https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಬಿಸಿಲಿನ ಬೇಗೆ ಹೆಚ್ಚುವ ಸಮಯದಲ್ಲಿ ಮಳೆ ಬುರುತ್ತಿರುವುದು ಎಲ್ಲರ ಆಶ್ಚರ್ಯಕ್ಕೆ ಕಾರಣವಾಗಿದೆ. ಆದ್ರೆ ಇಂದು ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹವಾಮಾನ ಇಲಾಖೆ ಬಂಗಾಳಕೊಲ್ಲಿಯ ವಾಯಭಾರ ಕುಸಿತದಿಂದ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರಿನಲ್ಲಿ ಗುಡುಗು ಮಿಂಚು ಸಹಿತ ಮಳೆಯ ಮುನ್ಸೂಚನೆ ನೀಡಿದೆ.
ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚಿನೊಂದಿಗೆ ಮಧ್ಯಂತರ ಮಳೆಯಾಗಲಿದೆ. ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಹಾಸನ, ಕೊಡಗು ಮತ್ತು ಮೈಸೂರಿನಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಹಳದಿ ಎಚ್ಚರಿಕೆ ನೀಡಲಾಗಿದೆ. ತೀವ್ರ ಹವಾಮಾನದ ನಿರೀಕ್ಷೆಯಿಲ್ಲದಿದ್ದರೂ, ಎಚ್ಚರಿಕೆಯ ಅಗತ್ಯವನ್ನು ಈ ಎಚ್ಚರಿಕೆ ಸೂಚಿಸುತ್ತದೆ.