Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ -ಜುಲೈ 1 ರಿಂದ ಜಾರಿ
ಕರ್ನಾಟಕದೇಶಪ್ರಮುಖ

ಬ್ಯಾಂಕಿಂಗ್ ನಿಯಮಗಳಲ್ಲಿ ಬದಲಾವಣೆ -ಜುಲೈ 1 ರಿಂದ ಜಾರಿ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಭಾರತೀಯ ರಿಸರ್ವ್ ಬ್ಯಾಂಕ್ (RBI) ಬ್ಯಾಂಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ಜಾರಿಗೆ ತರುತ್ತಿದೆ. ಬ್ಯಾಂಕಿಂಗ್ ಗ್ರಾಹಕರಿಗೆ ಅನುಕೂಲವಾಗುವಂತೆ ಹಲವು ನಿಯಮಗಳಲ್ಲಿ ಮಾರ್ಪಾಡು ಮಾಡಿದೆ. ಇದಕ್ಕಾಗಿ ಇದುವರೆಗೆ ಇದ್ದ ಬ್ಯಾಂಕಿಂಗ್ ನಿಬಂಧನೆಗಳು ಮತ್ತು ನಿಯಮಗಳನ್ನು ಬದಲಾಯಿಸುತ್ತಿದೆ. ಅದರ ಭಾಗವಾಗಿ, ಇತ್ತೀಚೆಗೆ ಬ್ಯಾಂಕುಗಳಿಗೆ ಆರ್‌ಬಿಐ ಪ್ರಮುಖ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.

ಅದೇನೆಂದರೆ.. ಇನ್ನು ಮುಂದೆ ಬ್ಯಾಂಕುಗಳು ಮೋಸದ ವಿಮೆ, ಎನ್‌ಪಿಎಸ್ (NPS) ಮತ್ತು ಇತರ ಹಣಕಾಸು ಉತ್ಪನ್ನಗಳನ್ನು ತಪ್ಪಾಗಿ ಮಾರಾಟ ಮಾಡದಂತೆ (Mis-selling) ಕಠಿಣ ನಿಯಮಗಳನ್ನು ಜಾರಿಗೆ ತಂದಿದೆ. ಈ ನಿಯಮಗಳನ್ನು ಉಲ್ಲಂಘಿಸಿದರೆ, ಗ್ರಾಹಕರಿಗೆ ಹಣ ಮರುಪಾವತಿ (Refund) ಮತ್ತು ಪರಿಹಾರವನ್ನು ನೀಡಬೇಕಾಗುತ್ತದೆ. ಅಲ್ಲದೆ ಆರ್‌ಬಿಐ ಕಠಿಣ ಕ್ರಮಗಳನ್ನು ಕೈಗೊಳ್ಳಲಿದೆ. ಆ ವಿವರಗಳು ಇಲ್ಲಿವೆ:

RBI ಹೊಸ ನಿಯಮಗಳು 

ಏಜೆಂಟ್‌ಗಳ ಪ್ರತ್ಯೇಕತೆ: ಉತ್ಪನ್ನಗಳನ್ನು ಮಾರಾಟ ಮಾಡುವ ಏಜೆಂಟ್‌ಗಳನ್ನು ಬ್ಯಾಂಕ್ ಸಿಬ್ಬಂದಿಯಿಂದ ಪ್ರತ್ಯೇಕಿಸಬೇಕು.

ನಡವಳಿಕೆಯ ನಿಯಮಾವಳಿ: ಬ್ಯಾಂಕುಗಳು ಮಾರಾಟದ ನಡವಳಿಕೆಯ ನಿಯಮಾವಳಿಯನ್ನು (Code of Conduct) ರೂಪಿಸಿಕೊಳ್ಳಬೇಕು.

ದಂಡ ವಿಧಿಸುವಿಕೆ: ನಿಯಮಗಳನ್ನು ಉಲ್ಲಂಘಿಸುವ ಏಜೆಂಟ್‌ಗಳಿಗೆ ಬ್ಯಾಂಕುಗಳು ದಂಡ ವಿಧಿಸಬಹುದು.

