https://youtube.com/shorts/N5x7_cDJ-pw?si=NiCZz1Vb_Is4d402
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರಿನ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಗೆಳೆಯನನ್ನು ನಂಬಿ ಬರೋಬ್ಬರಿ 7 ಕೋಟಿ ರೂಪಾಯಿ ಸೈಬರ್ ವಂಚನೆಯ ಜಾಲದಲ್ಲಿ ಸಿಲುಕಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಆಯುಷ್ & ಇತರರು ಸೇರಿಕೊಂಡು ವಿದ್ಯಾರ್ಥಿಯೊಬ್ಬನಿಗೆ ವಂಚನೆ ಮಾಡಿದ್ದಾರೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಕಳೆದ ಒಂದು ವರ್ಷದಿಂದ ಸ್ನೇಹಿತರಾಗಿದ್ದರು ಎಂದು ತಿಳಿದುಬಂದಿದೆ.
2025ರ ನವೆಂಬರ್‌ನಲ್ಲಿ, ನನ್ನ ಬ್ಯಾಂಕ್ ಖಾತೆಯಲ್ಲಿ ಹಣದ ಕೊರತೆಯಿಂದಾಗಿ ಅದು ಬ್ಲಾಕ್ ಆಗಿದೆ, ತುರ್ತಾಗಿ ನಿನ್ನ ಖಾತೆ ಬೇಕು ಎಂದು ಆಯುಷ್ ವಿದ್ಯಾರ್ಥಿಯನ್ನು ನಂಬಿಸಿದ್ದ. ಗೆಳೆಯನ ಮಾತನ್ನು ನಂಬಿದ ವಿದ್ಯಾರ್ಥಿ, ತನ್ನ ಬ್ಯಾಂಕ್ ಖಾತೆಯ ಸಂಪೂರ್ಣ ವಿವರಗಳನ್ನು ಆತನಿಗೆ ನೀಡಿದ್ದಾನೆ.
ಕೇವಲ ಮಾಹಿತಿ ಮಾತ್ರವಲ್ಲದೆ, ಎಟಿಎಂ ಕಾರ್ಡ್‌ಗೆ ಲಿಂಕ್ ಆಗಿದ್ದ ಏರ್‌ಟೆಲ್ ಸಿಮ್ ಕಾರ್ಡ್. ನೆಟ್ ಬ್ಯಾಂಕಿಂಗ್ ಯೂಸರ್ ಐಡಿ ಮತ್ತು ಪಾಸ್‌ವರ್ಡ್. ಇವೆಲ್ಲವನ್ನೂ ಆಯುಷ್‌ಗೆ ಕಳುಹಿಸಿಕೊಟ್ಟಿದ್ದಾನೆ. ಇದನ್ನು ಪಡೆದಿದ್ದಾಗಿ ಆಯುಷ್ ವಾಟ್ಸಾಪ್ ಮೂಲಕ ಖಚಿತಪಡಿಸಿದ್ದನು. ಕೆಲವು ತಿಂಗಳ ನಂತರ, ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ ಆತನ ಖಾತೆಯಲ್ಲಿ ನಡೆಯುತ್ತಿರುವ ಸಂಶಯಾಸ್ಪದ ವಹಿವಾಟುಗಳ ಬಗ್ಗೆ ಮಾಹಿತಿ ನೀಡಿದ್ದಾರೆ.
ತನಿಖೆಯ ವೇಳೆ, ಈ ಖಾತೆಯ ಮೂಲಕ ಸುಮಾರು 7 ಕೋಟಿ ರೂಪಾಯಿ ಹಣ ವರ್ಗಾವಣೆಯಾಗಿರುವುದು ಮತ್ತು ಇದು ಸೈಬರ್ ವಂಚನೆಗೆ ಸಂಬಂಧಿಸಿದ್ದು ಎಂದು ತಿಳಿದುಬಂದಿದೆ. ತಕ್ಷಣವೇ ಆತನ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ತಾನು ನಂಬಿದ ಸ್ನೇಹಿತನೇ ತನ್ನನ್ನು ವಂಚನೆ ಜಾಲಕ್ಕೆ ಬಳಸಿಕೊಂಡಿದ್ದಾನೆ ಎಂದು ಅರಿತ ವಿದ್ಯಾರ್ಥಿ ಕೂಡಲೇ ಪೊಲೀಸರ ಮೊರೆ ಹೋಗಿದ್ದಾನೆ. ಪ್ರಸ್ತುತ ಬೆಂಗಳೂರಿನ ಉತ್ತರ ವಿಭಾಗದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಾಗಿದೆ.
https://www.newsics.com/2026/02/25/revenue-minister-krishna-byre-gowda-launches-automated-mutation/