https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಜಮ್ಮು ಮತ್ತು ಕಾಶ್ಮೀರ: ಪೂರ್ವ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಂದು ಭಾರತೀಯ ಸೇನೆ ಭರ್ಜರಿ ಬೇಟೆಯಾಡಿದೆ. ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯಲ್ಲಿ ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆಯ ಉನ್ನತ ಕಮಾಂಡರ್ ಸೇರಿದಂತೆ ಇಬ್ಬರನ್ನು ಹತ್ಯೆ ಮಾಡಲಾಗಿತ್ತು.
ಆದರೆ ಈ ಆಪರೇಷನ್‌ಗೆ ಸಾಥ್ ನೀಡಿದ್ದು ನಾಯಿ! ‘ಟೈಸನ್’ ಎಂಬ ಹೆಸರಿನ ಸೇನಾ ಸ್ನಿಫರ್ ಶ್ವಾನವು ಭದ್ರತಾ ಪಡೆಗಳು ಉಗ್ರರ ಸ್ಥಳವನ್ನು ಗುರುತಿಸಲು ಸಹಾಯ ಮಾಡಿತು. ಅಲ್ಲದೇ ತನ್ನ ಕಾಲಿಗೆ ಗುಂಡೇಟು ಬಿದ್ದಿದೆ.
ಕಳೆದ ಎರಡು ವರ್ಷಗಳಿಂದ ಈ ಪ್ರದೇಶದಲ್ಲಿ ಪರಾರಿಯಾಗಿದ್ದ ಮತ್ತು ಕನಿಷ್ಠ 20 ಬಾರಿ ಪ್ರಾಣಾಪಾಯದಿಂದ ಪಾರಾಗಿದ್ದ ಜೆಇಎಂ ಭಯೋತ್ಪಾದಕ ಸೈಫುಲ್ಲಾ ಸೇರಿದಂತೆ ಮೂವರು ಉಗ್ರರನ್ನು ಭದ್ರತಾಪಡೆಗಳು ಹೊಡೆದುರುಳಿಸಿವೆ. ಹತ್ಯೆಗೀಡಾದ ಭಯೋತ್ಪಾದಕರ ವಶದಿಂದ ಎರಡು ಎಕೆ-47 ರೈಫಲ್‌ಗಳು, ಮದ್ದುಗುಂಡುಗಳು ಮತ್ತು ಇತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಗ್ರರು ಭದ್ರತಾ ಪಡೆಗಳೊಂದಿಗೆ ಬಹಳ ದಿನದಿಂದ ಕಣ್ಣಾಮುಚ್ಚಾಲೆ ಆಟದಲ್ಲಿ ತೊಡಗಿದ್ದರು. ಆದರೆ ಟೈಸನ್ ಅವರ ಅಡಗುತಾಣವನ್ನು ನಿಖರವಾಗಿ ಪತ್ತೆ ಹಚ್ಚಿ, ಭಯೋತ್ಪಾದಕರನ್ನು ಹೊಡೆದುರುಳಿಸುವಲ್ಲಿ ನೆರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
https://www.newsics.com/2026/02/23/rain-likely-in-these-districts-for-the-next-two-days/