ಥರ್ಡ್ ಪಾರ್ಟಿ ಉತ್ಪನ್ನಗಳು: ಬ್ಯಾಂಕುಗಳು ಥರ್ಡ್ ಪಾರ್ಟಿ ಉತ್ಪನ್ನಗಳನ್ನು ನೇರವಾಗಿ ಪ್ರಮೋಟ್ ಮಾಡಬಾರದು.

ಸಂಪರ್ಕ ನಿಯಮ: ಗ್ರಾಹಕರ ಮುನ್ಸೂಚನೆ ಅಥವಾ ಅನುಮತಿಯಿಲ್ಲದೆ ಏಜೆಂಟ್‌ಗಳು ಅಥವಾ ಸಿಬ್ಬಂದಿ ಕರೆ ಮಾಡಬಾರದು ಅಥವಾ ಭೇಟಿಯಾಗಬಾರದು.

ಅರ್ಹತೆ ಆಧಾರಿತ ಮಾರಾಟ: ಗ್ರಾಹಕರ ಪ್ರೊಫೈಲ್, ವಯಸ್ಸು, ಆದಾಯ, ಹಣಕಾಸಿನ ಮಾಹಿತಿ ಮತ್ತು ರಿಸ್ಕ್ ತೆಗೆದುಕೊಳ್ಳುವ ಸಾಮರ್ಥ್ಯದ ಆಧಾರದ ಮೇಲೆ ಮಾತ್ರ ಉತ್ಪನ್ನಗಳನ್ನು ಮಾರಾಟ ಮಾಡಬೇಕು.

ತಪ್ಪು ಮಾಹಿತಿ ನಿಷೇಧ: ತಪ್ಪು ದಾರಿಗೆಳೆಯುವ ಮಾಹಿತಿ ನೀಡುವುದು ಅಥವಾ ಗ್ರಾಹಕರ ಅನುಮತಿಯಿಲ್ಲದೆ ಸೇವೆಗಳನ್ನು ಮಾರಾಟ ಮಾಡುವುದು ಮಾಡಬಾರದು.

ಒತ್ತಾಯದ ಮಾರಾಟ ಬೇಡ: ಆಫರ್ ವಿಸ್ತರಿಸಲು ಎರಡನೇ ವಿಮಾ ಪಾಲಿಸಿಯನ್ನು ಖರೀದಿಸುವಂತೆ ಒತ್ತಾಯಿಸಬಾರದು.

ಪಾರದರ್ಶಕತೆ: ಗ್ರಾಹಕರನ್ನು ವಂಚಿಸುವ ಯಾವುದೇ ತಾಂತ್ರಿಕ ಅಲ್ಗಾರಿದಮ್‌ಗಳನ್ನು ಬಳಸಬಾರದು.

ಈ ನಿಯಮಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂqದು ಆರ್‌ಬಿಐ ತನ್ನ ಅಧಿಸೂಚನೆಯಲ್ಲಿ ತಿಳಿಸಿದೆ. ಒಂದು ವೇಳೆ ಬ್ಯಾಂಕುಗಳು ಯಾವುದೇ ತಪ್ಪು ಉತ್ಪನ್ನಗಳನ್ನು ಮಾರಾಟ ಮಾಡಿದರೆ ಗ್ರಾಹಕರು ದೂರು ನೀಡಬೇಕು. 30 ದಿನಗಳ ಒಳಗಾಗಿ ದೂರು ನೀಡಬೇಕು ಎಂದು ಆರ್‌ಬಿಐ ಸ್ಪಷ್ಟವಾಗಿ ತಿಳಿಸಿದೆ. ಈ ಹೊಸ ನಿಯಮಗಳಿಂದ ಬ್ಯಾಂಕಿಂಗ್ ಗ್ರಾಹಕರಿಗೆ ಹೆಚ್ಚಿನ ರಕ್ಷಣೆ ಸಿಗಲಿದೆ.

https://www.newsics.com/2026/02/17/student-dies-after-falling-from-14th-floor-of-states-prestigious-university-hostel/

TAGGED:Changes in banking rules - effective from July 1
Share This Article
Facebook Twitter Copy Link Print
Previous Article ವಿಜಯ್-ರಶ್ಮಿಕಾ ಮದುವೆಗೆ ಬರೋ ಅತಿಥಿಗಳಿಗೆ ಕಠಿಣ ನಿಯಮ!
Next Article SSLC, PUC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಮಯ ವಿವರ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?