Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್
ಕರ್ನಾಟಕಪ್ರಮುಖ

ಇಬ್ಬರನ್ನು ಬಲಿ ಪಡೆದಿದ್ದ ಕಾಡಾನೆ ಸೆರೆ: ಪ್ರತಿಭಟನಾಕಾರರ ಮೇಲೆ ಲಾಠಿ ಚಾರ್ಜ್

Share
1 Min Read
SHARE

https://youtube.com/shorts/9RsasXrq5aU?si=7o1s1Fcwa742mk87

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಮಗಳೂರು: ಒಂದೇ ವಾರದಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ಒಂಟಿ ಸಲಗವನ್ನು ಸೆರೆ ಹಿಡಿಯುವಲ್ಲಿ ಚಿಕ್ಕಮಗಳೂರು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ

ಚಿಕ್ಕಮಗಳೂರು ತಾಲೂಕಿನ ಬೆರಣಗೋಡು ಸಮೀಪದ ಕೆರೆಮನೆ ಬಳಿ ಅಧಿಕಾರಿಗಳು ಹಾಗೂ ವೈದ್ಯರ ತಂಡ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದು, ಎನ್​​ಆರ್​​ ಪುರ ತಾಲೂಕಿನ ಬಾಳೆಹೊನ್ನೂರಿನ ಹುಣಸೆಹಳ್ಳಿಯ ಕೆರೆಮನೆ ಬಳಿ ಸಾಕಾನೆಗಳ ಸಹಾಯದಿಂದ ಒಂಟಿ ಸಲಗವನ್ನು ಸೆರೆಹಿಡಿಯಲಾಗಿದೆ.

ಕಳೆದ ಸೋಮವಾರ ಚಿಕ್ಕಮಗಳೂರು ತಾಲೂಕಿನ ಹುಣಸೇಹಳ್ಳಿ ಸಮೀಪದ ಪುರ ಗ್ರಾಮದಲ್ಲಿ ಹಾವೇರಿ ಮೂಲದ ಕಾರ್ಮಿಕ ಯಲ್ಲಪ್ಪ ಎಂಬುವರನ್ನು ಕಾಡಾನೆ ಬಲಿ ಪಡೆದಿತ್ತು. ಇಂದು ಅದೇ ಜಾಗದಲ್ಲಿ ಬಳ್ಳಾರಿ ಮೂಲದ ಬೋರಮ್ಮ ಎನ್ನುವರನ್ನು ಬಲಿ ಪಡೆದಿದೆ.

ಏಳು ಕುಮ್ಕಿ ಆನೆಗಳು ಹಾಗೂ ಸುಮಾರು 75 ಸಿಬ್ಬಂದಿಗಳ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ ಸ್ಥಳದಿಂದ ಅಲ್ಪ ದೂರದಲ್ಲಿರುವ ಕಾಫಿ ತೋಟದಲ್ಲಿ ಕಾಡಾನೆಯನ್ನು ಪತ್ತೆ ಮಾಡಲಾಯಿತು. ಸೂಕ್ತ ಸಮಯದಲ್ಲಿ ಅರವಳಿಕೆ ಚುಚ್ಚುಮದ್ದು ನೀಡಿ ಆನೆಯನ್ನು ನಿತ್ರಾಣಗೊಳಿಸಿ, ಬಳಿಕ ಕುಮ್ಕಿ ಆನೆಗಳ ಸಹಾಯದಿಂದ ಕಾಡಾನೆಯನ್ನು ಸಂಪೂರ್ಣವಾಗಿ ನಿಯಂತ್ರಣಕ್ಕೆ ಪಡೆದು ಸೆರೆ ಹಿಡಿಯಲಾಯಿತು.

ಕಾಡಾನೆ ದಾಳಿಯಿಂದ ಮೃತಪಟ್ಟ ಮಹಿಳೆಯ ಶವವನ್ನು ಮುಂದಿಟ್ಟುಕೊಂಡು ರೈತ ಪರ ಸಂಘಟನೆಗಳು ಹಾಗೂ ಸ್ಥಳೀಯರು, ಕಾಫಿ ತೋಟದ ಕಾರ್ಮಿಕರು, ಕಾಫಿ ತೋಟದ ಮಾಲೀಕರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದರು. ಈ ವೇಳೆ ಪೊಲೀಸರು ಮೃತದೇಹವನ್ನು ಒತ್ತಾಯ ಪೂರ್ವಕವಾಗಿ ತೆರವುಗೊಳಿಸಲು ಮುಂದಾಗಿದ್ದರಿಂದ ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ವಶಕ್ಕೆ ಯತ್ನಿಸಿದಾಗ ಪ್ರತಿಭಟನಾಕಾರರು ಪೊಲೀಸ್ ವಾಹನವನ್ನೇ ಅಲುಗಾಡಿಸಿ ಕೆಳಗೆ ಬೀಳಿಸಲು ಯತ್ನಿಸಿದರು. ಇದರಿಂದ ಆಕ್ರೋಶ ಭರಿತರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದರು.

