https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ದೇವನಹಳ್ಳಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇಪಾಳದ ಕಠ್ಮಂಡುಗೆ ತೆರಳಿದ್ದ 170 ಪ್ರಯಾಣಿಕರಿದ್ದ ವಿಮಾನ ಅಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸಾಗಿದೆ.
ಗುರುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನಿಂದ ಟೇಕಾಫ್ ಆದ ವಿಮಾನ ಮಧ್ಯಾಹ್ನ ಕಠ್ಮಂಡುವಿನಲ್ಲಿ ಲ್ಯಾಂಡ್ ಆಗಬೇಕಿತ್ತು. ಆದರೆ, ಅಲ್ಲಿನ ಹವಾಮಾನ ವೈಪರಿತ್ಯದಿಂದ ಲ್ಯಾಂಡ್ ಮಾಡಲು ಅನುಮತಿ ಸಿಗದ ಕಾರಣ ಸಿಕ್ಕಿರಲಿಲ್ಲ. ಪರಿಣಾಮ 30 ಗಂಟೆಗಳ ಕಾಲ ವಿಮಾನದಲ್ಲೇ ಸುತ್ತಾಡಿಸಿ, ಬಳಿಕ ಶನಿವಾರ ರಾತ್ರಿ ವಾಪಸ್ ಬೆಂಗಳೂರಿಗೆ ತಂದು ಬಿಡಲಾಗಿದೆ. ಇದರಿಂದ ಪ್ರಯಾಣಿಕರು, ವಿಮಾನಯಾನ ಸಂಸ್ಥೆಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಸತತ 30 ಗಂಟೆಗಳ ಕಾಲ ವಿಮಾನದಲ್ಲಿಯೇ ಸುತ್ತಾಡಿಸಿರುವುದು ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಏರ್ ಇಂಡಿಯಾ ಸಿಬ್ಬಂದಿಯ ನಿರ್ಲರ್ಕ್ಷ್ಯದ ವಿರುದ್ಧ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 2ರಲ್ಲಿ ಪ್ರಯಾಣಿಕರು ಪ್ರತಿಭಟನೆ ಸಹ ನಡೆಸಿದ್ದಾರೆ.
https://www.newsics.com/2026/02/28/16-year-old-girl-gives-birth-to-a-baby-girl/