Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಕರ್ನಾಟಕಪ್ರಮುಖ

ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ

newsics.com

ಕೊಪ್ಪಳ ಜಿಲ್ಲೆಯ ಕುಕನೂರ ತಾಲೂಕಿನ ಕೋಮಲಾಪುರ ಗ್ರಾಮದ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಸಿದ್ದೇಶ ಶೆಟ್ಟರ್ ಅವರ ವೈಯಕ್ತಿಕ ಬದುಕಿನ ವಿವಾದ ಶಾಲಾ ಆವರಣದಲ್ಲಿ ಸಾರ್ವಜನಿಕ ಗಲಾಟೆಗೆ ಕಾರಣವಾಗಿದೆ. ತಮ್ಮ ಪತ್ನಿ ಪ್ರತಿದಿನ ಶಾಲೆಗೆ ಬಂದು ಕಿರಿಕ್ ಮಾಡುವುದು, ತಮ್ಮ ವೃತ್ತಿ ಬದುಕಿಗೆ ಮತ್ತು ಸಾರ್ವಜನಿಕ ಘನತೆಗೆ ಧಕ್ಕೆ ತರುತ್ತಿದ್ದಾರೆ ಎಂದು ಶಿಕ್ಷಕ ಸಿದ್ದೇಶ ಶೆಟ್ಟರ್ ಆರೋಪಿಸಿದ್ದಾರೆ.

ಸಿದ್ದೇಶ ಶೆಟ್ಟರ್ ಅವರ ಹೇಳಿಕೆಯ ಪ್ರಕಾರ, ತಮ್ಮ ಪತ್ನಿ ತಮ್ಮನ್ನು ಮನೆಯಲ್ಲಿ ಕೈದಿ ತರಹ ಇಟ್ಟುಕೊಂಡಿದ್ದು, ಕುಟುಂಬದ ಸದಸ್ಯರೊಂದಿಗೆ ಅಥವಾ ಕಚೇರಿಯಿಂದ ಬರುವ ಯಾವುದೇ ಕರೆಗಳನ್ನು ಸ್ವೀಕರಿಸಲು ಬಿಡುತ್ತಿಲ್ಲ. ಇದರ ಜೊತೆಗೆ, ತಮ್ಮ ಮೇಲೆ ದೈಹಿಕ ಹಲ್ಲೆ ನಡೆಸಲಾಗುತ್ತಿದ್ದು, ದೇಹದ ಮೇಲೆ ಗಾಯಗಳಾಗಿರುವುದನ್ನೂ ಅವರು ಉಲ್ಲೇಖಿಸಿದ್ದಾರೆ. ‘ಅವರಪ್ಪನ ಬಳಿ ವರದಕ್ಷಿಣೆ ತಗೊಂಡು ಬಾ’ ಎಂದು ಒತ್ತಾಯಿಸುತ್ತಿದ್ದಾರೆ ಎಂದು ತಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುವ ಬೆದರಿಕೆಗಳನ್ನು ಹಾಕಲಾಗುತ್ತಿದೆ ಎಂದಿದ್ದಾರೆ.

