Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಇರಾನ್‌ನಲ್ಲಿ ಯುದ್ಧ :ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ : ಈ ಊರಿಗು ಇರಾನ್ ಪರಮೋಚ್ಚ ನಾಯಕ ಖಮೇನಿ ಏನು ಸಂಬಂಧ?!
ಕರ್ನಾಟಕದೇಶಪ್ರಮುಖವಿದೇಶ

ಇರಾನ್‌ನಲ್ಲಿ ಯುದ್ಧ :ಚಿಕ್ಕಬಳ್ಳಾಪುರ ಚಿಕ್ಕಬಳ್ಳಾಪುರದ ಅಲೀಪುರದಲ್ಲಿ ಆತಂಕ : ಈ ಊರಿಗು ಇರಾನ್ ಪರಮೋಚ್ಚ ನಾಯಕ ಖಮೇನಿ ಏನು ಸಂಬಂಧ?!

Share
2 Min Read
SHARE

https://youtube.com/shorts/4DdUNKT1F8Q?si=WqCYQodDieS5bX6t

Subscribe ನ್ಯೂಸಿಕ್ಸ್ ಕನ್ನಡ

newsics.com

ಚಿಕ್ಕಬಳ್ಳಾಪುರ: ಇರಾನ್‌ ನೆಲದಲ್ಲಿ ಯುದ್ಧ ತೀವ್ರವಾಗುತ್ತಿದ್ದರೆ ಇತ್ತ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲ್ಲೂಕಿನ ಅಲೀಪುರ ಗ್ರಾಮಸ್ಥರಲ್ಲಿ ದುಗುಡ ಹೆಚ್ಚಾಗುತ್ತದೆ.

ಇರಾನ್‌ ಮತ್ತು ಇಸ್ರೇಲ್‌ ಯುದ್ಧದ ಕ್ಷಣ, ಕ್ಷಣದ ಮಾಹಿತಿ, ಬೆಳವಣಿಗೆಗಳು ಈ ಗ್ರಾಮದ ಜನರನ್ನು ತಲುಪುತ್ತವೆ. ಕ್ಷಿಪಣಿ ದಾಳಿ ವೇಳೆ ಅಲ್ಲಿ ಮೊಳಗುವ ಸೈರನ್‌ ಶಬ್ದ ಮೊಬೈಲ್ ಕರೆಯ ಮೂಲಕ ಅಲೀಪುರದಲ್ಲೂ ಪ್ರತಿಧ್ವನಿಸುತ್ತದೆ. ಅಲ್ಲಿ ಕ್ಷಿಪಣಿ ಬಿದ್ದರೆ ಇಲ್ಲಿ ಹೃದಯ ಬಡಿತ ಹೆಚ್ಚಾಗುತ್ತದೆ. ಇರಾನ್‌ನಲ್ಲಿರುವ ಗ್ರಾಮಸ್ಥರು ಸುರಕ್ಷಿತವಾಗಿರಲಿ. ಅವರಿಗೆ ಏನೂ ಆಗದಿರಲಿ ಎಂದು ಗ್ರಾಮದಲ್ಲಿ ನಿತ್ಯ ‍ಪ್ರಾರ್ಥನೆ ನಡೆಯುತ್ತವೆ.

ಸರಿಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಶಿಯಾ ಮುಸ್ಲಿಂ ಸಮುದಾಯದವರೇ ಇರುವ ಅಲೀಪುರ ಗ್ರಾಮಕ್ಕೂ ದೂರದ ಇರಾನ್ ದೇಶದ ಜೊತೆಗೆ ಬಹಳಷ್ಟು ನಂಟಿದ್ದು, ಬಾಂಧವ್ಯದ ಕೊಂಡಿ ಬೆಸೆದುಕೊಂಡಿದೆ. ಈ ಗ್ರಾಮದ 10 ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳು ಇರಾನ್ ದೇಶದಲ್ಲಿ ಎಂಬಿಬಿಎಸ್ ವ್ಯಾಸಂಗ ಮಾಡ್ತಿದ್ದಾರೆ. 50 ಕ್ಕೂ ಹೆಚ್ಚು ಮಂದಿ ಇಸ್ಲಾಮಿಕ್ ಧಾರ್ಮಿಕ ಶಿಕ್ಷಣ ಪಡೆಯಲು ಇರಾನ್‌ನಲ್ಲೇ ನೆಲೆಸಿದ್ದಾರೆ. ಪ್ರಮುಖವಾಗಿ ಇರಾನ್‍ನ ಮಶದ್‌ನ ಪ್ರಮುಖ ಧಾರ್ಮಿಕ ಕೇಂದ್ರ ಪವಿತ್ರ ಸ್ಥಳ. ಹಾಗಾಗಿಯೇ ಪ್ರತಿ ವರ್ಷವೂ ನೂರಾರು ಮಂದಿ ಇರಾನ್‌ನ ಮಶದ್‌ಗೆ ಭೇಟಿ ಮಾಡಿ ಪ್ರಾರ್ಥನೆ ಸಲ್ಲಿಸಿ ಬರುತ್ತಾರೆ.

