https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ಕರ್ನಾಟಕದ ತುಮಕೂರು ಮೂಲದ 22 ವರ್ಷದ ವಿದ್ಯಾರ್ಥಿ ಸಾಕೇತ್ ಶ್ರೀನಿವಾಸಯ್ಯ ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಘಟನೆ ದುಃಖದ ಸುದ್ದಿಯಾಗಿ ಮಾರ್ಪಟ್ಟಿದೆ. ಸ್ಥಳೀಯ ಪೊಲೀಸರು ಅವರ ಮೃತದೇಹವನ್ನು ಪತ್ತೆ ಮಾಡಿದ್ದಾರೆ ಎಂದು ಸ್ಯಾನ್ ಫ್ರಾನ್ಸಿಸ್ಕೋದ ಭಾರತೀಯ ರಾಯಭಾರಿ ಕಚೇರಿ ಭಾನುವಾರ ಘೋಷಿಸಿದೆ. ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಸಾಕೇತ್ ಶ್ರೀನಿವಾಸಯ್ಯ ಶವವಾಗಿ ಪತ್ತೆಯಾಗಿದ್ದು, ಇದೀಗ ಈ ಸಾವಿನ ಬಗ್ಗೆ ಹಲವು ಅನುಮಾನ ಮೂಡಿದೆ. ಆದರೆ ಸಾಕೇತ್ ಅವರ ಪೋಷಕರು ಇನ್ನೂ ಸಾವನ್ನು ಒಪ್ಪಿಕೊಂಡಿಲ್ಲ.
ಸಾಕೇತ್ ಶ್ರೀನಿವಾಸಯ್ಯ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಪೋಷಕರು, ಅಧಿಕೃತವಾಗಿ ನಮಗೆ ಯಾರೂ ಸ್ಪಷ್ಟವಾಗಿ ಏನೂ ಹೇಳಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಅಲ್ಲದೇ ಸುಮಾರು ಎರಡು ದಿನಗಳಿಂದಲೂ ಎಮರ್ಜೆನ್ಸಿ ವೀಸಾಗಾಗಿ ಶತ ಪ್ರಯತ್ನ ನಡೆಸುತ್ತಿದ್ದಾರೆ.
ಸಾಕೇತ್ ಬರ್ಕ್ಲಿಯ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಂಗ ಮಾಡುತ್ತಿದ್ದರು. ಫೆಬ್ರವರಿ 9ರಿಂದ ಅವರು ಕಾಣೆಯಾಗಿದ್ದರು. ಕೊನೆಯ ಬಾರಿಗೆ ಟಿಲ್ಡೆನ್ ರೀಜನಲ್ ಪಾರ್ಕ್ನ ಸರೋವರದ ಬಳಿ ಕಂಡುಬಂದಿದ್ದರು ಎಂದು ಮಾಹಿತಿ ಇದೆ. ಆರು ದಿನಗಳ ನಂತರ ಅವರ ಮೃತದೇಹ ಪತ್ತೆಯಾಗಿದೆ ಎಂದು ಸ್ಥಳೀಯ ಪೊಲೀಸರು ದೃಢಪಡಿಸಿದ್ದಾರೆ. ಭಾರತೀಯ ರಾಯಭಾರಿ ಕಚೇರಿ ಈ ಮಾಹಿತಿಯನ್ನು ಭಾನುವಾರ ಘೋಷಿಸಿದೆ.
ಆದರೆ ಪೋಷಕರು ಈ ಸುದ್ದಿಯನ್ನು ಒಪ್ಪಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಮಗ ಸತ್ತಿಲ್ಲ ಎಂದು ಅವರು ಹೇಳುತ್ತಿದ್ದಾರೆ. ಅಧಿಕೃತ ಮಾಹಿತಿ ಇನ್ನೂ ಸ್ಪಷ್ಟವಾಗಿ ಬಂದಿಲ್ಲ ಎಂಬುದು ಅವರ ವಾದ. ಪುತ್ರನ ಮೃತದೇಹವನ್ನು ನೋಡುವವರೆಗೂ ಅವರು ಸಾವನ್ನು ನಂಬುತ್ತಿಲ್ಲ. ಈಗ ಅಮೆರಿಕಕ್ಕೆ ತೆರಳಲು ಎಮರ್ಜೆನ್ಸಿ ವೀಸಾ ಪಡೆಯಲು ಶತಪ್ರಯತ್ನ ಮಾಡುತ್ತಿದ್ದಾರೆ. ರಾಯಭಾರಿ ಕಚೇರಿಯಿಂದ ಸಂಪೂರ್ಣ ಸಹಕಾರ ಸಿಗುತ್ತಿದೆ ಎಂದು ತಿಳಿದುಬಂದಿದೆ.
https://www.newsics.com/2026/02/16/horrific-fire-tragedy-7-workers-burnt-alive/