ತಮಗೆ ಈಗಾಗಲೇ ಮದುವೆಯಾಗಿದ್ದು, ಮಕ್ಕಳೂ ಇದ್ದಾರೆ ಎಂದು ಸಿದ್ದೇಶ ಶೆಟ್ಟರ್ ಹೇಳಿದ್ದಾರೆ. ತಮ್ಮ ಮಗ ಇಂಜಿನಿಯರಿಂಗ್ ಓದುತ್ತಿದ್ದು, ಮೊದಲ ಪತ್ನಿ ಮತ್ತು ಮಕ್ಕಳ ಜೊತೆ ಇರಲು ಬಿಡುತ್ತಿಲ್ಲ ಎಂದು ಅವರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ತಾನು ಮಾಸಿಕ ನಿರ್ವಹಣಾ ವೆಚ್ಚವನ್ನು ನೀಡುತ್ತಿದ್ದು, ತಮ್ಮ ಪತ್ನಿಯ ಕೈ ಬಿಟ್ಟಿಲ್ಲ ಎಂದು ಹೇಳಿಕೊಂಡಿದ್ದಾರೆ. ಆದರೂ, ತಮ್ಮ ಮಕ್ಕಳನ್ನು ಭೇಟಿ ಮಾಡಲು ಹೋದಾಗ ಅಥವಾ ಊರಿಗೆ ಹೋಗಲು ಬಯಸಿದಾಗ ಆಕೆ ತಕರಾರು ಮಾಡುತ್ತಾಳೆ ಎಂದು ಅವರು ತಿಳಿಸಿದ್ದಾರೆ. ಶಾಲಾ ಆವರಣದಲ್ಲಿ ಆಕೆ ಪ್ರತಿದಿನ ಬಂದು ಗಲಾಟೆ ಮಾಡುವುದರಿಂದ ತಮ್ಮ ಚಾರಿತ್ರ್ಯ ಹರಣವಾಗುತ್ತಿದೆ. ಇದರಿಂದ ತಲೆ ಎತ್ತಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ವಿದ್ಯಾರ್ಥಿಗಳು ಮತ್ತು ಸಹ ಶಿಕ್ಷಕರ ಎದುರು ತಮ್ಮ ಗೌರವಕ್ಕೆ ಧಕ್ಕೆ ಬಂದಿದೆ ಎಂದು ಶೆಟ್ಟರ್ ಆತಂಕ ವ್ಯಕ್ತಪಡಿಸಿದ್ದಾರೆ. ಶಾಲೆಯಲ್ಲಿ ಬ್ಯಾಗ್ ಬಿಸಾಕುವುದು, ಮೊಬೈಲ್ ಕಿತ್ತುಕೊಳ್ಳುವುದು ಸೇರಿದಂತೆ ಸಾರ್ವಜನಿಕವಾಗಿ ಕಿರಿಕಿರಿ ಉಂಟುಮಾಡುತ್ತಿದ್ದಾಳೆ ಎಂದು ಅವರು ಆರೋಪಿಸಿದ್ದಾರೆ. ವೈಯಕ್ತಿಕ ಸಮಸ್ಯೆಗಳನ್ನು ಸಾರ್ವಜನಿಕವಾಗಿ ಹೀಗೆ ಬೆರೆಸಿದರೆ, ವೃತ್ತಿ ಬದುಕನ್ನು ಮುಂದುವರಿಸುವುದು ಹೇಗೆ ಎಂದು ಅವರು ಪ್ರಶ್ನಿಸಿದ್ದಾರೆ. ರಸ್ತೆಯಲ್ಲಿ ಹೋಗುವಾಗ ಕಲ್ಲು ಎಸೆಯುವಷ್ಟರ ಮಟ್ಟಿಗೆ ಪರಿಸ್ಥಿತಿ ತಲುಪಿದೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.

ಪ್ರತಿದಿನ ನನ್ನ ಹೆಂಡತಿ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ

TAGGED:Is it wrong that I was born a man? She tortures me every daysays school principal
Share This Article
Facebook Twitter Copy Link Print
Previous Article ಶ್ರೀಲಂಕಾ ಕರಾವಳಿಯಲ್ಲಿ ಅಚ್ಚರಿಯ ರೀತಿಯಲ್ಲಿ ಮುಳುಗಿದ ಇರಾನ್‌ ಹಡಗು!; 80 ಜನ ಸಾವು
Next Article ಟಾಕ್ಸಿಕ್ ಸಿನಿಮಾ ಮುಂದೂಡಿಕೆಗೆ ಕೆಆರ್ಕೆ ವ್ಯಂಗ್ಯ

Popular Posts

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read

You Might Also Like

ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read
ಕರ್ನಾಟಕಪ್ರಮುಖ

ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ ಶೇ. 50ರಷ್ಟು ರಿಯಾಯಿತಿ

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ವಿದೇಶಪ್ರಮುಖ

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?