ವೈದ್ಯಕೀಯ ಶಿಕ್ಷಣ, ಧಾರ್ಮಿಕ ಶಿಕ್ಷಣದ ಕಾರಣಕ್ಕೆ ಅಲೀಪುರದ ಶಿಯಾ ಮುಸ್ಲಿಮರಿಗೆ ಇರಾನ್ ಅಚ್ಚುಮೆಚ್ಚಿನ ತಾಣ. 20 ಸಾವಿರ ಜನಸಂಖ್ಯೆಯ ಅಲೀಪುರದಲ್ಲಿ ಶಿಯಾ ಮುಸ್ಲಿಮರದ್ದೇ ಪ್ರಾಬಲ್ಯ. ಇರಾನ್‌ ತಮ್ಮ ಪವಿತ್ರ ಧಾರ್ಮಿಕ ಭೂಮಿ ಎನ್ನುವ ಪೂಜ್ಯ ಭಾವನೆ ಇಲ್ಲಿನ ಜನರದ್ದು. ಅಯಾತೊಲ್ಲಾ ಖಮೇನಿ ಧಾರ್ಮಿಕ ಆದೇಶಗಳನ್ನು ಚಾಚೂ ತಪ್ಪದೆ ಪಾಲಿಸುವ ದೊಡ್ಡ ವರ್ಗವೇ ಇಲ್ಲಿದೆ.

ಅಮೆರಿಕ ಮತ್ತು ಇಸ್ರೇಲ್ ಕ್ಷಿಪಣಿಗಳು ಇರಾನ್‌ ಮೇಲೆ ದಾಳಿ ಮಾಡುತ್ತಿದ್ದಂತೆಯೇ ಅಲ್ಲಿರುವ ತಮ್ಮ ಸಂಬಂಧಿಕರು, ಬಂಧು, ಬಳಗ, ಮಕ್ಕಳನ್ನು ಸಂಪರ್ಕಿಸಲು ಅಲೀಪುರದ ಜನರು ಪ್ರಯತ್ನಿಸುತ್ತಲೇ ಇದ್ದಾರೆ. ಆದರೆ ಇರಾನ್‌ನಲ್ಲಿ ಇಂಟರ್‌ನೆಟ್‌ ಸ್ಥಗಿತಗೊಂಡಿರುವ ಕಾರಣ ಸಂಪರ್ಕ ಸಾಧ್ಯವಾಗುತ್ತಿಲ್ಲ

‘ಇರಾನ್‌ನಲ್ಲಿರುವ ಅಕ್ಕನ ಮಗನಿಗೆ ಬೆಳಗ್ಗೆ 11ರಿಂದ ಫೋನ್ ಮಾಡುತ್ತಲೇ ಇದ್ದೇನೆ. ಆತ ಸಂಪರ್ಕಕ್ಕೆ ಸಿಗುತ್ತಿಲ್ಲ’ ಅಲೀಪುರದ ಸೈಯದ್ ಮೆಹೆದಿ ಆತಂಕ ಹಂಚಿಕೊಂಡರು.

