Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ವಾರಣಾಸಿ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ; ಹೊಸ ಇತಿಹಾಸ ಸೃಷ್ಟಿ?
ಕರ್ನಾಟಕಪ್ರಮುಖಮನರಂಜನೆ

ವಾರಣಾಸಿ ಚಿತ್ರಕ್ಕೆ ಕಿಚ್ಚ ಸುದೀಪ್ ಎಂಟ್ರಿ; ಹೊಸ ಇತಿಹಾಸ ಸೃಷ್ಟಿ?

Share
2 Min Read
SHARE

https://youtube.com/shorts/tAQS6h_SZWA?si=vAoxcVAHQglCsru5

Subscribe ನ್ಯೂಸಿಕ್ಸ್ ಕನ್ನಡ

newsics.com

ಎಸ್ಎಸ್ ರಾಜಮೌಳಿ ಪ್ರಸ್ತುತ ಭಾರತ ಚಿತ್ರರಂಗದ ನಂಬರ್ 1 ನಿರ್ದೇಶಕ. ಭಾರಿ ಬಜೆಟ್ನ ‘ವಾರಣಾಸಿ’ ಸಿನಿಮಾವನ್ನು ಅವರು ನಿರ್ದೇಶಿಸುತ್ತಿದ್ದಾರೆ. ಹಾಲಿವುಡ್ ಲೆವೆಲ್ನಲ್ಲಿ ನಿರ್ಮಾಣ ಆಗುತ್ತಿರುವ ಈ ಸಿನಿಮಾವನ್ನು ಭಾರತ ಮಾತ್ರವಲ್ಲದೆ ಹಾಲಿವುಡ್ ಮಾರುಕಟ್ಟೆಯನ್ನೂ ಸಹ ಗಮನದಲ್ಲಿರಿಸಿಕೊಂಡೇ ನಿರ್ಮಾಣ ಮಾಡಲಾಗುತ್ತಿದೆ.
ಸಿನಿಮಾನಲ್ಲಿ ಮಹೇಶ್ ಬಾಬು ನಾಯಕ, ಪ್ರಿಯಾಂಕಾ ಚೋಪ್ರಾ ನಾಯಕಿ, ಪೃಥ್ವಿರಾಜ್ ಸುಕುಮಾರ್ ವಿಲನ್. ಇವರ ಜೊತೆಗೆ ಇನ್ನೂ ಕೆಲವು ಬೇರೆ ಬೇರೆ ಕಲಾವಿದರು ನಟಿಸುತ್ತಿದ್ದಾರೆ. ಆದರೆ ಇದೇ ಸಿನಿಮಾನಲ್ಲಿ ಕನ್ನಡದ ಸ್ಟಾರ್ ನಟ ಸುದೀಪ್ ಸಹ ನಟಿಸಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.
ಪಿಂಕ್ವಿಲ್ಲಾ ಸೌಥ್ ಮಾಡಿರುವ ವರದಿಯಂತೆ, ಸುದೀಪ್ ಅವರು ರಾಜಮೌಳಿ ನಿರ್ದೇಶನದ ‘ವಾರಣಾಸಿ’ ಸಿನಿಮಾನಲ್ಲಿ ಪ್ರಮುಖವಾದ ಪಾತ್ರವೊಂದರಲ್ಲಿ ನಟಿಸಲಿದ್ದಾರೆ. ಈ ಹಿಂದೆ ರಾಜಮೌಳಿ ನಿರ್ದೇಶನದ ‘ಈಗ’ ಮತ್ತು ‘ಬಾಹುಬಲಿ: ದಿ ಬಿಗಿನಿಂಗ್’ ಸಿನಿಮಾಗಳಲ್ಲಿ ಸುದೀಪ್ ನಟಿಸಿದ್ದು, ಎರಡೂ ಸಿನಿಮಾಗಳಲ್ಲಿ ಅತ್ಯದ್ಭುತ ಪ್ರದರ್ಶನವನ್ನು ಸುದೀಪ್ ನೀಡಿದ್ದರು. ಇದೀಗ ಮೂರನೇ ಬಾರಿಗೆ ರಾಜಮೌಳಿ ಜೊತೆಗೆ ಸುದೀಪ್ ಜೊತೆ ಆಗುತ್ತಿದ್ದಾರೆ. ‘ವಾರಣಾಸಿ’ ಸಿನಿಮಾನಲ್ಲಿ ಸುದೀಪ್ ಅವರ ಪಾತ್ರವು, ಸಿನಿಮಾದ ಕತೆಗೆ ಮಹತ್ತರವಾದ ತಿರುವು ನೀಡುವ ಪಾತ್ರವಾಗಿರುತ್ತದೆ ಎನ್ನಲಾಗುತ್ತಿದೆ.
