Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?
ಕರ್ನಾಟಕಪ್ರಮುಖ

ಪೊಲೀಸ್ ಕಾಟಕ್ಕೆ ಮಹಿಳೆ ಆತ್ಮಹತ್ಯೆ: ಡೆತ್ನೋಟ್ನಲ್ಲಿ ಏನಿದೆ?

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಪೊಲೀಸಪ್ಪನ ಕಾಟ ತಾಳಲಾರದೆ ಮಹಿಳೆಯೊಬ್ಬಳು ವಾಟ್ಸಾಪ್ನಲ್ಲಿ ಡೆತ್ ನೋಟ್ ಬರೆದಿಷ್ಟು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ ತಾಲೂಕಿನ ಗೋಣಿಬೀಡು ಗ್ರಾಮದ ಸ್ವಾತಿ.ಜೆ (36) ಆತ್ಮಹತ್ಯೆಗೆ ಶರಣಾದ ಗೃಹಿಣಿ ಎಂದು ತಿಳಿದು ಬಂದಿದೆ. ಇವರ ಪತಿ ಜಗದೀಶ್ ಅವರು ಕೆಎಸ್ಐಎಸ್ಎಫ್ (ಶಿವಮೊಗ್ಗ ಘಟಕದಲ್ಲಿ ದಲಾಯತ್ ಆಗಿ ಕೆಲಸ ಮಾಡುತ್ತಿದ್ದರು. ಜೀವನದಲ್ಲಿ ಜುಗುಪ್ಸೆಗೊಂಡು ಫೆಬ್ರವರಿ 14ರಂದು ಅವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಪತಿ ಮೃತಪಟ್ಟು ವಾರ ಕಳೆಯುವುದರೊಳಗೆ ಸ್ವಾತಿ ಕೂಡ ಅದೇ ದಾರಿ ತುಳಿದಿದ್ದಾರೆ. ಆದ್ರೆ, ಆತ್ಮಹತ್ಯೆಗೂ ಮುನ್ನ ಗೃಹಿಣಿಯು ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ ಎಂದು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಸ್ವಾತಿ ಅವರು ಸಾಯುವ ಮುನ್ನ ತನ್ನ ತಾಯಿಗೆ ಮೆಸೇಜ್ ಮಾಡಿದ್ದು, ಅದರಲ್ಲಿ ಮೋಹನ್ ಎಂಬವರ ಹೆಸರನ್ನು ಉಲ್ಲೇಖಿಸಿದ್ದಾರೆ. ಫೇಸ್‌ಬುಕ್‌ನಲ್ಲಿ ಮೋಹನ್‌ ಎಂಬ ಪೊಲೀಸ್‌ ತನಗೆ ಮೆಸೇಜ್ ಮಾಡಿದ್ದರು. ಬ್ಲಾಕ್ ಮಾಡಿದ್ದಕ್ಕೆ, ಆತ ತನ್ನ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಸುಮ್ಮನೆ ಬಿಡಬೇಡಿ ಎಂದು ಸ್ವಾತಿ ಡೆತ್ ನೋಟ್‌ನಲ್ಲಿ ಆರೋಪಿಸಿದ್ದಾರೆ ಎಂದು ತಿಳಿದು ಬಂದಿದೆ. ಇನ್ನು ಈ ಬಗ್ಗೆ ಮೃತ ಸ್ವಾತಿ ತಾಯಿ ಸಹ ಮಾಧ್ಯಮಗಳ ಮುಂದೆ ಕಣ್ಣೀರಿಟ್ಟಿದ್ದಾರೆ.

ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಅರೆಸ್ಟ್

ಸ್ವಾತಿಗೆ ಮದುವೆ ಆಗಿ 7 ವರ್ಷವಾಗಿತ್ತು. ಒಂದು ವಾರದ ಹಿಂದಷ್ಟೇ ಪತಿ ಜಗದೀಶ್ ಅನಾರೋಗ್ಯದಿಂದ ಸಾವನ್ನಪ್ಪಿದ್ದರು. ಇದನ್ನೇ ಬಂಡವಾಳ ಮಾಡಿಕೊಂಡ ಪೊಲೀಸ್ ಮೋಹನ್, ಸ್ವಾತಿಗೆ ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದ. ಆತನ ಅಕೌಂಟ್ ಅನ್ನು ಸ್ವಾತಿ ಬ್ಲಾಕ್ ಮಾಡಿದ್ದರು. ಇದಕ್ಕೆ ಕೋಪಗೊಂಡ ಪೋಲಿಸ್ ಬೇರೆ ಅಕೌಂಟ್ ನಿಂದ ಸ್ವಾತಿ ಬಗ್ಗೆ ಅಪಪ್ರಚಾರ ಮಾಡಿದ್ದ. ಬಳಿಕ ಈತನ ಕಾಟ ತಾಳಲಾರದೆ ಸ್ವಾತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಡೆತ್ ನೋಟ್ನಲ್ಲಿ ಏನಿದೆ?