 

2025ರ ಜೂನ್‌ನಲ್ಲಿ ಇರಾನ್ ಮತ್ತು ಇಸ್ರೇಲ್ ನಡುವೆ ಯುದ್ಧ ನಡೆದಾಗ 105 ಜನರು ಇರಾನ್ ತೊರೆದು ಸ್ವಗ್ರಾಮ ಅಲೀಪುರಕ್ಕೆ ಬಂದಿದ್ದರು. ಶಾಂತಿ ನೆಲೆಸಿದ ತರುವಾಯ ಇರಾನ್‌ಗೆ ಮರಳಿದ್ದರು.

https://www.newsics.com/2026/03/01/we-will-launch-the-most-destructive-offensive-operation-iran-vows-revenge/

 

TAGGED:Chikkaballapur: What is the connection between this town and Iran's Supreme Leader Khamenei?!tension in AlipurWar in Iran: Chikkaballapur
Share This Article
Facebook Twitter Copy Link Print
Previous Article ಅತ್ಯಂತ ವಿನಾಶಕಾರಿ ಆಕ್ರಮಣಕಾರಿ ಕಾರ್ಯಾಚರಣೆ ಆರಂಭಿಸುತ್ತೇವೆ – ಪ್ರತೀಕಾರದ ಪ್ರತಿಜ್ಞೆಗೈದ ಇರಾನ್
Next Article ಖಮೇನಿ ಹತ್ಯೆ ಸುದ್ದಿ ಓದುವಾಗ ಲೈವ್‌ ನಲ್ಲೇ ಕಣ್ಣೀರಿಟ್ಟ ಇರಾನ್ ಆ್ಯಂಕರ್ : ವಿಡಿಯೋ ನೋಡಿ

Popular Posts

ASTRO ಇಂದು ಬ್ರಹ್ಮ ಯೋಗ, ಇಂದ್ರ ಯೋಗ: ಹೆಚ್ಚಲಿದೆ ಈ ರಾಶಿಗಳ ಧನಸಂಪತ್ತು

4 Min Read

Shortage of human cadavers ಸರ್ಕಾರಿ ವೈದ್ಯ ಕಾಲೇಜುಗಳಿಗೆ ಸಿಗುತ್ತಿಲ್ಲ ಮನುಷ್ಯ ಮೃತದೇಹ! ವಿದ್ಯಾರ್ಥಿಗಳ ಅಧ್ಯಯನಕ್ಕೆ ಕಂಟಕ

2 Min Read

Modi selfie video viral ಡಿಜಿಟಲ್ ಜಗತ್ತಿನಲ್ಲಿ ಹೊಸ ಇತಿಹಾಸ ಬರೆದ ಮೋದಿ ಸೆಲ್ಫಿ ವಿಡಿಯೋ: ಒಂದೇ ರಾತ್ರಿಯಲ್ಲಿ 10 ಲಕ್ಷ ಹೊಸ ಫಾಲೋವರ್ಸ್ ಸೇರ್ಪಡೆ!

2 Min Read

NEET – NTAಗೆ ಮೇಜರ್ ಸರ್ಜರಿ: 47 ಅಧಿಕಾರಿಗಳ‌ ವಜಾ

2 Min Read

You Might Also Like

ಕರ್ನಾಟಕಪ್ರಮುಖ

Rain info ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಗಳಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಪ್ರಮುಖದೇಶ

Heavy Rain ಮಳೆ ಅಬ್ಬರ ; ರಸ್ತೆಗಳು ಜಲಾವೃತ, ಎನ್‌ಎಚ್-47 ಬಂದ್, ರಂಗಕ್ಕಿಳಿದ ಭಾರತೀಯ ಸೇನೆ

1 Min Read
ಪ್ರಮುಖದೇಶವೈರಲ್

Viral News ನೀಟ್ ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ 150 ಪಿಜ್ಜಾ ಆರ್ಡರ್ ಮಾಡಿ ಬೆಂಬಲಿಸಿದ ಯುವಕ

1 Min Read
ಪ್ರಮುಖCrimeದೇಶ

Tragedy ನನ್ನ ಸಾವಿಗೆ ಮೋದಿ ಕಾರಣ: SIR ಫಾರ್ಮ್‌ನಲ್ಲೇ‌ ಡೆತ್‌ನೋಟ್ ಬರೆದಿಟ್ಟು ಜೀವ ಕಳೆದುಕೊಂಡ ಪೇಂಟರ್!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?