Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ
ಕರ್ನಾಟಕಪ್ರಮುಖ

ಇನ್ಮುಂದೆ ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ

Share
2 Min Read
SHARE

https://youtube.com/shorts/iPk0YEWO1t8?si=tOj6kwL_UdC2E5Z8

Subscribe ನ್ಯೂಸಿಕ್ಸ್ ಕನ್ನಡ

newsics.com

ಭದ್ರತೆಯ ನೆಪವೊಡ್ಡಿ ಮಾಧ್ಯಮಗಳ ಸಂಚಾರ ಮತ್ತು ವರದಿಗಾರಿಕೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಹೊಸ ‘ಲಕ್ಷ್ಮಣ ರೇಖೆ’ ಎಳೆದಿದೆ. ಈ ಮೂಲಕ
ಕರ್ನಾಟಕ ಸರ್ಕಾರ ತಮಿಳುನಾಡು ಮಾದರಿಯನ್ನು ಅನುಸರಿಸಲು ಹೊರಟಿದೆ.

ಇನ್ಮುಂದೆ ವಿಧಾನಸೌಧದ ಒಳಗೆ ಅಥವಾ ಜನಪ್ರತಿನಿಧಿಗಳ ಹಿಂದೆ ಹೋಗಿ ಬೈಟ್ (ಹೇಳಿಕೆ) ಪಡೆಯುವಂತಿಲ್ಲ. ಕೇವಲ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಮಾಧ್ಯಮಗಳು ಹೇಳಿಕೆ ಪಡೆಯಬೇಕು ಎಂದು ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿದೆ. ವಾರ್ತಾ ಇಲಾಖೆಗೆ ಪತ್ರ ಬರೆದಿರುವ DPAR, ಗಣ್ಯರ ಭದ್ರತೆಯ ಹಿತದೃಷ್ಟಿಯಿಂದ ಈ ಕ್ರಮ ಅನಿವಾರ್ಯ ಎಂದು ಸಮರ್ಥಿಸಿಕೊಂಡಿದೆ.

ಸರ್ಕಾರದ ಈ ನಡೆ ಕೇವಲ ಮಾಧ್ಯಮಗಳ ಮೇಲಿನ ನಿರ್ಬಂಧವಲ್ಲ, ಬದಲಿಗೆ ವಿರೋಧ ಪಕ್ಷಗಳ ಧ್ವನಿಯನ್ನು ಜನರಿಗೆ ತಲುಪದಂತೆ ಮಾಡುವ ತಂತ್ರ ಎಂದು ವಿಶ್ಲೇಷಿಸಲಾಗುತ್ತಿದೆ.
ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿಗಳು ನೀಡಿರುವ ಸೂಚನೆಯ ಪ್ರಕಾರ, ಮಾಧ್ಯಮ ಪ್ರತಿನಿಧಿಗಳು ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಅಥವಾ ಸಚಿವರುಗಳು ವಿಧಾನಸೌಧ ಪ್ರವೇಶಿಸುವಾಗ ಅವರ ಹಿಂದೆ ಹೋಗಬಾರದು. ವಾರ್ತಾ ಇಲಾಖೆಯಿಂದ ಗುರುತಿನ ಚೀಟಿ ಪಡೆದ ಪತ್ರಕರ್ತರು ಕೇವಲ ನಿಗದಿಪಡಿಸಿದ ಜಾಗದಲ್ಲೇ ಇರಬೇಕು. ಒಂದು ವೇಳೆ ಈ ಸೂಚನೆ ಮೀರಿದರೆ ಅದನ್ನು ಭದ್ರತಾ ಲೋಪವೆಂದು ಪರಿಗಣಿಸಲಾಗುವುದು ಎಂದು ಎಚ್ಚರಿಸಲಾಗಿದೆ. ಆದರೆ, ಪದೇ ಪದೇ ವಿಧಾನಸೌಧದಲ್ಲಿ ನಡೆಯುತ್ತಿರುವ ನೈಜ ಭದ್ರತಾ ಲೋಪಗಳನ್ನು ಸರಿಪಡಿಸುವ ಬದಲು ಮಾಧ್ಯಮಗಳನ್ನೇ ಗುರಿ ಮಾಡಿರುವುದು ಈಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ.

ವಿಧಾನಸೌಧದಲ್ಲಿ ಮಾಧ್ಯಮಗಳ ಮೇಲೆ ಈ ಸವಾರಿ ಮಾಡುತ್ತಿರುವುದರ ಹಿಂದೆ ದೊಡ್ಡ ಹುನ್ನಾರವಿದೆ ಎಂಬ ಚರ್ಚೆ ಶುರುವಾಗಿದೆ. ಕಳೆದ ವಾರವಷ್ಟೇ ಇದೇ ಡಿಪಿಎಆರ್ ಇಲಾಖೆಯ ಸಿಬ್ಬಂದಿಯಿಂದ 300 ಗ್ರಾಂ ಚಿನ್ನದ ಕಳ್ಳತನ ನಡೆದಿರುವುದು ಜಗಜ್ಜಾಹೀರಾಗಿತ್ತು. ಅಲ್ಲದೆ, ಇತ್ತೀಚೆಗೆ ಸಿಎಂ ಸಹಿ ಮಾಡಿದ್ದ ಶಿಫಾರಸ್ಸು ಪತ್ರ ವೈರಲ್ ಆಗಿದ್ದು ಮತ್ತು ಸ್ವಯಂ ನಿವೃತ್ತಿ ಪಡೆದ ಸ್ವಾಮೀಜಿಯೊಬ್ಬರಿಗೆ ಬಡ್ತಿ ನೀಡಿದ ವಿವಾದಗಳು ಸರ್ಕಾರಕ್ಕೆ ಮುಜುಗರ ತಂದಿದ್ದವು. ಈ ಎಲ್ಲಾ ಆಡಳಿತಾತ್ಮಕ ವೈಫಲ್ಯಗಳು ಮಾಧ್ಯಮಗಳಲ್ಲಿ ಚರ್ಚೆಯಾಗಬಾರದು ಎಂಬ ಕಾರಣಕ್ಕೆ ಈ ನಿರ್ಬಂಧ ಹೇರಲಾಗಿದೆಯೇ ಎಂಬ ಪ್ರಶ್ನೆ ಎದ್ದಿದೆ.

ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ

TAGGED:Media restrictions in Vidhana Soudha henceforth
Share This Article
Facebook Twitter Copy Link Print
Previous Article ಕಲುಷಿತ ನೀರಿನ ಕಾಯಿಲೆಗಳಲ್ಲಿ ಕರ್ನಾಟಕ ಮುಂಚೂಣಿ
Next Article Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

Popular Posts

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read

Transgender attack ಹಣ ಕೊಡದ ಯುವಕನ ಮೇಲೆ ಮಂಗಳಮುಖಿಯರಿಂದ ರೈಲಿನಲ್ಲೇ ಹಲ್ಲೆ, ಅಸಭ್ಯ ವರ್ತನೆ, ವಿಡಿಯೋ ನೋಡಿ

1 Min Read

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read

You Might Also Like

ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read
ಪ್ರಮುಖCrimeಕರ್ನಾಟಕ

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?