newsics.com
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾಗೆ ಸುಪ್ರೀಂ ಕೋರ್ಟ್ ಕೊನೆಗೂ ಜಾಮೀನು ಮಂಜೂರು ಮಾಡಿದ್ದು ಆ ಮೂಲಕ ಸಿಸೋಡಿಯಾರ 17 ತಿಂಗಳ ಸೆರೆವಾಸ ಕೊನೆಗೂ ಅಂತ್ಯಕಂಡಿದೆ.
ಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಕೊನೆಗೂ ಜಾಮೀನು ಮಂಜೂರು ಮಾಡಿದ್ದು, ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಅವರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ನೀಡಿದೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐನಿಂದ ಬಂಧಿಸಲ್ಪಟ್ಟ ಬರೋಬ್ಬರಿ 18 ತಿಂಗಳ ನಂತರ ಅವರಿಗೆ ಜಾಮೀನು ಸಿಕ್ಕಿದೆ.
ಇನ್ನು ಅಬಕಾರಿ ನೀತಿ ಹಗರಣದ ವಿಚಾರಣೆಯಾಗಿ ಕೆಳಹಂತದ ಕೋರ್ಟ್ ಗಳನ್ನು ಇದೇ ವೇಳೆ ಸುಪ್ರೀಂ ಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ವಿಚಾರಣೆ ನಿಧಾನಗತಿಯನ್ನು ತೀವ್ರವಾಗಿ ಟೀಕಿಸಿದೆ. ತ್ವರಿತ ವಿಚಾರಣೆ ಮತ್ತು ತ್ವರಿತ ನ್ಯಾಯ ದೇಶದ ಎಲ್ಲ ನಾಗರಿಕನ ಹಕ್ಕು. ಯಾವುದೇ ಕಾರಣಕ್ಕೂ ಅದನ್ನು ನಿರಾಕರಿಸುವಂತಿಲ್ಲ ಮತ್ತು ವಿಳಂಬ ಮಾಡುವಂತಿಲ್ಲ ಎಂದು ಕೋರ್ಟ್ ಹೇಳಿದೆ.