https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ತಮ್ಮ ವಿವಿಧ ಬೇಡಿಕೆಗಳ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು ಎರಡು ಹಂತದಲ್ಲಿ ಮುಷ್ಕರ ನಡೆಸಲು ಮುಂದಾಗಿದ್ದು, ಮಾರ್ಚ್ 11 ರಿಂದ ಅನಿರ್ದಿಷ್ಟ ಮುಷ್ಕರ ನಡೆಸಲು ಮುಂದಾಗಿದ್ದಾರೆ.
ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ಕ್ರನಾಟಕ ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖಾ ನೌಕರರ ಕೇಂದ್ರ ಸಂಘ ಮತ್ತು ಇಲಾಖೆಯ ಎಲ್ಲಾ ವೃಂದ ಸಂಘಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದ ಸರ್ಕಾರಿ ಆಸ್ಪತ್ರೆಯ ವೈದ್ಯರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಹಲವು ಸೇವೆಗಳು ಬಂದ್ ಆಗಲಿವೆ.
ಬಂದ್ ಮೂಲಕ ಮುಷ್ಕರಕ್ಕೆ ಮುಂದಾಗಿರುವ ರಾಜ್ಯದ ವೈದ್ಯರು, ರಾಜ್ಯ ಸರ್ಕಾರಕ್ಕೆ ಸೆಡ್ಡು ಹೊಡೆಯಲಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರದೊಂದಿಗೆ ನಡೆದ ಸಭೆಯು ಸಂಪೂರ್ಣವಾಗಿ ವಿಫಲವಾಗಿರುವ ಹಿನ್ನೆಲೆಯಲ್ಲಿ ಸಭೆ ನಡೆಸಿದ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು, ಬಂದ್ ನಡೆಸಲು ತೀರ್ಮಾನಿಸಿದ್ದಾರೆ
ಅನಿರ್ದಿಷ್ಟ ಮುಷ್ಕರದ ಮೊದಲ ಹಂತವಾಗಿ ಮಾರ್ಚ್ 11ರಿಂದ ಮಾರ್ಚ್ 15 ರವರೆಗೆ ಓಪಿಡಿ ಸೇವೆ (ಹೊರರೋಗಿಗಳ ಸೇವೆ) ಬಂದ್ ಮಾಡಲು ನಿರ್ಧರಿಸಿರುವ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳು, ತುರ್ತು ಸೇವೆ ಮಾತ್ರ ಇರಲಿದೆ ಎಂದು ತಿಳಿಸಿದ್ದಾರೆ. ಮುಂಬರುವ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಬೇಡಿಕೆ ಈಡೇರುವವರೆಗೆ ತಮ್ಮ ಹೋರಾಟ ಮುಂದುವರೆಸುವುದಾಗಿ ವೈದ್ಯಾಧಿಕಾರಿಗಳ ಸಂಘದ ರಾಜ್ಯಾಧ್ಯಕ್ಷ ಡಾ ರವೀಂದ್ರನಾಛ ಎನ್ ಮೇಟಿ, ಕಾರ್ಯದರ್ಶಿ ಡಾ ತಿಮ್ಮರಾಜು ಪಿಆರ್, ಆರೋಗ್ಯ ಇಲಾಖೆ ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ ಬಳ್ಳಾರಿ, ಕಾರ್ಯದರ್ಶಿ ಎಚ್ ಪುಟ್ಟರಾಜು ತಿಳಿಸಿದ್ದಾರೆ.