Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ
ಕರ್ನಾಟಕಪ್ರಮುಖ

ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಮುತ್ಯಾ ನಡೆ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ತಮ್ಮ ವಿರುದ್ಧ ದಾಖಲಾಗಿರುವ ಫೋಕ್ಸೋ ಪ್ರಕರಣ ರದ್ದು ಕೋರಿ ಯಾದಗಿರಿಯ ಮಹಲ್ ರೋಜಾ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ. ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಬೆನ್ನಲ್ಲೇ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದ್ದು, ಬಳಿಕ ಅಜ್ಞಾತ ಸ್ಥಳದಿಂದಲೇ ತಮ್ಮ ವಕೀಲರ ಮೂಲಕ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇದೀಗ ಇಂದು (ಮಾರ್ಚ್ 03) ಏಕಾಏಕಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದುಕೊಂಡಿದ್ದಾರೆ. ಇದರಿಂದ ಮುತ್ಯಾ ನಡೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಇನ್ನೊಂದೆಡೆ ಮಲ್ಲಿಕಾರ್ಜುನ ಮುತ್ಯಾ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರಾ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ.
ಬಾಲಕಿ ಜತೆ ಅನುಚಿತವಾಗಿ ವರ್ತಿಸಿದ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಯಾದಗಿರಿ ಜಿಲ್ಲಾಧಿಕಾರಿಗೆ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಮಲ್ಲಿಕಾರ್ಜು ಮುತ್ಯಾ ವಿರುದ್ಧ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿದ್ದರು. ಕೇಸ್ ದಾಖಲಾಗುತ್ತಿದ್ದಂತೆಯೇ ಮುತ್ಯಾ ನಾಪತ್ತೆಯಾಗಿದ್ದು, ಅಜ್ಞಾತ ಸ್ಥಳದಿಂದಲೇ ತಮ್ಮ ವಿರುದ್ಧದ ಫೋಕ್ಸೋ ಪ್ರಕರಣ ರದ್ದುಕೋರಿ ಕಲಬುರಗಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಇಂದು ಏಕಾಏಕಿ ಮುತ್ಯಾ ಪರ ವಕೀಲರು ಅರ್ಜಿಯನ್ನು ವಾಪಸ್ ಪಡೆದುಕೊಂಡಿದ್ದಾರೆ
ಇನ್ನೊಂದೆಡೆ ಪೋಕ್ಸೋ ಪ್ರಕರಣ ಸಂಬಂಧ ಮಲ್ಲಿಕಾರ್ಜುನ ಮುತ್ಯಾ, ನಿರೀಕ್ಷಣಾ ಜಾಮೀನು ಕೋರಿ ಯಾದಗಿರಿ ಜಿಲ್ಲಾ ಕೋರ್ಟ್ ಅರ್ಜಿ ಸಲ್ಲಿಸಿದ್ದಾರೆ. ಇನ್ನೊಂದೆಡೆ ಇದಕ್ಕೆ ಸರಕಾರದ ಪರ ವಕೀಲರು ಸಹ ಆಕ್ಷೇಪಣೆ ಸಲ್ಲಿಸಿದ್ದಾರೆ. ಹೀಗಾಗಿ. ಜಾಮೀನು ಅರ್ಜಿ ವಿಚಾರಣೆಯನ್ನು ಯಾದಗಿರಿ ಜಿಲ್ಲಾ ಮತ್ತು ಪ್ರಧಾನ ಸತ್ರಾ ನ್ಯಾಯಾಲಯ ಮಾರ್ಚ್ 6ಕ್ಕೆ ಮುಂದೂಡಿದೆ. ಇದರಿಂದ ಮುತ್ಯಾ ಭವಿಷ್ಯ ಮಾರ್ಚ್ 6ರಂದು ನಿರ್ಧಾರವಾಗಲಿದೆ.
ಮಲ್ಲಿಕಾರ್ಜುನ ಮುತ್ಯಾ ವಿರುದ್ಧದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಬಾಲಕಿ ನೀಡಿದ ಹೇಳಿಕೆ‌ಯನ್ನು ಶಹಾಪುರ ಜೆಎಂಸಿ ಕೋರ್ಟ್ ಜಡ್ಜ್ ದಾಖಲಿಸಿಕೊಂಡಿದ್ದಾರೆ. ಬಳಿಕ ಬಾಲಕಿ ಹೇಳಿಕೆಯ ದಾಖಲು ಪ್ರತಿಯನ್ನು ಮುಚ್ಚಿದ ಲಕೋಟೆಯಲ್ಲಿ ತನಿಖಾಧಿಕಾರಿಗೆ ಸಲ್ಲಿಸಲಾಗುತ್ತದೆ. ಹೀಗಾಗಿ ಬಾಲಕಿ ನೀಡಿರುವ ಹೇಳಿಕೆ ಮೇಲೆ ಮಲ್ಲಿಕಾರ್ಜುನ ಮುತ್ಯಾನ ಭವಿಷ್ಯ ನಿರ್ಧರ ಆಗಲಿದೆ.

ಅಸಭ್ಯವಾಗಿ ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ

TAGGED:Mallikarjuna Mutya's curious move
Share This Article
Facebook Twitter Copy Link Print
Previous Article ಅಸಭ್ಯವಾಗಿ ವಿಡಿಯೋ ಚಿತ್ರೀಕರಿಸಿದವರ ವಿರುದ್ಧ ನಟಿ ಸಪ್ತಮಿ ಗೌಡ ಗರಂ
Next Article ಪ್ರಾಣಿಗಳಿಗೆ ಇರುವ ಸ್ವಾತಂತ್ರವೂ ಇರಾನಿನ ಹೆಣ್ಣುಮಕ್ಕಳಿಗಿಲ್ಲ!

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?