Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಂಧ್ರಪ್ರದೇಶದಲ್ಲಿ ಪಟಾಕಿ ದುರಂತಕ್ಕೆ 18 ಮಂದಿ ಬಲಿ
ದೇಶಪ್ರಮುಖ

ಆಂಧ್ರಪ್ರದೇಶದಲ್ಲಿ ಪಟಾಕಿ ದುರಂತಕ್ಕೆ 18 ಮಂದಿ ಬಲಿ

Share
2 Min Read
SHARE

https://youtube.com/shorts/HPVnxKDV8XI?si=2U7j97VieswUTk3f

Subscribe ನ್ಯೂಸಿಕ್ಸ್ ಕನ್ನಡ

newsics.com

ಪಟಾಕಿ ತಯಾರಿಕಾ ಘಟಕವೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟ ಮತ್ತು ಅಗ್ನಿ ದುರಂತಕ್ಕೆ 18 ಮಂದಿ ಬಲಿಯಾದ ಘಟನೆ ಆಂಧ್ರಪ್ರದೇಶದ ಕಾಕಿನಾಡ ಜಿಲ್ಲೆಯಲ್ಲಿ ನಡೆದಿದೆ.

ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ಪಟಾಕಿ ತಯಾರಿಕಾ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಿದ್ದು, ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಾರ್ಖಾನೆಯನ್ನು ಆವರಿಸಿಕೊಂಡಿದೆ. ವಿಷಯ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ಎಂದು ನಂಬಲಾಗಿದೆ.
ತನಿಖೆಗೆ ಆದೇಶ
ಕಾಕಿನಾಡ ಜಿಲ್ಲೆಯ ಸಾಮರ್ಲಕೋಟ ಮಂಡಲದ ವೆಟ್ಲಪಾಲಂ-ಜಿ. ಮೇಡುಪಾಡು ನಡುವೆ ಇರುವ ಪಟಾಕಿ ತಯಾರಿಕಾ ಘಟಕದಲ್ಲಿ ಶನಿವಾರ ಮಧ್ಯಾಹ್ನ ಸ್ಫೋಟ ಸಂಭವಿಸಿದೆ.ಸ್ಫೋಟದ ತೀವ್ರತೆ ಎಷ್ಟಿತ್ತೆಂದರೆ, ಕಾರ್ಮಿಕರ ಮೃತದೇಹಗಳು ನೂರಾರು ಅಡಿ ದೂರದ ಹೊಲಗದ್ದೆಗಳಿಗೆ ಹಾರಿಬಿದ್ದಿವೆ. ಸ್ಥಳೀಯ ಪೆದಪುಡಿ ರಸ್ತೆಯಲ್ಲಿರುವ ಅಡಪಾ ನಾನಿ ಎಂಬುವವರ ಕುಟುಂಬಕ್ಕೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಇಡೀ ಪ್ರದೇಶ ದಟ್ಟ ಹೊಗೆಯಿಂದ ಆವೃತವಾಗಿದೆ.
ಈ ಭೀಕರ ಸ್ಫೋಟಕ್ಕೆ ನಿಖರವಾದ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ದುರ್ಘಟನೆ ಸಂಭವಿಸುವ ವೇಳೆ ಕಾರ್ಖಾನೆಯಲ್ಲಿ 30 ಮಂದಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದು, ಅಪಘಾತದ ಹಿಂದಿನ ಕಾರಣಗಳನ್ನು ಪತ್ತೆಹಚ್ಚಲು ತನಿಖೆಗೆ ಆದೇಶಿಸಿದ್ದಾರೆ. ಈ ದುರಂತವು ಇಡೀ ಜಿಲ್ಲೆಯಾದ್ಯಂತ ಶೋಕದ ಛಾಯೆ ಮೂಡಿಸಿದೆ. ಮೃತರ ಕುಟುಂಬಗಳಿಗೆ ಸರ್ಕಾರವು ಶೀಘ್ರದಲ್ಲೇ ಪರಿಹಾರ ಘೋಷಿಸುವ ಸಾಧ್ಯತೆಯಿದೆ.
ಮೃತಪಟ್ಟವರಲ್ಲಿ ಮಹಿಳೆಯರೇ ಹೆಚ್ಚು
ಮೃತಪಟ್ಟವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಸ್ಫೋಟದ ಸಮಯದಲ್ಲಿ ಸುಮಾರು 30ಕ್ಕೂ ಹೆಚ್ಚು ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕಾರ್ಖಾನೆಯಲ್ಲಿ ಅಪಾರ ಪ್ರಮಾಣದ ಸ್ಫೋಟಕ ವಸ್ತುಗಳಿರುವುದರಿಂದ ಬೆಂಕಿ ಇನ್ನೂ ಧಗಧಗಿಸುತ್ತಿದೆ. ಪದೇ ಪದೇ ಸಣ್ಣ ಪ್ರಮಾಣದ ಸ್ಫೋಟಗಳು ಸಂಭವಿಸುತ್ತಲೇ ಇರುವುದು ರಕ್ಷಣಾ ಕಾರ್ಯಾಚರಣೆಗೆ ದೊಡ್ಡ ಅಡ್ಡಿಯಾಗಿದೆ. ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೂ ಕೆಲವರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಆತಂಕ ಎದುರಾಗಿದೆ.
ನಿಯಮ ಮೀರಿ ಪಟಾಕಿ ತಯಾರಿ?
ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಸ್ಫೋಟಕಗಳನ್ನು ಸಂಗ್ರಹಿಸಿ ಪಟಾಕಿ ತಯಾರಿಸುತ್ತಿದ್ದದ್ದೇ ಈ ಭೀಕರ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಶಂಕಿಸಲಾಗಿದೆ. ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ನಿರಂತರ ಸ್ಫೋಟದ ಸದ್ದು ಕೇಳಿಬರುತ್ತಿರುವುದರಿಂದ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ತೀವ್ರ ಭೀತಿ ಆವರಿಸಿದೆ.

ವಿವಾಹ ಸಂಭ್ರಮ ಬೆನ್ನಲ್ಲೇ ಫ್ಯಾನ್ಸ್ಗೆ ಸರ್ಪ್ರೈಸ್ ಕೊಟ್ಟ ರಶ್ಮಿಕಾ-ವಿಜಯ್ ಜೋಡಿ

TAGGED:18 killed in firecracker disaster in Andhra Pradesh
Share This Article
Facebook Twitter Copy Link Print
Previous Article ತಲೆಹೊಟ್ಟು ಸಮಸ್ಯೆಯೇ? ನಿಮ್ಮ ಮನೆಯಲ್ಲಿಯೇ ಇದೆ ಮದ್ದು!
Next Article ಮಧ್ಯಪ್ರಾಚ್ಯದ ಅಮೆರಿಕ ಸೇನಾ ನೆಲೆಗಳ ಮೇಲೆ ರುದ್ರತಾಂಡವ ಆರಂಭಿಸಿದ ಇರಾನ್‌!

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?