newsics.com
ಶಾಲಾ ಕಾಲೇಜುಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆ ಭರ್ತಿ ಮಾಡಲಾಗುತ್ತದೆ, ಪ್ರಸಕ್ತ ಸಾಲಿನಲ್ಲಿ 15 ಸಾವಿರ ಭೋದಕ ಹುದ್ದೆಗಳ ನೇಮಕಾತಿ ಮಾಡಲಾಗುವುದು, 800 ಶಾಲೆಗಳು ಪಬ್ಲಿಕ್ ಶಾಲೆಗಳಾಗಿ ಉನ್ನತೀಕರಣಕ್ಕೆ ನಿರ್ಧರಿಸಲಾಗುತ್ತದೆ. 800 ಶಾಲೆಗಳ ಉನ್ನತೀಕರಣಕ್ಕೆ 3900 ಕೋಟಿ ರೂ. ಅನುದಾನ ನೀಡಲಾಗುವುದು. ಪ್ರಾಥಮಿ ಮತ್ತು ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ ಉಚಿತ ಪಠ್ಯ ಪುಸ್ತಕ ನೀಡಲಾಗುತ್ತದೆ. 1ರಿಂದ 10ನೇ ತರಗತಿಯವರೆಗೆ ಉಚಿತ ಪಠ್ಯ ಪುಸ್ತಕಗಳ ವಿತರಣೆ ಮಾಡಲಾಗುತ್ತದೆ.565 ಕೋಟಿ ರೂ. ವೆಚ್ಚದಲ್ಲಿ ಶಾಲೆಗಳ ದುರಸ್ತಿಗೆ ಸರ್ಕಾರ ಕ್ರಮ ಕೈಗೊಳ್ಳಲಾಗುವುದು. ಶಾಲೆಗಳಲ್ಲಿ ಶೌಚಾಲಯ ನಿರ್ಮಾಣಕ್ಕೆ 75 ಕೋಟಿ ರೂ. ಮೀಸಲು, ಶಾಲಾ-ಕಾಲೇಜು ನಿರ್ವಹಣೆಗಾಗಿ 125 ಕೋಟಿ ರೂ. ಅನುದಾನ ನೀಡಲಾಗುವುದು, ಶಿಕ್ಷಕರ ಇಂಗ್ಲಿಷ್ ಭಾಷಾ ತರಬೇತಿ 24 ಕೋಟಿ ರೂ. ಅನುದಾನ, 8ರಿಂದ 12ನೇ ತರಗತಿಗೆ AI ಆಧಾರಿತ ಕಲಿಕಾ ಸೌಲಭ್ಯ, ವಿದ್ಯಾರ್ಥಿಗಳ ಒತ್ತಡ ನಿವಾರಣೆಗೆ ಆರೋಗ್ಯ ಸಲಹೆಗಾರರ ನೇಮಕ ಮಾಡಲಾಗುವುದು .ಬೆಂಗಳೂರಿನಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ಕೆ.ಆರ್.ಪುರಂನಿಂದ ಮೈಸೂರು ರಸ್ತೆ ವರೆಗೆ 40 ಕಿ.ಮೀ. ಸುರಂಗ ಮಾರ್ಗ ನಿರ್ಮಾಣ ಮಾಡಲಾಗುತ್ತದೆ. 40 ಸಾವಿರ ಕೋಟಿ ವೆಚ್ಚದಲ್ಲಿ ಸುರಂಗ ಮಾರ್ಗ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗುತ್ತದೆ. ಮೊದಲನೇ ಹಂತದಲ್ಲಿ 17 ಕಿ.ಮೀ ಉದ್ದದ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಿಸಲಾಗುತ್ತದೆ. ಹೆಬ್ಬಾಳ-ಸಿಲ್ಕ್ ಬೋರ್ಡ್ವರೆಗೂ ಉತ್ತರ-ದಕ್ಷಿಣ ಕಾರಿಡಾರ್ ನಿರ್ಮಾಣ ಮಾಡಲಾಗುತ್ತದೆ. ಈ ಯೋಜನೆಗೆ 17,780 ಕೋಟಿ ರೂಪಾಯಿ ಮೊತ್ತಕ್ಕೆ ಟೆಂಡರ್ ಕರೆಯಲಾಗುತ್ತದೆ. ಹೆಬ್ಬಾಳ-ಮೇಕ್ರಿ ಸರ್ಕಲ್ವರೆಗೂ ಸುರಂಗ ಮಾರ್ಗ ನಿರ್ಮಿಸಲಾಗುತ್ತದೆ.ಸುರಂಗ ಮಾರ್ಗ ಹಾಗೂ ಮೇಲ್ಸೇತುವೆ ರಸ್ತೆಗೆ 2,250 ಕೋಟಿ ಮೀಸಲಿಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.ಜಿ.ಎಸ್.ಟಿ ಸಂಗ್ರಹಣೆಯಲ್ಲಿನ ಕುಸಿತದಿಂದ ರಾಜ್ಯಗಳಲ್ಲಿ ಹೆಚ್ಚಿನ ಹಣಕಾಸು ಒತ್ತಡ ಉಂಟಾಗಿದೆ. ತೆರಿಗೆ ರಚನೆಯಲ್ಲಿನ ಬದಲಾವಣೆ ಮತ್ತು ಜಿ.ಎಸ್.