Subscribe ನ್ಯೂಸಿಕ್ಸ್ ಕನ್ನಡ
newsics.com
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ಸಿನಿಮಾದ ಬಿಡುಗಡೆಗೆ ತಡೆ ಕೋರಿ ಕೇರಳ ಹೈಕೋರ್ಟ್ಗೆ ಅರ್ಜಿ ಸಲ್ಲಿಕೆ ಆಗಿದೆ.
ಕಣ್ಣೂರಿನ ಶ್ರೀದೇವ್ ಎಂಬುವರು ‘ದಿ ಕೇರಳ ಸ್ಟೋರಿ 2’ ಸಿನಿಮಾ ವಿರುದ್ಧ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಈ ಸಿನಿಮಾದಲ್ಲಿ ಕೋಮು ಗಲಭೆಗೆ ಕಾರಣ ಆಗುವಂತಹ ಅಂಶಗಳು ಇವೆ. ಇದರಿಂದಾಗಿ ಕಾನೂನು ಸುವ್ಯವಸ್ಥೆಗೆ ತೊಂದರೆ ಆಗಬಹುದು ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ, ಈ ಸಿನಿಮಾಗೆ ಪ್ರಮಾಣಪತ್ರ ನೀಡಿರುವ ಸೆನ್ಸಾರ್ ಮಂಡಳಿಯ ನಿರ್ಧಾರವನ್ನು ಕೂಡ ಪ್ರಶ್ನಿಸಲಾಗಿದೆ.
ಕೇರಳದಲ್ಲಿ ಲವ್ ಜಿಹಾದ್ ಮೂಲಕ ಹಿಂದೂ ಯುವತಿಯರನ್ನು ಮತಾಂತರ ಮಾಡಲಾಗುತ್ತಿದೆ ಹಾಗೂ ಅವರಿಗೆ ಹಿಂಸೆ ನೀಡಲಾಗುತ್ತಿದೆ ಎಂಬುದನ್ನು ‘ದಿ ಕೇರಳ ಸ್ಟೋರಿ 2’ ಸಿನಿಮಾದ ಟ್ರೇಲರ್ನಲ್ಲಿ ತೋರಿಸಲಾಗಿದೆ. ಆದರೆ ಇದನ್ನು ಅನೇಕರು ವಿರೋಧಿಸಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯವು ಸೆನ್ಸಾರ್ ಮಂಡಳಿಗೆ ನೋಟಿಸ್ ನೀಡಿದೆ.
ಕಾಮಾಕ್ಯ ನಾರಾಯಣ್ ಸಿಂಗ್ ಅವರು ‘ದಿ ಕೇರಳ ಸ್ಟೋರಿ 2’ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ವಿಪುಲ್ ಅಮೃತ್ಲಾಲ್ ಶಾ ಅವರು ನಿರ್ಮಾಣ ಮಾಡಿದ್ದಾರೆ. ಈ ಸಿನಿಮಾದಲ್ಲಿ ಅದಿತಿ ಭಾಟಿಯಾ, ಐಶ್ವರ್ಯಾ ಊಜಾ, ಉಲ್ಕಾ ಗುಪ್ತಾ ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. 2023ರಲ್ಲಿ ತೆರೆಗೆ ಬಂದಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದ ಸೀಕ್ವೆಲ್ ಆಗಿ ಈ ಚಿತ್ರ ಸಿದ್ಧವಾಗಿದೆ.
https://www.newsics.com/2026/02/20/britains-prince-andrew-arrested-amid-epstein-case/