Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Karnataka Budget 2026: ಇಂದು ಸಿದ್ದರಾಮಯ್ಯ ಬಜೆಟ್ ಮಂಡನೆ! 17ನೇ ಬಾರಿಗೆ ದಾಖಲೆ ಬರೆಯಲು ಸಜ್ಜು
ಕರ್ನಾಟಕಪ್ರಮುಖ

Karnataka Budget 2026: ಇಂದು ಸಿದ್ದರಾಮಯ್ಯ ಬಜೆಟ್ ಮಂಡನೆ! 17ನೇ ಬಾರಿಗೆ ದಾಖಲೆ ಬರೆಯಲು ಸಜ್ಜು

Share
2 Min Read
SHARE

https://youtube.com/shorts/ec4MYAZWI7g?si=tGnjhdSH4LQKQKOY

newsics.com

ಕರ್ನಾಟಕ ಬಜೆಟ್ 2026: ಮುಖ್ಯಮಂತ್ರಿ ಸಿದ್ದರಾಮಯ್ಯ 2026-27ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸಲು ಸಿದ್ಧರಾಗಿದ್ದಾರೆ. ಇದು ಅವರ 17ನೇ ಬಜೆಟ್ ಆಗಿದ್ದು, ರಾಜ್ಯದ ಇತಿಹಾಸದಲ್ಲೇ ಹೆಚ್ಚು ಬಜೆಟ್ ಮಂಡಿಸಿದ ದಾಖಲೆ ಸೃಷ್ಟಿಸಲಿದ್ದಾರೆ. ರಾಜ್ಯದ ಆರ್ಥಿಕ ಸ್ಥಿತಿ, ಅಭಿವೃದ್ಧಿ ದಿಕ್ಕು ನಿರ್ಧರಿಸುವ ಮಹತ್ವದ ಬಜೆಟ್ ಇದಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಗ್ಯಾರಂಟಿ ಯೋಜನೆಗಳ ಜಾರಿಯಿಂದ ಯಶಸ್ಸು ಸಿಕ್ಕಿದೆ ಎನ್ನುವ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರವು ಆರ್ಥಿಕ ದಿವಾಳಿ ಆಗಿದೆ ಅನ್ನವು ಆರೋಪವನ್ನೂ ಎದುರಿಸುತ್ತಿದೆ. ಸರ್ಕಾರದ ಬಳಿ ಹಣವಿಲ್ಲ, ಸಾಲದ ಮಾಡಿ ಬಜೆಟ್ ಮಂಡಿಸುತ್ತಿದೆ ಎಂಬೆಲ್ಲ ಆರೋಪ ಕೇಳಿ ಬಂದಿವೆ. ಮತ್ತೊಂದೆಡೆ ಸಿದ್ದರಾಮಯ್ಯ ಅವರದ್ದು ಇದೇ ಕೊನೆಯ ಬಜೆಟ್ ಅಂತಲೂ ರಾಜಕೀಯವಾಗಿ ಕೆಲವರು ಮಾತನಾಡಿಕೊಳ್ಳುತ್ತಿದ್ದಾರೆ. ಇದೆಲ್ಲ ಬೆಳವಣಿಗೆ ನಡುವೆ ‘ಕರ್ನಾಟಕ ಬಜೆಟ್ 2026’ ಮಂಡನೆ ಆಗಲಿದೆ. ಆರ್ಥಿಕ ಶಿಸ್ತು ಕಾಯ್ದುಕೊಳ್ಳುವಲ್ಲಿ ಹೆಸರುವಾಸಿಯಾದ ಸಿದ್ದರಾಮಯ್ಯ ಅವರ ಬಜೆಟ್ ಮೇಲೆ ಈ ಬಾರಿ ಅಪಾರ ನಿರೀಕ್ಷೆಗಳು ಇವೆ.

