
Luggage fare increase ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಲಗೇಜ್ ದರ ಹೆಚ್ಚಳ: ನಾಳೆಯಿಂದಲೇ ಜಾರಿ