https://youtube.com/shorts/74VSpekXhn4?si=vijWxjVUFibUVb68
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಕೆನಡಾದಲ್ಲಿ ಐಟಿ ಉದ್ಯೋಗಿ ಚಂದನ್ ಕುಮಾರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾತ್ರಿ ಸ್ವಗ್ರಾಮ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ತ್ಯಾಮಗೊಂಡ್ಲುಗೆ ಚಂದನ್ ಮೃತದೇಹ ತಲುಪಿದ್ದು, ತ್ಯಾಮಗೊಂಡ್ಲುವಿನ ಗ್ರಾಮೀಣ ಬ್ಯಾಂಕ್ ಸಮೀಪ ಅಂತಿಮ ದರ್ಶನಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ನಂತರ ಆರ್ಯವೈಶ್ಯ ಸಂಘದ ಸ್ಮಶಾನದಲ್ಲಿ ಚಂದನ್ ಕುಮಾರ್ ಅಂತ್ಯಕ್ರಿಯೆ ನಡೆಯಲಿದೆ ಎನ್ನಲಾಗಿದೆ