Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!; 80 ಜನ ಸಾವು
ಪ್ರಮುಖವಿದೇಶ

ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!; 80 ಜನ ಸಾವು

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೆರಿಕ ನಡೆಸಿರುವ ಜಂಟಿ ಯುದ್ಧ ಐದನೇ ದಿನಕ್ಕೆ ಕಾಲಿಡುವ ಹೊತ್ತಿಗೆ ಈ ಯುದ್ಧ ಭಾರತದ ಅಂಚಿಗೂ ಧಾವಿಸಿದೆ. ಶ್ರೀಲಂಕಾ ಕರಾವಳಿಯಲ್ಲಿ ಇರಾನ್‌ ದೇಶಕ್ಕೆ ಸಂಬಂಧಿಸಿದ ನೌಕೆಯ ಮೇಲೆ ದಾಳಿ ನಡೆದಿದ್ದು, 30 ಜನರನ್ನು ಶ್ರೀಲಂಕಾ ಸೇನೆ ರಕ್ಷಣೆ ಮಾಡಿದೆ.
ಇನ್ನೂ 108 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಶ್ರೀಲಂಕಾದ ದಕ್ಷಿಣ ಸಮುದ್ರ ತೀರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಇರಾನ್‌ನ ‘ಐರಿಸ್ ದೇನಾ’ (Iris Dena) ಯುದ್ಧನೌಕೆಯಲ್ಲಿದ್ದ ಕನಿಷ್ಠ 30 ನಾವಿಕರನ್ನು ಶ್ರೀಲಂಕಾ ರಕ್ಷಣಾ ಪಡೆಗಳು ಬುಧವಾರ ಮುಂಜಾನೆ ರಕ್ಷಿಸಿವೆ ಎಂದು ವಿದೇಶಾಂಗ ಸಚಿವ ವಿಜಿತ ಹೇರತ್ ತಿಳಿಸಿದ್ದಾರೆ.
ನಡೆದಿದ್ದೇನು?
ಸಂಸತ್ತಿನಲ್ಲಿ ಈ ಕುರಿತು ಮಾಹಿತಿ ನೀಡಿದ ಹೇರತ್, “ಇಂದು ಮುಂಜಾನೆ 5.08ಕ್ಕೆ ದಕ್ಷಿಣದ ಗಾಲೆ ಬಂದರು ಜಿಲ್ಲೆಯಿಂದ ಸುಮಾರು 40 ನಾಟಿಕಲ್ ಮೈಲಿ ದೂರದಲ್ಲಿ ‘ಐರಿಸ್ ದೇನಾ’ ಎಂಬ ಹಡಗು ಮುಳುಗುತ್ತಿರುವ ಬಗ್ಗೆ ಶ್ರೀಲಂಕಾ ನೌಕಾಪಡೆ ಮತ್ತು ಕರಾವಳಿ ರಕ್ಷಣಾ ಪಡೆಗೆ ಸಂದೇಶ ಬಂದಿತ್ತು. ಪ್ರಾಥಮಿಕ ಮಾಹಿತಿಯ ಪ್ರಕಾರ ಹಡಗಿನಲ್ಲಿ ಸುಮಾರು 180 ಸಿಬ್ಬಂದಿಗಳಿದ್ದರು ಎನ್ನಲಾಗಿದ್ದು, ಈ ಪೈಕಿ 80 ಜನರು ಸಾವನ್ನಪ್ಪಿದ್ದಾರೆ. 30 ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದೆ,” ಎಂದು ವಿವರಿಸಿದರು.
ಜಂಟಿ ರಕ್ಷಣಾ ಕಾರ್ಯಾಚರಣೆ
ನೌಕಾಪಡೆ ಮತ್ತು ವಾಯುಪಡೆ ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಂಡಿವೆ. ಆದರೆ, ಯುದ್ಧನೌಕೆ ಮುಳುಗಲು ನಿಖರವಾದ ಕಾರಣವೇನೆಂಬುದು ಈವರೆಗೆ ತಿಳಿದುಬಂದಿಲ್ಲ. “ಅಂತರಾಷ್ಟ್ರೀಯ ಕಡಲ ರಕ್ಷಣಾ ಸಮಾವೇಶದ ನಿಯಮಗಳ ಪ್ರಕಾರ, ಯಾವುದೇ ಕಾರಣವಿರಲಿ, ಸಮುದ್ರದಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ರಕ್ಷಿಸಲು ನಾವು ಬದ್ಧರಾಗಿದ್ದೇವೆ,” ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಚಿಕಿತ್ಸೆ ಮತ್ತು ಭದ್ರತೆ
ರಕ್ಷಿಸಲಾದ ನಾವಿಕರನ್ನು ನೌಕಾಪಡೆಯ ದಕ್ಷಿಣ ಕಮಾಂಡ್ ಪ್ರಧಾನ ಕಚೇರಿಗೆ ಕರೆತಂದು, ಬಳಿಕ ಗಾಲೆಯ ಕರಾಪಿಟಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ನೌಕಾಪಡೆಯ ದಕ್ಷಿಣ ಕಮಾಂಡ್ ಸುತ್ತಮುತ್ತ ಭದ್ರತೆಯನ್ನು ತೀವ್ರಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶಾಂತಿಗಾಗಿ ಶ್ರೀಲಂಕಾ ಮನವಿ
ಇದೇ ಸಂದರ್ಭದಲ್ಲಿ ಗಲ್ಫ್ ಪ್ರದೇಶದಲ್ಲಿ (ಪಶ್ಚಿಮ ಏಷ್ಯಾ) ನಡೆಯುತ್ತಿರುವ ಪ್ರಸ್ತುತ ಸಂಘರ್ಷದ ಬಗ್ಗೆ ವಿಷಾದ ವ್ಯಕ್ತಪಡಿಸಿದ ಹೇರತ್, ಸಂಘರ್ಷವನ್ನು ಶಾಂತಿಯುತವಾಗಿ ಅಂತ್ಯಗೊಳಿಸುವಂತೆ ಶ್ರೀಲಂಕಾ ಪರವಾಗಿ ಮನವಿ ಮಾಡಿದರು.

ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

TAGGED:Iranian ship mysteriously sinks off Sri Lankan coast!
Share This Article
Facebook Twitter Copy Link Print
Previous Article ಯುವಕರಿಂದ ಗಲಾಟೆ: ಮನನೊಂದು ರಾತ್ರೋರಾತ್ರಿ ಮಠ ತೊರೆದ ಶ್ರೀಗಳು!
Next Article ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?