newsics.com
ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 6, 2026) ತಮ್ಮ ದಾಖಲೆಯ 17ನೇ ಬಜೆಟ್ ಮಂಡಿಸಲು ಸಕಲ ಸಿದ್ಧತೆಗಳೊಂದಿಗೆ ವಿಧಾನಸೌಧಕ್ಕೆ ಆಗಮಿಸಿದ್ದಾರೆ. ಸಾಂಪ್ರದಾಯಿಕವಾಗಿ ಬಜೆಟ್ ಪ್ರತಿಗಳಿರುವ ಸೂಟ್‌ಕೇಸ್ ಹಿಡಿದು ವಿಧಾನಸೌಧಕ್ಕೆ ಎಂಟ್ರಿ ಕೊಟ್ಟ ಸಿಎಂ ಸಿದ್ದರಾಮಯ್ಯ ಅವರನ್ನು ಸಚಿವರು ಮತ್ತು ಶಾಸಕರು ಸ್ವಾಗತಿಸಿದರು.
ಪ್ರತಿ ವರ್ಷದಂತೆ ಈ ಬಾರಿಯೂ ಬಜೆಟ್ ಪತ್ರಿಕೆಗಳಿರುವ ಬ್ಯಾಗ್ ಅಥವಾ ಸೂಟ್‌ಕೇಸ್ ಅನ್ನು ಎತ್ತಿ ಹಿಡಿದು ಫೋಟೋಗೆ ಫೋಸ್ ನೀಡುವ ಮೂಲಕ ಸಂಪ್ರದಾಯವನ್ನು ಮುಂದುವರಿಸಿದರು.
ಬಜೆಟ್‌ನಲ್ಲಿ, ಐದು ಗ್ಯಾರಂಟಿ ಯೋಜನೆಗಳಿಗೆ ಹಣಕಾಸು ಹೊಂದಿಸುವುದರ ಜೊತೆಗೆ ಮೂಲಸೌಕರ್ಯ ಅಭಿವೃದ್ಧಿಗೆ ಹೇಗೆ ಸಮತೋಲನ ಸಾಧಿಸುತ್ತಾರೆ ಎಂಬುದು ಕುತೂಹಲ ಮೂಡಿಸಿದೆ.