Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು
ಕರ್ನಾಟಕಪ್ರಮುಖ

ನೌಕರರನ್ನ ವಜಾಗೊಳಿಸೋ ಮುನ್ನ ವಿಚಾರಣೆ ಕಡ್ಡಾಯ : ಹೈಕೋರ್ಟ್ ತೀರ್ಪು

Share
1 Min Read
SHARE

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com

ಸಾರಿಗೆ ಬಸ್ ನೌಕರನ ಪ್ರಕರಣ ಒಂದರಲ್ಲಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ಒಂದನ್ನು ನೀಡಿದ್ದು, ನೌಕರನ ಮೇಲೆ ಗಂಭೀರ ಆರೋಪಗಳಿದ್ದರೂ ಸೂಕ್ತ ಇಲಾಖಾ ವಿಚಾರಣೆ ನಡೆಸದೆ ಮತ್ತು ಆತನ ವಾದ ಆಲಿಸದೆ ಸೇವೆಯಿಂದ ವಜಾ ಮಾಡುವುದು ಕಾನೂನು ಬಾಹಿರ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು (NWKSRTC) ತನ್ನ ಭದ್ರತಾ ಸಿಬ್ಬಂದಿಯನ್ನು ಕೆಲಸದಿಂದ ತೆಗೆದು ಹಾಕಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಧಾರವಾಢ ಪೀಠದಲ್ಲಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಹೇಮಲೇಖಾ ಅವರಿದ್ದ ಏಕಸದಸ್ಯ ಪೀಠವು ಈ ಆದೇಶ ನೀಡಿದೆ.
ಬೆಳಗಾವಿಯ ಗೋಕಾಕ್ ತಾಲೂಕಿನ ಸಂಜುಕುಮಾ‌ರ್ ಎಂಬುವರು ನಿಗಮದ ನೌಕರರಾಗಿದ್ದ ತಂದೆಯ ನಿಧನದ ನಂತರ ಅನುಕಂಪದ ಆಧಾರದಲ್ಲಿ ಭದ್ರತಾ ಸಿಬ್ಬಂದಿಯಾಗಿ ನೇಮಕಗೊಂಡಿದ್ದರು. ಕೆಲಸಕ್ಕೆ ಸೇರುವಾಗ ನಕಲಿ ಶೈಕ್ಷಣಿಕ ದಾಖಲೆಗಳನ್ನು ನೀಡಿದ್ದಾರೆ ಎಂಬ ಆರೋಪದಲ್ಲಿ ಅವರನ್ನು 2024ರ ಡಿ.13ರಂದು ಸೇವೆಯಿಂದ ವಜಾಗೊಳಿಸಲಾಗಿತ್ತು. ಇದನ್ನು ಪ್ರಶ್ನಿಸಿ
ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಪೀಠ, ನೌಕರನ ಮೇಲೆ ನಕಲಿ ದಾಖಲೆ ನೀಡಿದ ಆರೋಪವಿದ್ದಾಗ, ಅದು ಆತನ ವ್ಯಕ್ತಿತ್ವಕ್ಕೆ ಕಳಂಕ ತರುವಂತಹದ್ದಾಗಿರುತ್ತದೆ. ಅಂತಹ ಸಂದರ್ಭದಲ್ಲಿ ಇಲಾಖಾ ವಿಚಾರಣೆ ನಡೆಸುವುದು ಮತ್ತು ನೌಕರನಿಗೆ ತನ್ನ ವಾದ ಮಂಡಿಸಲು ಅವಕಾಶ ನೀಡುವುದು ಕಡ್ಡಾಯ ಎಂದು ಹೇಳಿದೆ.
ನೌಕರನು ಪ್ರೊಬೇಷನರಿ ಅವಧಿಯಲ್ಲಿದ್ದರೂ, ಆತನ ವಜಾ ಆದೇಶವು ಶಿಕ್ಷಾರ್ಹ ರೂಪದಲ್ಲಿದ್ದರೆ, ಅದಕ್ಕೂ ಮುನ್ನ ವಿಚಾರಣೆ ನಡೆಸಲೇಬೇಕು ಎಂದು ಸುಪ್ರೀಂ ಕೋರ್ಟ್ ನೀಡಿದ್ದ ತೀರ್ಪನ್ನು ಹೈಕೋರ್ಟ್ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ. ಅರ್ಜಿದಾರರ ವಜಾ ಆದೇಶವನ್ನು ರದ್ದುಪಡಿಸಿರುವ ನ್ಯಾಯಾಲಯ, ತಕ್ಷಣವೇ ಕೆಲಸಕ್ಕೆ ನೇಮಿಸಿಕೊಳ್ಳುವಂತೆ ನಿಗಮಕ್ಕೆ ನಿರ್ದೇಶನ ನೀಡಿದೆ. ಅಲ್ಲದೇ ಇಲಾಖಾ ವಿಚಾರಣೆ ನಡೆಸಿ ಪ್ರಕರಣವನ್ನು ಕಾನೂನುಬದ್ಧವಾಗಿ ನಿರ್ಧರಿಸುವ ಸ್ವಾತಂತ್ರ್ಯ ನಿಗಮಕ್ಕಿದೆ ಎಂದು ಸ್ಪಷ್ಟಪಡಿಸಲಾಗಿದೆ.

