Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ: ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್
ಕರ್ನಾಟಕಪ್ರಮುಖ

ಸಾರಿಗೆ ನೌಕರರ ಬೇಡಿಕೆಗೆ ಮಣಿದ ಸರ್ಕಾರ: ವೇತನ ಪರಿಷ್ಕರಣೆಗೆ ಗ್ರೀನ್ ಸಿಗ್ನಲ್

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ರಾಜ್ಯದ ಲಕ್ಷಾಂತರ ಸಾರಿಗೆ ನೌಕರರ ಪಾಲಿಗೆ ಸರ್ಕಾರ ಮಹತ್ವದ ಸಿಹಿ ಸುದ್ದಿ ನೀಡಿದೆ. ಕಳೆದೆರಡು ವರ್ಷಗಳಿಂದ 38 ತಿಂಗಳಿಂದ ಬಾಕಿ ಉಳಿಸಿಕೊಂಡಿದ್ದ ವೇತನ ಹಿಂಬಾಕಿ (ಅರಿಯರ್ಸ್) ಹಾಗೂ ವೇತನ ಪರಿಷ್ಕರಣೆಗಾಗಿ ಆಗ್ರಹಿಸಿ ಸಾರಿಗೆ ಸಿಬ್ಬಂದಿ ನಡೆಸಲುದ್ದೇಶಿಸಿದ್ದ ಪ್ರತಿಭಟನೆಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ನೌಕರರ ಪ್ರಮುಖ ಹಕ್ಕೊತ್ತಾಯಗಳಲ್ಲಿ ಒಂದಾದ 26 ತಿಂಗಳ ಹಿಂಬಾಕಿ ಪಾವತಿಸಲು ಸರ್ಕಾರ ಆದೇಶ ಹೊರಡಿಸಿದೆ.

ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳ (KSRTC, BMTC, NWKRTC, KKRTC) ನೌಕರರು ಒಟ್ಟು 38 ತಿಂಗಳ ವೇತನ ಹಿಂಬಾಕಿಯನ್ನು ನೀಡುವಂತೆ ಒತ್ತಾಯಿಸುತ್ತಿದ್ದರು. ಈ ಬಗ್ಗೆ ಗಂಭೀರ ಚರ್ಚೆ ನಡೆಸಿದ ರಾಜ್ಯ ಸರ್ಕಾರ, ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ, ಪ್ರಾಥಮಿಕ ಹಂತದಲ್ಲಿ 26 ತಿಂಗಳ ಅರಿಯರ್ಸ್ ನೀಡಲು ಅಧಿಕೃತ ಒಪ್ಪಿಗೆ ಸೂಚಿಸಿದೆ. ಅಂದರೆ, 1-1-2021 ರಿಂದ 28-03-2023 ರವರೆಗೆ 26 ತಿಂಗಳ ಹಿಂಬಾಕಿ ನೀಡಲು ಒಪ್ಪಿಗೆಯನ್ನು ಸೂಚಿಸಿದೆ. ಇದು ಸಾರಿಗೆ ನೌಕರರ ಸಂಘಟನೆಗಳ ನಿರಂತರ ಶ್ರಮಕ್ಕೆ ಸಂದ ಜಯವೆಂದೇ ವಿಶ್ಲೇಷಿಸಲಾಗುತ್ತಿದೆ.

ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಆರ್ಥಿಕ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಸಭೆಯ ನಂತರ ಮತ್ತೊಂದು ಪ್ರಮುಖ ಘೋಷಣೆ ಮಾಡಿದ್ದಾರೆ. 1ನೇ ಏಪ್ರಿಲ್ 2025 ರಿಂದ ಜಾರಿಗೆ ಬರುವಂತೆ ಸಾರಿಗೆ ನೌಕರರ ವೇತನವನ್ನು ಪರಿಷ್ಕರಣೆ ಮಾಡಲು ಸರ್ಕಾರ ಹಸಿರು ನಿಶಾನೆ ತೋರಿಸಿದೆ. ವೇತನದಲ್ಲಿ ಎಷ್ಟು ಪ್ರಮಾಣದ ಏರಿಕೆ ಮಾಡಬೇಕು ಎಂಬ ಬಗ್ಗೆ ಸಾರಿಗೆ ಸಂಘಟನೆಗಳ ಮುಖಂಡರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರ ತಿಳಿಸಿದೆ.

ಇಂದಿನಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಾರಿಗೆ ನೌಕರರು ಬೃಹತ್ ‘ಬೆಂಗಳೂರು ಚಲೋ’ ಹಾಗೂ ಉಪವಾಸ ಸತ್ಯಾಗ್ರಹ ನಡೆಸಲು ಸಿದ್ಧತೆ ಮಾಡಿಕೊಂಡಿದ್ದರು. ಬನಶಂಕರಿ ಡಿಪೋ ಸೇರಿದಂತೆ ನಗರದಾದ್ಯಂತ ಕರಪತ್ರಗಳನ್ನು ಹಂಚಿ, ಸೇವೆಯಲ್ಲಿ ವ್ಯತ್ಯಯ ಉಂಟುಮಾಡುವ ಎಚ್ಚರಿಕೆ ನೀಡಲಾಗಿತ್ತು. ಸಾರ್ವಜನಿಕ ಸಾರಿಗೆ ವ್ಯವಸ್ಥೆಗೆ ಧಕ್ಕೆಯಾಗಬಾರದು ಹಾಗೂ ನೌಕರರ ಹಿತರಕ್ಷಣೆ ಮಾಡಬೇಕು ಎಂಬ ದೃಷ್ಟಿಯಿಂದ ಸರ್ಕಾರ ತಕ್ಷಣವೇ ಎಚ್ಚೆತ್ತುಕೊಂಡು ಈ ಐತಿಹಾಸಿಕ ತೀರ್ಮಾನ ಪ್ರಕಟಿಸಿದೆ.

Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ

TAGGED:Government gives in to transport employees' demands: Green signal for salary revision
Share This Article
Facebook Twitter Copy Link Print
Previous Article Bus services may be disrupted today ಸಾರಿಗೆ ನೌಕರರ ಬೇಡಿಕೆ ಈಡೇರಿಸಲು ಒಪ್ಪಿದರೂ ಇಂದು ಬೆಂಗಳೂರು ಚಲೋ: ರಾಜ್ಯಾದ್ಯಂತ ಬಸ್ ಸಂಚಾರದಲ್ಲಿ ವ್ಯತ್ಯಯ ಸಾಧ್ಯತೆ
Next Article ಪೋಕ್ಸೋ ಕೇಸ್‌ನಲ್ಲಿ ಜೈಲು ಶಿಕ್ಷೆ ಪ್ರಕಟಗೊಳ್ಳುತ್ತಿದ್ದಂತೆ  ಅಪರಾಧಿ ನಾಪತ್ತೆ

Popular Posts

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Cyber Crime ಎಚ್ಚರ..! ವಾಟ್ಸಾಪ್‌ಗೆ ಬಂದ ಮದುವೆ ಕಾರ್ಡ್ ನೋಡ್ತಿದ್ದಂತೆ ಖಾಲಿಯಾಯ್ತು ₹9 ಲಕ್ಷ ರೂ

2 Min Read

You Might Also Like

ಪ್ರಮುಖಕರ್ನಾಟಕದೇಶ

Gold Price ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ, ಇಂದಿನ ದರ ವಿವರ ಇಲ್ಲಿದೆ

1 Min Read
ಕರ್ನಾಟಕ

Uttarakannada Trauma Center | ಕುಮಟಾದಲ್ಲಿ ಜಿಲ್ಲೆಯ ಮೊದಲ ಅತ್ಯಾಧುನಿಕ ಟ್ರಾಮಾ ಕೇರ್ ಸೆಂಟರ್ ಆರಂಭ

3 Min Read
ದೇಶಪ್ರಮುಖ

Indian Navy Upgrade | INS ಮಾಲ್ವನ್ ನಾಳೆ ಭಾರತೀಯ ನೌಕಾಪಡೆಗೆ ಸೇರ್ಪಡೆ: ಸಮುದ್ರ ಭದ್ರತೆಗೆ ಮತ್ತೊಂದು ಸ್ವದೇಶಿ ಶಕ್ತಿ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?