https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ಕುಡುಕನೊಬ್ಬ ತನಗೆ ತಾನೇ ಬೆಂಕಿ ಹಚ್ಚಿಕೊಂಡ ಘಟನೆಯೊಂದು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಬಸ್ತಿಪುರದಲ್ಲಿ ನಡೆದಿದೆ. ಆನಂದ್ (45) ಎಂಬ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಹುಚ್ಚಾಟ ಮೆರೆದಿದ್ದಾನೆ. ಬಸ್ತಿಪುರ ಗ್ರಾಮದ ಕಾಲುವೆ ಬಳಿ ಕಂಠಪೂರ್ತಿ ಕುಡಿದು ರಂಪಾಟ ಮಾಡಿದ್ದಾನೆ.
ಮದ್ಯದ ಅಮಲಿನಲ್ಲಿ ರಂಪಾಟ ಶುರು ಮಾಡಿದ್ದಾರೆ. ಅದೇನಾಯಿತೋ ತಿಳಿಯದು, ಇದ್ದಕ್ಕಿದ್ದಂತೆ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ.
ಮೈಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಗಾಬರಿಗೊಂಡ ಆತ ತಕ್ಷಣ ಪಕ್ಕದಲ್ಲಿದ್ದ ಕಾಲುವೆಗೆ ಹಾರಿದ್ದಾನೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದಾನೆ. ಗಾಯಗೊಂಡ ಆನಂದ್ ಅವರನ್ನು ತಕ್ಷಣವೇ ಕೊಳ್ಳೇಗಾಲದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಆದರೆ ಗಾಯದ ತೀವ್ರತೆ ಹೆಚ್ಚಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಕೆ.ಆರ್. ಆಸ್ಪತ್ರೆಗೆ ರವಾನಿಸಲಾಗಿದೆ. ಘಟನಾ ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈತ ಆತ್ಮಹತ್ಯೆಗೆ ಯತ್ನಿಸಿದನೇ ಅಥವಾ ಕೇವಲ ಕುಡಿತದ ಅಮಲಿನಲ್ಲಿ ಈ ರೀತಿ ಮಾಡಿದನೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.