ರಶ್ಮಿಕಾ ಅವರ ಬ್ರೈಡಲ್ ವೇಲ್ ಮೇಲಿತ್ತು ವಿಜಯ್‌ಗಾಗಿ ವಿಶೇಷ ಸಂದೇಶ

TAGGED:Hearing mandatory before dismissing employees: High Court ruling
Share This Article
Facebook Twitter Copy Link Print
Previous Article ರಶ್ಮಿಕಾ ಅವರ ಬ್ರೈಡಲ್ ವೇಲ್ ಮೇಲಿತ್ತು ವಿಜಯ್‌ಗಾಗಿ ವಿಶೇಷ ಸಂದೇಶ
Next Article ಇನ್ಮುಂದೆ ಜ್ಯೋತಿಷಿಗಳ ಮಾತನ್ನ ಸೀರಿಯಸ್ ಆಗಿ ತಗೋತೀರಾ?; ಈ ನಟಿ ಮಾತು ಕೇಳಿ

Popular Posts

ಯೂಟ್ಯೂಬ್ ನೋಡಿ ನಕಲಿ ನೋಟು ಮುದ್ರಿಸುತ್ತಿದ್ದ ದಂಪತಿ ಅರೆಸ್ಟ್

1 Min Read

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read

ತತ್ಕಾಲ್ ಟಿಕೆಟ್ ಕೇವಲ 1 ನಿಮಿಷದಲ್ಲಿ ಕನ್‌ಫರ್ಮ್ ಆಗಬೇಕಾ?! ಈ 4 ಸೀಕ್ರೆಟ್ ಟ್ರಿಕ್ಸ್ ಫಾಲೋ ಮಾಡಿ

3 Min Read

ಮಜಾ ಭಾರತ ಖ್ಯಾತಿಯ ಹಾಸ್ಯ ಕಲಾವಿದನ ಸಾವಿನ ಸುತ್ತ ಅನುಮಾನದ ಹುತ್ತ!

2 Min Read

You Might Also Like

ಪ್ರಮುಖ

ಮಹಿಳೆಯರಿಗೆ ಕೇಂದ್ರ ಸರ್ಕಾರದ ಬಂಫರ್ ಗಿಫ್ಟ್: ಪ್ರತಿ ತಿಂಗಳು ಖಾತೆಗೆ ಸೇರಲಿದೆ ₹7,000 ಸ್ಟೈಫಂಡ್!

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

ಇನ್ಮುಂದೆ ರಾಜ್ಯ ಸರ್ಕಾರಿ ನೌಕರರಿಗೆ ಕರ್ತವ್ಯ ಆಪ್ ನಲ್ಲಿ ಹಾಜರಾತಿ ಕಡ್ಡಾಯ; ಸರ್ಕಾರದಿಂದ ಖಡಕ್ ಆದೇಶ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?