ಸಿದ್ದರಾಮಯ್ಯನವರು ಸರ್ಕಾರ ಮಹತ್ವಾಕಾಂಕ್ಷೆಯ ‘ಪಂಚ ಗ್ಯಾರಂಟಿ ಯೋಜನೆ’ಗಳಿಗೆ ಹೆಚ್ಚಿನ ಒತ್ತು, ಅನುದಾನ ಒದಗಿಸುವ ಸಾಧ್ಯತೆ ಇದೆ. 2026ರಲ್ಲಿ ಒಟ್ಟು 4.50 ಲಕ್ಷ ಕೋಟಿ ರೂಪಾಯಿ ಗಾತ್ರದ ಬಜೆಟ್ ಮಂಡಿಸಲಿದ್ದಾರೆ ಎನ್ನಲಾಗಿದೆ. ಕಳೆದ ವರ್ಷದ ರಾಜ್ಯ ಬಜೆಟ್-2025 ಗಾತ್ರ 04 ಲಕ್ಷ ಕೋಟಿ ರೂ.ದಾಟಿತ್ತು. ಸದರಿ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳು ಅಬಕಾರಿ ಸೆಸ್, ಇಂಧನ ಸೆಸ್ ಹೆಚ್ಚಿಸುವ ನಿರೀಕ್ಷೆಗಳು ಇವೆ. ಈಗಾಗಲೇ ಸಾರ್ವಜನಿಕರು ಗ್ಯಾರಂಟಿಯಿಂದಾಗಿ ಸರ್ಕಾರ ‘ಕೈ’ ಖಾಲಿ ಆಗಿದೆ. ಹಣ ಇಲ್ಲ. ಬಸ್, ಮೆಟ್ರೋ ಟಿಕೆಟ್ ದರ ಇನ್ನಿತರ ವಸ್ತುಗಳ ದರ ಏರಿಕೆ ಆಗಿವೆ. ಇದೀಗ ರಾಜ್ಯ ಬಜೆಟ್ ಮೂಲಕ ನಮ್ಮ ಮೇಲೆ ಮತ್ತಷ್ಟು ಹೊರೆ ಹಾಕದಿದ್ದಾರೆ ಸಾಕು ಎಂದು ಕೇಳಿಕೊಳ್ಳುತ್ತಿದ್ದಾರೆ.

ಕರ್ನಾಟಕ ಬಜೆಟ್ ಅಧಿವೇಶನವು ಮಾರ್ಚ್ 6ರಿಂದ ಮಾರ್ಚ್ 27ರವರೆಗೆ ನಡೆಯಲಿದ್ದು, ಒಟ್ಟು 14 ದಿನಗಳ ಕಾಲ ವಿಧಾನಸಭೆ ಮತ್ತು ವಿಧಾನ ಪರಿಷತ್‌ನಲ್ಲಿ ಚರ್ಚೆಗಳು ನಡೆಯಲಿವೆ. ಬಜೆಟ್‌ ಮಂಡನೆಯ ಬಳಿಕ ವಿವಿಧ ಇಲಾಖೆಗಳ ಅನುದಾನಗಳ ಕುರಿತು ಚರ್ಚೆ ನಡೆಯಲಿದೆ.

ಮೂಲಗಳ ಪ್ರಕಾರ, ಕರ್ನಾಟಕದಲ್ಲಿ 1956 ರ ನಂತರ ಇದುವರೆಗೆ ಚುನಾವಣಾ ವರ್ಷಗಳ ಮಧ್ಯಂತರ ಬಜೆಟ್‌ಗಳನ್ನು ಹೊರತುಪಡಿಸಿ 70ಕ್ಕೂ ಹೆಚ್ಚು ವಾರ್ಷಿಕ ಬಜೆಟ್‌ಗಳು ಮಂಡಿಸಲ್ಪಟ್ಟಿವೆ. ರಾಜ್ಯದ ಆರ್ಥಿಕ ವ್ಯಾಪ್ತಿ ವರ್ಷದಿಂದ ವರ್ಷಕ್ಕೆ ವಿಸ್ತರಿಸಿಕೊಂಡಿದ್ದು, 2025–26ನೇ ಹಣಕಾಸು ವರ್ಷದಲ್ಲಿ ಬಜೆಟ್ ಗಾತ್ರ ಮೊದಲ ಬಾರಿಗೆ 4 ಲಕ್ಷ ಕೋಟಿ ರೂ. ಗಡಿ ದಾಟಿತ್ತು.

https://www.newsics.com/2026/03/06/indian-air-forces-sukhoi-su-30-mki-fighter-jet-goes-missing-search-operation-begins/

 

TAGGED:Siddaramaiah budget presentation today! Set to record 17th time
Share This Article
Facebook Twitter Copy Link Print
Previous Article ಇರಾನ್ ವಿರುದ್ಧ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕಕ್ಕೆ ಆದ ನಷ್ಟ ಎಷ್ಟು?; ಇಸ್ರೇಲ್‌ಗೆ ವಾರಕ್ಕೆ ₹2.74 ಲಕ್ಷ ಕೋಟಿ ಲಾಸ್
Next Article 2,500 ನೌಕರರ ವಜಾಕ್ಕೆ ಮುಂದಾದ ಮಾರ್ಗನ್ ಸ್ಟಾನ್ಲಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?