ಸ್ವತಃ ರಾಜಮೌಳಿ ಅವರೇ ಈ ಹಿಂದೆ ಹಲವು ಬಾರಿ ಹೇಳಿಕೊಂಡಿರುವಂತೆ ಸುದೀಪ್, ಅವರ ನೆಚ್ಚಿನ ನಟ. ‘ಈಗ’ ಸಿನಿಮಾದ ಸುದೀಪ್ ನಟನೆ ರಾಜಮೌಳಿಗೆ ಅಚ್ಚುಮೆಚ್ಚಂತೆ, ‘ನನ್ನ ಸಿನಿಮಾಗಳಲ್ಲಿ ನನಗೆ ನಾಯಕನಿಗಿಂತಲೂ ವಿಲನ್ ಇಷ್ಟ, ಅದರಲ್ಲೂ ನನ್ನ ಸಿನಿಮಾಗಳಲ್ಲಿ ನನ್ನ ಮೆಚ್ಚಿನ ವಿಲನ್ ಸುದೀಪ್’ ಎಂದು ಈ ಹಿಂದೆ ಅವರು ಹೇಳಿಕೊಂಡಿದ್ದರು. ಇದೇ ಕಾರಣಕ್ಕೆ ಸುದೀಪ್ ಅವರನ್ನು ‘ಬಾಹುಬಲಿ’ ಸಿನಿಮಾದ ಅರೇಬಿಯಾದ ಕತ್ತಿಗಳ ವ್ಯಾಪಾರಿ ಅಸ್ಲಂ ಖಾನ್ ಪಾತ್ರಕ್ಕೆ ಹಾಕಿಕೊಂಡಿದ್ದರು. ಒಳ್ಳೆಯ ಫೈಟ್ ಸಹ ಆ ಸಿನಿಮಾನಲ್ಲಿ ಸುದೀಪ್ ಅವರಿಗೆ ಇತ್ತು.
ರಾಜಮೌಳಿ ಅವರ ಈ ವರೆಗಿನ ಸಿನಿಮಾಗಳಲ್ಲಿಯೇ ಅತ್ಯಂತ ನಿರೀಕ್ಷಿತ ಮತ್ತು ಅತ್ಯಂತ ದುಬಾರಿ ಸಿನಿಮಾ ಆಗಿರುವ ‘ವಾರಣಾಸಿ’ಯಲ್ಲೂ ಸುದೀಪ್ ಅವರಿಗೆ ವಿಶೇಷ ಪಾತ್ರವೊಂದನ್ನು ರಾಜಮೌಳಿ ನೀಡುತ್ತಿದ್ದು, ಆ ಪಾತ್ರ ಹೇಗಿರಲಿದೆ ಎಂಬ ಕುತೂಹಲ ಸಹಜವಾಗಿಯೇ ಇದೆ. ಸುದೀಪ್ ಅವರು ‘ವಾರಣಾಸಿ’ ಸಿನಿಮಾನಲ್ಲಿ ನಟಿಸಲಿರುವ ಸುದ್ದಿ ಖಾತ್ರಿ ಆಗಿಲ್ಲ. ಆದರೆ ಆದಷ್ಟು ಬೇಗ ಸುದ್ದಿಯನ್ನು ಚಿತ್ರತಂಡವೇ ಹಂಚಿಕೊಳ್ಳಲಿದೆ ಎನ್ನಲಾಗುತ್ತಿದೆ.
‘ವಾರಣಾಸಿ’ ಸಿನಿಮಾವು ಮುಂದಿನ ವರ್ಷ ಏಪ್ರಿಲ್ 07 ರಂದು ಬಿಡುಗಡೆ ಆಗಲಿದೆ. ಸಿನಿಮಾದ ಅರ್ಧಕ್ಕೂ ಹೆಚ್ಚು ಭಾಗದ ಚಿತ್ರೀಕರಣವನ್ನು ರಾಜಮೌಳಿ ಮುಗಿಸಿದ್ದಾರೆ. ಈ ಸಿನಿಮಾಕ್ಕೆ ಸುಮಾರು 1000 ಕೋಟಿ ಬಜೆಟ್ ಹೂಡಲಾಗಿದ್ದು, ಸಿನಿಮಾವನ್ನು ಪಿವಿಆರ್ ಕ್ಯಾಮೆರಾಗಳನ್ನು ಬಳಸಿ ಚಿತ್ರೀಕರಿಸಿರುವುದು ವಿಶೇಷ. ಸಿನಿಮಾಕ್ಕಾಗಿ ಕೆಲವು ಹಾಲಿವುಡ್ ಸಂಸ್ಥೆಗಳು ಸಹ ಕೆಲಸ ಮಾಡಿವೆ. ಸಿನಿಮಾಕ್ಕೆ ಆಸ್ಕರ್ ವಿಜೇತ ಎಂಎಂ ಕೀರವಾಣಿ ಅವರು ಸಂಗೀತ ನೀಡಿದ್ದಾರೆ.

ಕೋವಿಡ್‌ಗಿಂತಲೂ ಇದು ಭೀಕರ! ಎಐನಿಂದ ಉದ್ಯೋಗ ಕಡಿತದ ಆತಂಕ

TAGGED:Kiccha Sudeep's entry in the film 'Varanasi'; creating new history?
Share This Article
Facebook Twitter Copy Link Print
Previous Article ಕೋವಿಡ್‌ಗಿಂತಲೂ ಇದು ಭೀಕರ! ಎಐನಿಂದ ಉದ್ಯೋಗ ಕಡಿತದ ಆತಂಕ
Next Article ಫೆ.21ರಿಂದ ಚಿನ್ನ, ಪೆಟ್ರೋಲ್ ದರ ಭಾರಿ ವ್ಯತ್ಯಾಸ ಸಾಧ್ಯತೆ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?