Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > ಕಾಲೇಜಲ್ಲೇ ವೈದ್ಯ ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರ, ‌ಕೊಲೆ: ಓರ್ವನ ಬಂಧನ, ಭಾರೀ‌ ಪ್ರತಿಭಟನೆ
ದೇಶಪ್ರಮುಖ

ಕಾಲೇಜಲ್ಲೇ ವೈದ್ಯ ವಿದ್ಯಾರ್ಥಿನಿ‌ ಮೇಲೆ ಅತ್ಯಾಚಾರ, ‌ಕೊಲೆ: ಓರ್ವನ ಬಂಧನ, ಭಾರೀ‌ ಪ್ರತಿಭಟನೆ

Share
2 Min Read
SHARE

newsics.com

ಕೋಲ್ಕತ್ತಾ(ಪಶ್ಚಿಮ ಬಂಗಾಳ): ಕೋಲ್ಕತ್ತಾದ ಸರ್ಕಾರಿ ಆರ್‌ಜಿ ಕರ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಸೆಮಿನಾರ್ ಕೊಠಡಿಯಲ್ಲಿ ದ್ವಿತೀಯ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಲಾಗಿದೆ.

ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ನಡೆದಿರುವುದು ದೃಢಪಟ್ಟಿದೆ.

ಅಪರಾಧದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ. ಆ ವ್ಯಕ್ತಿ ಹೊರಗಿನ ವ್ಯಕ್ತಿಯಾಗಿದ್ದು, ಅವರು ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಉಚಿತ ಪ್ರವೇಶ ಹೊಂದಿದ್ದರು. ಆತನ ಚಟುವಟಿಕೆಗಳು ಸಾಕಷ್ಟು ಅನುಮಾನಾಸ್ಪದವಾಗಿದೆ ಮತ್ತು ಅವನು ನೇರವಾಗಿ ಅಪರಾಧದಲ್ಲಿ ಭಾಗಿಯಾಗಿದ್ದಾನೆಂದು ತೋರುತ್ತದೆ” ಎಂದು ಹಿರಿಯ ಅಧಿಕಾರಿ ಹೇಳಿದ್ದಾರೆ.

ಹತ್ಯೆಯಾದ ಮಹಿಳೆ ಪಲ್ಮನಾಲಜಿ ವಿಭಾಗದ ವಿದ್ಯಾರ್ಥಿನಿಯಾಗಿದ್ದು, ಮರಣೋತ್ತರ ಪರೀಕ್ಷಾ ವರದಿಯೂ ಇದು ಆತ್ಮಹತ್ಯೆಯಲ್ಲ ಎಂದು ಹೇಳಿದೆ. ತಾಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶುಕ್ರವಾರ(ಆ.9) ಬೆಳಗಿನ ಜಾವ 3 ರಿಂದ 6 ಗಂಟೆಯ ನಡುವೆ ಈ ಕೃತ್ಯ ನಡೆದಿದೆ ಎಂದು ಕೋಲ್ಕತ್ತಾ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದ್ದಾರೆ.

ನಾಲ್ಕು ಪುಟಗಳ ವರದಿಯ ಪ್ರಕಾರ, ಮಹಿಳೆಯ ಖಾಸಗಿ ಭಾಗಗಳಿಂದ ರಕ್ತಸ್ರಾವವಾಗಿದೆ. ದೇಹದ ಇತರ ಭಾಗಗಳಲ್ಲಿ ಗಾಯದ ಗುರುತುಗಳಿವೆ. ಆಕೆಯ ಕಣ್ಣು ಮತ್ತು ಬಾಯಿಯಿಂದ ರಕ್ತಸ್ರಾವವಾಗಿದೆ. ಆಕೆಯ ಮುಖ ಮತ್ತು ಉಗುರುಗಳ ಮೇಲೆ ಗಾಯವಾಗಿದೆ. ಆಕೆಯ ಹೊಟ್ಟೆ, ಎಡ ಕಾಲು, ಕುತ್ತಿಗೆ, ಬಲಗೈ, ಬೆರಳು ಮತ್ತು ತುಟಿಗಳಲ್ಲಿ ಗಾಯಗಳಾಗಿವೆ.

ಪ್ರಕರಣದ ತನಿಖೆಗಾಗಿ ಕೋಲ್ಕತ್ತಾ ಪೊಲೀಸರು ವಿಶೇಷ ತನಿಖಾ ತಂಡ(ಎಸ್‌ಐಟಿ)ವನ್ನು ರಚಿಸಿದ್ದಾರೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯೊಳಗೆ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಲಾಗಿದೆ. ಸತ್ಯವನ್ನು ಮರೆಮಾಚುವ ಪ್ರಯತ್ನಗಳು ನಡೆಯುತ್ತಿವೆ ಎಂದು ಆಕೆಯ ತಂದೆ ಆರೋಪಿಸಿದ್ದಾರೆ.

ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಮಹಿಳೆಯ ಪೋಷಕರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಈ ಮಧ್ಯೆ, ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಪಿಜಿಟಿ ವೈದ್ಯರು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಘಟನೆ ಖಂಡಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದು. ತುರ್ತು ಚಿಕಿತ್ಸಾ ವಿಭಾಗ ಹೊರತುಪಡಿಸಿ ಎಲ್ಲಾ ವಿಭಾಗಗಳಲ್ಲಿ ಕೆಲಸ ಸ್ಥಗಿತಗೊಳಿಸಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿದ್ದಾರೆ.

ಆಕೆಯ ಸಾವಿನ ಕುರಿತು ಶೀಘ್ರ ತನಿಖೆ ನಡೆಸುವಂತೆ ಒತ್ತಾಯಿಸಿ ಹಲವು ವಿದ್ಯಾರ್ಥಿ ಸಂಘಟನೆಗಳು ರ‌್ಯಾಲಿಯನ್ನೂ ನಡೆಸಿವೆ. ಶಾಸಕ ಅಗ್ನಿಮಿತ್ರ ಪಾಲ್ ಸೇರಿದಂತೆ ಹಲವು ಪ್ರತಿಪಕ್ಷ ಬಿಜೆಪಿ ನಾಯಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಮ್ಯಾಜಿಸ್ಟ್ರೇಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ಯಾರಾಸಿಟಮಲ್ ಮಾತ್ರೆ ಹೆಚ್ಚು ತಿನ್ನದಿರಿ, ನಿಮ್ಮ ಆರೋಗ್ಯ ಹದಗೆಟ್ಟೀತು… ಹುಷಾರು

TAGGED:A medical student was killed in the college itself: Arrest of one personmassive protest
Share This Article
Facebook Twitter Copy Link Print
Previous Article ಕೈ-ಕಾಲು ಗಟ್ಟಿ ಇವೆ, ನಿಮ್ಮನ್ನು ಮನೆಗೆ ಕಳುಹಿಸೋವರೆಗೂ ಮನೆ ಸೇರಲ್ಲ: `ಕೈ’ ನಾಯಕರ ವಿರುದ್ಧ BSY ಕಿಡಿ
Next Article ಶುಭೋದಯ… ಇಂದಿನ ಪಂಚಾಂಗ, 11-08-2024 ಭಾನುವಾರ, ಸಂತ ತುಲಸೀದಾಸ ಜಯಂತಿ

Popular Posts

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

You Might Also Like

ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?