ಸ್ವಾರಿ ಅಮ್ಮ. ನನ್ನ ಬಗ್ಗೆ ಇಲ್ಲದೆ ಇರುವುದು ಎಲ್ಲಾ ಕೆಟದಾಗಿ ಜನಗಳ ಹತ್ತಿರ ಮೋಹನ್ ಹೇಳಿದ್ದಾರೆ. ನನಗೆ ತಡಿಯುವುದಕ್ಕೆ ಆಗುತ್ತಿಲ್ಲ. ನನ್ನ ಗಂಡ ಸತ್ತಿದು ಫುಲ್ ಡ್ರಿಂಕ್ಸ್ ಮಾಡಿ. ಈ ಮೋಹನ್ ಎನ್ನುವ ಪೊಲೀಸ್ ನನ್ನ ಬಗ್ಗೆ ಕೆಟದಾಗಿ ಜನಗಳ ಹತ್ತಿರ ಏನೇನೋ ಹೇಳಿರುವುದು ನನಗೆ ಈಗ ಬೆಳಿಗ್ಗೆ ವಿಷಯ ಗೊತಾಯ್ತು. ಅವನನ್ನು ಮಾತ್ರ ಸಮ್ಮನೇ ಬಿಡಬೇಡಿ ಎಂದಿದ್ದಾರೆ.

ಅವರು ಯಾರು ಅಂತಾನೆ ನಂಗೆ ಗೊತ್ತಿಲ್ಲ. ಫೇಸ್ಬುಕ್ನಲ್ಲಿ ಮೆಸೇಜ್ ಮಾಡಿದ್ದರು. ನಾನು ಬ್ಲಾಕ್ ಮಾಡಿದೆ. ಅದೇ ಸಿಟ್ಟಿಗೆ ಏನೇನೋ ಹೇಳಿದ್ದಾರೆ. ನನ್ನ ಮಕ್ಕಳನ್ನ ಚೆನ್ನಾಗಿ ನೋಡಿಕೊಳ್ಳಿ. ದಯವಿಟ್ಟು ಸ್ವಾರಿ ಅಮ್ಮ ಎಂದು ಸ್ವಾತಿ ಡೆತ್ ನೋಟ್ ಬರೆದಿದ್ದಾರೆ.

ಹಳೆ ಪ್ರಕರಣಕ್ಕೆ ಮರುಜೀವ; ಮೌಲ್ವಿ ಅರೆಸ್ಟ್

TAGGED:Woman commits suicide due to police harassment: What is in the death note?
Share This Article
Facebook Twitter Copy Link Print
Previous Article ಮುಂಡಗೋಡ ಅರಣ್ಯದಲ್ಲಿ ರುಂಡವಿಲ್ಲದ ಬೆತ್ತಲೆ ಮಹಿಳೆಯ ಶವ ಪತ್ತೆ!
Next Article ಜಾಗತಿಕವಾಗಿ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ರದ್ದುಮಾಡಿದ ಅಮೆರಿಕ

Popular Posts

PM on Foreign Policy ಒಂದೇ ತಿಂಗಳಲ್ಲಿ ಮೂರು ಜಾಗತಿಕ ಶೃಂಗಸಭೆಗಳು: ಪ್ರಧಾನಿ ಮೋದಿ ಅವರ ಜಾಗತಿಕ ರಾಜತಾಂತ್ರಿಕ ಅಭಿಯಾನಕ್ಕೆ ವೇಗ

3 Min Read

Girl embarrassed ನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿಗೆ ಬಾಯಿಗೆ ಬಂದಂತೆ ಮಾತನಾಡಿದ್ದ ಹುಡುಗಿ ಸ್ಥಿತಿ ಈಗ ನಾಯಿಪಾಡಂತೆ! ಈಕೆ ಹೇಳಿದ್ದೇನು? ವಿಡಿಯೋ ನೋಡಿ

1 Min Read

HIV TEST ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ಹೆಚ್‌ಐವಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧಾರ! ಯಾಕೆ ಹೀಗೆ?

2 Min Read

Team India Records in cricket ಟೀಮ್ ಇಂಡಿಯಾದ ವಿಶ್ವದಾಖಲೆ ಇನ್ನಷ್ಟು ವಿಶೇಷ

2 Min Read

You Might Also Like

ದೇಶಕರ್ನಾಟಕಪ್ರಮುಖ

New Rules On August 1 ಆಗಸ್ಟ್ 1ರಿಂದ ದೇಶದಲ್ಲಿ ಜಾರಿಗೆ ಬರಲಿರುವ ಹೊಸ ನಿಯಮಗಳು

2 Min Read
ಕರ್ನಾಟಕಪ್ರಮುಖ

Today Gold Rate ಬೆಂಗಳೂರು ಗೋಲ್ಡ್ ರೇಟ್ ಟುಡೆ (ಜುಲೈ 27): ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಏರಿಳಿತ

2 Min Read
ಕರ್ನಾಟಕಪ್ರಮುಖ

Karnataka Mansoon Report ಜುಲೈ 27ರಿಂದ ಆಗಸ್ಟ್ 1ರವರೆಗೆ ಕರ್ನಾಟಕದಲ್ಲಿ ಮಳೆ ಅಬ್ಬರ

1 Min Read
ಕರ್ನಾಟಕಪ್ರಮುಖ

Karnataka Cabinet Expension ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ನಿರ್ಣಾಯಕ ಘಟ್ಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?