https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ಇಸ್ರೇಲ್ ಇರಾನ್ ರಾಜಧಾನಿ ಟೆಹರಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇರಾನ್‌ನ ಸರ್ವೋಚ್ಚ ನಾಯಕ ಮತ್ತು ಅಧ್ಯಕ್ಷರ ಭವನಗಳ ಗುರಿಯಾಗಿಸಿ ದಾಳಿ ನಡೆದಿದ್ದು, ನಗರದಲ್ಲಿ ಸರಣಿ ಸ್ಫೋಟಗಳು ಸಂಭವಿಸಿವೆ.
ಶನಿವಾರ ಬೆಳಗಿನ ಜಾವ ಇಸ್ರೇಲ್ ನಡೆಸಿದ ದಾಳಿಯಿಂದಾಗಿ ಟೆಹ್ರಾನ್ನ ಡೌನ್ಟೌನ್ ಪ್ರದೇಶದಲ್ಲಿ ದೊಡ್ಡ ಮಟ್ಟದ ಸ್ಫೋಟದ ಶಬ್ದಗಳು ಕೇಳಿಬಂದಿವೆ. ಸ್ಫೋಟದ ತೀವ್ರತೆಗೆ ಆಕಾಶದತ್ತ ದಟ್ಟವಾದ ಹೊಗೆ ಆವರಿಸಿರುವ ವಿಡಿಯೋಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
ಸ್ಫೋಟ ಸಂಭವಿಸಿರುವುದನ್ನು ಇರಾನ್ನ ಸರ್ಕಾರಿ ದೂರದರ್ಶನ ದೃಢಪಡಿಸಿದೆ. ಆದರೆ, ದಾಳಿಯಿಂದ ಸಂಭವಿಸಿದ ಆಸ್ತಿಪಾಸ್ತಿ ಹಾನಿ ಅಥವಾ ಸಾವುನೋವುಗಳ ಬಗ್ಗೆ ಇನ್ನು ಯಾವುದೇ ನಿಖರ ಮಾಹಿತಿಯನ್ನು ಬಿಟ್ಟುಕೊಟ್ಟಿಲ್ಲ.
ಇರಾನ್ನ ಪರಮಾಣು ಕಾರ್ಯಕ್ರಮದ ವಿಚಾರವಾಗಿ ಈಗಾಗಲೇ ಇರಾನ್ ಮತ್ತು ಅಮೆರಿಕ ನಡುವೆ ಶೀತಲ ಸಮರ ನಡೆಯುತ್ತಿದೆ. ಇಂತಹ ಸಂದರ್ಭದಲ್ಲೇ ಇಸ್ರೇಲ್ ನೇರ ದಾಳಿಗೆ ಮುಂದಾಗಿರುವುದು ವಿಶ್ವದಾದ್ಯಂತ ಆತಂಕ ಮೂಡಿಸಿದೆ.
https://x.com/ANI/status/2027637957935698338?s=20