ಕಾಡಾನೆ ದಾಳಿಯಿಂದ ಉಂಟಾದ ನಷ್ಟಕ್ಕೆ ಪರಿಹಾರ ಕೇಳಿದ ಸ್ಥಳೀಯರ ಮೇಲೆ ಲಾಠಿ ಚಾರ್ಜ್ ಮಾಡಿದ ಕ್ರಮ ಖಂಡಿಸಿ ಇಂದು ಶೃಂಗೇರಿ ಬಂದ್‌‌ಗೆ ಕರೆಕೊಡಲಾಗಿದೆ.

https://www.newsics.com/2026/02/22/indias-shock-to-america-after-supreme-court-curbs-trump-tariffs/

TAGGED:Wild elephant that killed two people captured: Protesters lathi-charged
Share This Article
Facebook Twitter Copy Link Print
Previous Article ಟ್ರಂಪ್ ನಿವಾಸಕ್ಕೆ ಅಕ್ರಮವಾಗಿ ನುಗ್ಗಿದ ಶಸ್ತ್ರಧಾರಿ ವ್ಯಕ್ತಿ; ಸರ್ವಿಸ್ ಏಜೆಂಟ್ ಗುಂಡಿಗೆ ಬಲಿ!
Next Article ಬೇಸಿಗೆಯಲ್ಲಿ ಈ ಬಾರಿ ಬಿಸಿಲಿನ ಆರ್ಭಟ:ಹವಾಮಾನ ಇಲಾಖೆ ಎಚ್ಚರಿಕೆ ಏನು?

Popular Posts

ಪಾರ್ಕ್ ಮಾಡಿದ ವಾಹನದ ಮೇಲೆ ಮರ ಬಿದ್ದರೆ ಅದು ಮೋಟಾರ್ ಅಪಘಾತವಲ್ಲ : ಸುಪ್ರೀಂ ಕೋರ್ಟ್ ತೀರ್ಪು

1 Min Read

ಶಿಗೆಲ್ಲೋಸಿಸ್ ಸೋಂಕಿನ ಭೀತಿ: ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹೈಅಲರ್ಟ್

1 Min Read

ಅದೃಷ್ಟದ ಬಾಗಿಲು ತೆರೆದ ಲಾಟರಿ : ₹1,000 ಸಾಲ ಕೊಟ್ಟ ಸ್ನೇಹಿತನಿಗೆ ₹1 ಕೋಟಿ ಉಡುಗೊರೆ

2 Min Read

ವರ್ಕ್ ಫ್ರಮ್ ಹೋಮ್’ ಓಕೆ, ಆದರೆ ಮನೆಯಲ್ಲಿ ಕೂತು ಕೆಲಸ ಮಾಡುವಂತಿಲ್ಲ ‘ಜಿಪಿಎಸ್ ನಿಯಮ’ಕ್ಕೆ ಉದ್ಯೋಗಿಗಳು ಶಾಕ್!

2 Min Read

You Might Also Like

ದೇಶಪ್ರಮುಖ

Jaspal Rana ಪ್ರಸಿದ್ದ ಶೂಟಿಂಗ್ ತರಬೇತುದಾರ ಜಸ್ಪಾಲ್ ರಾಣಾ ಇನ್ನಿಲ್ಲ

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss Kannada 13 ಬಿಗ್‌ ಬಾಸ್‌ 13 ಸಂಭಾವ್ಯ ಸ್ಪರ್ಧಿಗಳ ಪಟ್ಟಿ?ಹೆಸರುಗಳು ವೈರಲ್‌

3 Min Read
ಕರ್ನಾಟಕಪ್ರಮುಖ

ಊಟ, ವಸತಿ ವ್ಯವಸ್ಥೆ ಸರಿಯಿಲ್ಲವೆಂದು ಪಿಜಿ ಮಾಲೀಕರ ವಿರುದ್ಧ ರಾತ್ರೋರಾತ್ರಿ ರಸ್ತೆಗಿಳಿದ ಯುವತಿಯರು

2 Min Read
ಕರ್ನಾಟಕದೇಶಪ್ರಮುಖ

ಪೆಟ್ರೋಲ್ ಬಂಕ್‌ಗಳಲ್ಲಿ ಕೈಗಾರಿಕೆಗಳ ಬಲ್ಕ್ ಖರೀದಿಗೆ ಹೊಸ ನಿಯಮ ಜಾರಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?