newsics.com
ಅಮೆರಿಕ-ಇರಾನ್ ಸಂಘರ್ಷದ ನಡುವೆ, ವಿಮಾನಯಾನ ರದ್ದತಿಯಿಂದಾಗಿ ದುಬೈನಲ್ಲಿ ಸಿಲುಕಿರುವ ನೂರಾರು ಪ್ರವಾಸಿಗರ ನೆರವಿಗೆ ಬಾಲಿವುಡ್ ನಟ ಸೋನು ಸೂದ್ (Sonu Sood) ಧಾವಿಸಿದ್ದಾರೆ. ಸಂಕಷ್ಟದಲ್ಲಿ ಇರುವವರಿಗೆ ಉಚಿತವಾಗಿ ವಸತಿ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸುವ ಮೂಲಕ ಅವರು ಮತ್ತೊಮ್ಮೆ ತಮ್ಮ ದೊಡ್ಡ ಗುಣವನ್ನು ಪ್ರದರ್ಶಿಸಿದ್ದಾರೆ.
ಈ ಹಿಂದೆ 2020-21ರ ಕೋವಿಡ್-19 ಲಾಕ್ಡೌನ್ ಸಮಯದಲ್ಲಿ ಲಕ್ಷಾಂತರ ವಲಸೆ ಕಾರ್ಮಿಕರನ್ನು ಅವರ ಮನೆಗಳಿಗೆ ತಲುಪಿಸುವ ಮೂಲಕ ಸೋನು ಸೂದ್ ದೇಶಾದ್ಯಂತ ಅಪಾರ ಪ್ರೀತಿ ಗಳಿಸಿದ್ದರು. ಇದೀಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸಂಕಷ್ಟಕ್ಕೆ ಸ್ಪಂದಿಸುವ ಮೂಲಕ ಅವರು ಸುದ್ದಿಯಲ್ಲಿದ್ದಾರೆ.
ಇತ್ತೀಚಿನ ಜಾಗತಿಕ ಮಟ್ಟದ ರಾಜಕೀಯ ಉದ್ವಿಗ್ನತೆಯಿಂದಾಗಿ ಹಲವು ವಿಮಾನಯಾನ ಸಂಸ್ಥೆಗಳು ತಮ್ಮ ಹಾರಾಟವನ್ನು ರದ್ದುಗೊಳಿಸಿವೆ. ಇದರಿಂದಾಗಿ ಪ್ರವಾಸಿಗರು ತಾಯ್ನಾಡಿಗೆ ಮರಳಲಾಗದೆ ದುಬೈನಲ್ಲಿ ಪರದಾಡುತ್ತಿದ್ದಾರೆ. ಈ ಪರಿಸ್ಥಿತಿಯನ್ನು ಗಮನಿಸಿದ ಸೋನು ಸೂದ್, ಇನ್ಸ್ಟಾಗ್ರಾಮ್ನಲ್ಲಿ ವಿಡಿಯೋ ಸಂದೇಶವೊಂದನ್ನು ಹಂಚಿಕೊಂಡಿದ್ದಾರೆ.
‘ಮಧ್ಯಪ್ರಾಚ್ಯದ ಬಿಕ್ಕಟ್ಟಿನಿಂದಾಗಿ ಯಾರೆಲ್ಲಾ ದುಬೈನಲ್ಲಿ ಸಿಲುಕಿಕೊಂಡಿದ್ದಾರೋ, ಅವರಿಗೆ ನಾವು ನೆರವಾಗಲು ಸಿದ್ಧರಿದ್ದೇವೆ. ನೀವು ಉಳಿದುಕೊಳ್ಳಲು ನಾವು ಉಚಿತ ವ್ಯವಸ್ಥೆ ಮಾಡುತ್ತೇವೆ’ ಎಂದು ಅವರು ಭರವಸೆ ನೀಡಿದ್ದಾರೆ. ಕೇವಲ ಭಾರತೀಯರಿಗೆ ಮಾತ್ರವಲ್ಲದೆ, ಯಾವುದೇ ದೇಶದವರಾಗಿದ್ದರೂ ಅವರಿಗೆ ಆಶ್ರಯ ನೀಡುವುದಾಗಿ ಸೋನು ಸೂದ್ ತಿಳಿಸಿದ್ದಾರೆ.
ನಮ್ಮ ಭಾರತೀಯ ಸಹೋದರರು ಇರಲಿ ಅಥವಾ ಬೇರೆ ಯಾವುದೇ ರಾಷ್ಟ್ರದವರೇ ಇರಲಿ, ನೀವು ದುಬೈನಲ್ಲಿ ಸಂಕಷ್ಟದಲ್ಲಿದ್ದರೆ ದಯವಿಟ್ಟು ನಮಗೆ ಅಥವಾ ದುಗಾಸ್ತ ಪ್ರಾಪರ್ಟೀಸ್ ಸಂಸ್ಥೆಗೆ ನೇರವಾಗಿ ಸಂದೇಶ ಕಳುಹಿಸಿ. ನೀವು ಸುರಕ್ಷಿತವಾಗಿ ನಿಮ್ಮ ದೇಶಕ್ಕೆ ಮರಳುವವರೆಗೆ ನಿಮ್ಮ ವಾಸ್ತವ್ಯದ ಜವಾಬ್ದಾರಿ ನಮ್ಮದು’ ಎಂದು ಸೋನು ಸೂದ್ ಹೇಳಿದ್ದಾರೆ.
https://www.instagram.com/reel/DVde5blDD_w/?igsh=ZjR0ZDE1Nnc1NnU4
ವಧುವಿನ ಮನೆಯವರಿಂದ ವರನ ಬಳಗಕ್ಕೆ ಗೋಲ್ಡ್ ಬಿಸ್ಕೆಟ್ ಉಡುಗೊರೆ; ವೈರಲ್ ವಿಡಿಯೋ ನೋಡಿ