Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸಚಿವೆ ಹೆಬ್ಬಾಳ್ಕರ್ ತವರೂರಲ್ಲೇ ಮಹಿಳಾ ಶೋಷಣೆ: ವಾರ್ಡನ್ ಮೇಲೆ ಲೈಂಗಿಕ ಕಿರುಕುಳ ಆರೋಪ
ಕರ್ನಾಟಕಪ್ರಮುಖ

ಸಚಿವೆ ಹೆಬ್ಬಾಳ್ಕರ್ ತವರೂರಲ್ಲೇ ಮಹಿಳಾ ಶೋಷಣೆ: ವಾರ್ಡನ್ ಮೇಲೆ ಲೈಂಗಿಕ ಕಿರುಕುಳ ಆರೋಪ

Share
2 Min Read
SHARE

 

https://youtube.com/shorts/OcRzQ68lM7k?si=kBWGhvCtygy6kinF

Subscribe ನ್ಯೂಸಿಕ್ಸ್ ಕನ್ನಡ

newsics.com 

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆ ಬೆಳಗಾವಿಯಲ್ಲಿ ಅವರದೇ ಇಲಾಖೆಯ ಅಧಿಕಾರಿಯೊಬ್ಬರು ಮಹಿಳಾ ವಸತಿ ನಿಲಯದ ವಾರ್ಡನ್ ಮೇಲೆ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಮತ್ತು ಜನಾಂಗೀಯ ನಿಂದನೆ ಮಾಡಿರುವ ಆರೋಪ ಕೇಳಿಬಂದಿದೆ.

ಈ ಸಂಬಂಧ ಮಹಿಳೆಯೊಬ್ಬರು ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ದೂರು ಸಲ್ಲಿಸಿದ್ದಾರೆ. ಮಹಾವೀರ ನಗರ ನಿವಾಸಿ ಉಮಾದೇವಿ ನಾಗರಾಜ ಮಲಾಜೂರೆ (30) ಅವರು ನೀಡಿರುವ ಪಿರ್ಯಾದಿಯಲ್ಲಿ, ಅವರು 2024ರ ಆಗಸ್ಟ್ 13ರಂದು ಹೊರಗುತ್ತಿಗೆ ಆಧಾರದ ಮೇಲೆ ಮಹಿಳಾ ವಸತಿ ನಿಲಯದಲ್ಲಿ ವಾರ್ಡನ್ ಆಗಿ ಸೇವೆಗೆ ಸೇರಿದ್ದಾಗಿ ತಿಳಿಸಿದ್ದಾರೆ. ಸೇವೆ ಸಲ್ಲಿಸುತ್ತಿದ್ದ ಅವಧಿಯಲ್ಲಿ ಇಲಾಖೆಯ ಸಹಾಯಕ ನಿರ್ದೇಶಕ ಮತ್ತು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಮಗೆ ಮೇಲಿಂದ ಮೇಲೆ ಮಾನಸಿಕ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ.

ದೂರಿನ ವಿವರಗಳ ಪ್ರಕಾರ, ಆರೋಪಿತ ಅಧಿಕಾರಿ ವಸತಿ ನಿಲಯದ ಆದಾಯದಿಂದ ಪ್ರತಿ ತಿಂಗಳು ₹10,000 ನೀಡುವಂತೆ ಒತ್ತಾಯ ಮಾಡುತ್ತಿದ್ದರು. ಹಣ ನೀಡದಿದ್ದರೆ ಕಚೇರಿಯಲ್ಲಿ ಹೆಚ್ಚು ಹೊತ್ತು ಉಳಿಯುವಂತೆ ಮಾಡುತ್ತಿದ್ದರು. ಖಾಸಗಿ ವಾಹನದಲ್ಲಿ ಗೋವಾಕ್ಕೆ ಬರುವಂತೆ ಒತ್ತಾಯಿಸುವುದು, ರಾತ್ರಿ ವೇಳೆ ಮದ್ಯಪಾನ ಸ್ಥಿತಿಯಲ್ಲಿ ಕರೆ ಮಾಡುವುದು ಸೇರಿದಂತೆ ಅನೇಕ ರೀತಿಯಲ್ಲಿ ಕಿರುಕುಳ ನೀಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಇದೇ ವೇಳೆ ಆರೋಪಿತ ಅಧಿಕಾರಿ ತನ್ನ ಗಂಡನ ಬಗ್ಗೆ ತಪ್ಪು ಮಾಹಿತಿ ನೀಡಿ ಕುಟುಂಬದಲ್ಲಿ ಭಿನ್ನಾಭಿಪ್ರಾಯ ಉಂಟುಮಾಡಲು ಯತ್ನಿಸಿದರು. ಜೊತೆಗೆ ಜನಾಂಗೀಯವಾಗಿ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂದೂ ಆರೋಪಿಸಲಾಗಿದೆ. ನಿರಂತರ ಕಿರುಕುಳದಿಂದ ಭಯಗೊಂಡು ತಾನು ಕೆಲಸಕ್ಕೆ ಹಾಜರಾಗುವುದನ್ನು ನಿಲ್ಲಿಸಿದ್ದಾಗಿ ಉಮಾದೇವಿ ತಿಳಿಸಿದ್ದಾರೆ.

ತಮಗಾದ ಅನ್ಯಾಯದ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿರುವ ಅವರು, ಸಂಬಂಧಿಸಿದ ಅಧಿಕಾರಿಯ ವಿರುದ್ಧ ಲೈಂಗಿಕ ಕಿರುಕುಳ, ಮಾನಸಿಕ ಹಿಂಸೆ ಹಾಗೂ ಜನಾಂಗೀಯ ನಿಂದನೆ ಆರೋಪದಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಮನವಿ ಮಾಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರ ತವರು ಜಿಲ್ಲೆಯಲ್ಲೇ ಅವರ ಇಲಾಖೆಯಲ್ಲಿ ನಡೆದಿರುವ ಈ ಘಟನೆ ಸೂಕ್ತ ತನಿಖೆ ನಡೆದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ದಾರಿ ಮಾಡಿಕೊಡಬೇಕೆಂಬ ಒತ್ತಾಯ ಕೇಳಿಬಂದಿದೆ.

https://www.newsics.com/2026/02/28/a-young-man-kissed-a-college-girl-on-the-lips-in-the-middle-of-the-street/

TAGGED:Minister Hebbalkar exploits women in her hometown: Warden accused of sexual harassment
Share This Article
Facebook Twitter Copy Link Print
Previous Article ನಡುರಸ್ತೆಯಲ್ಲೇ ಕಾಲೇಜು ಹುಡುಗಿಯರಿಗೆ ಲಿಪ್​​​ ಕಿಸ್ ಮಾಡಿದ ಯುವಕ!
Next Article ಹೆಣ್ಣು ಮಗುವಿಗೆ ಜನ್ಮ ನೀಡಿದ 16ರ ಬಾಲಕಿ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?