ಟಿ ದರ ತರ್ಕಬದ್ಧಗೊಳಿಸುವಿಕೆಯು ಕೇಂದ್ರ ಸರ್ಕಾರಕ್ಕಿಂತ ಹೆಚ್ಚಾಗಿ ರಾಜ್ಯಗಳ ರಾಜಸ್ವ ಸಂಗ್ರಹಣೆಯ ಮೇಲೆ ನೇರವಾಗಿ ಪ್ರಭಾವ ಬೀರಿದೆ. ರಾಜ್ಯಗಳು ರಾಜಸ್ವ ನಷ್ಟವನ್ನು ಎದುರಿಸುತ್ತಿರುವ ಸಂದರ್ಭದಲ್ಲಿ, ಮಾದಕ ವಸ್ತುಗಳು ಮತ್ತು ಐಶಾರಾಮಿ ವಸ್ತುಗಳ ಮೇಲೆ ಸೆಸ್ ಮತ್ತು ಇತರೆ ತೆರಿಗೆಗಳನ್ನು ವಿಧಿಸುವ ಮೂಲಕ ಕೇಂದ್ರ ಸರ್ಕಾರವು ರಾಜಸ್ವವನ್ನು ಸಂಗ್ರಹಿಸುತ್ತಿದ್ದು, ಈ ಆದಾಯದ ಸಂಪೂರ್ಣ ಮೊತ್ತವು ಕೇಂದ್ರ ಸರ್ಕಾರದ ಬೊಕ್ಕಸವನ್ನು ಸೇರಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.ಸಿದ್ದರಾಮಯ್ಯ ಕರ್ನಾಟಕದ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ, ಸ್ಟಾರ್ಟ್ಅಪ್, ಎಲೆಕ್ಟ್ರಾನಿಕ್ಸ್, ಏರೋಸ್ಪೇಸ್ ಕ್ಷೇತ್ರಗಳಲ್ಲಿನ ಸಾಧನೆಗಳು ಜಾಗತಿಕ ಹೂಡಿಕೆ ಮತ್ತು ಪ್ರತಿಭೆಗಳನ್ನು ಸೆಳೆಯುತ್ತಿವೆ. ಬಿಯಾಂಡ್ ಬೆಂಗಳೂರು ಪರಿಕಲ್ಪನೆಯು ಹೆಚ್ಚಿನ ಬಂಡವಾಳವನ್ನು ಆಕರ್ಷಿಸುತ್ತಿದೆ. ರಾಜ್ಯವು ರೂಪಿಸಿರುವ ಹೊಸ ಕೈಗಾರಿಕಾ ನೀತಿಯಿಂದ ಹಂತ-2 ಮತ್ತು ಹಂತ-3 ನಗರಗಳಲ್ಲಿಯೂ ಅಭಿವೃದ್ಧಿ ಸಾಧ್ಯವಾಗಲಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ವಸತಿರಹಿತರಿಗೆ ಮನೆಗಳು, ನಿರುದ್ಯೋಗಿ ಯುವಜನರಿಗೆ ಸ್ವಯಂ ಉದ್ಯೋಗಗಳನ್ನು ಕಲ್ಪಿಸಿಕೊಡಲು ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದೇವೆ. ಹವಾಮಾನ ಬದಲಾವಣೆಯಿಂದ ಉಂಟಾಗುತ್ತಿರುವ ತಲ್ಲಣಗಳನ್ನು ನಿಭಾಯಿಸಲು ಸೂಕ್ತ ಕಾರ್ಯತಂತ್ರಗಳನ್ನು ರೂಪಿಸುತ್ತಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
- ಶಿಕ್ಷಣ ಇಲಾಖೆಗೆ 47,224 ಕೋಟಿ ರೂ. ಅನುದಾನ ಹಂಚಿಕೆ
- ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ 34,929 ಕೋಟಿ ರೂ.
- ಇಂಧನ ಇಲಾಖೆಗೆ 29,947 ಕೋಟಿ ರೂ. ಅನುದಾನ ಹಂಚಿಕೆ
- ಗ್ರಾಮೀಣಾಭಿವೃದ್ಧಿ ಇಲಾಖೆಗೆ 26,559 ಕೋಟಿ ರೂ. ಅನುದಾನ
- ಜಲಸಂಪನ್ಮೂಲ ಇಲಾಖೆಗೆ 22,436 ಕೋಟಿ ರೂ. ಅನುದಾನ
- ನಗರಾಭಿವೃದ್ಧಿ ಮತ್ತು ವಸತಿ ಇಲಾಖೆಗೆ 22,203 ಕೋಟಿ ರೂ.
- ಒಳಾಡಳಿತ ಮತ್ತು ಸಾರಿಗೆ ಇಲಾಖೆಗೆ 23,100 ಕೋಟಿ ರೂ.
- ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ 17,817 ಕೋಟಿ ರೂ.
- ಕಂದಾಯ ಇಲಾಖೆಗೆ 19,843 ಕೋಟಿ ರೂ. ಅನುದಾನ ಹಂಚಿಕೆ
- ಸಮಾಜ ಕಲ್ಯಾಣ ಇಲಾಖೆಗೆ 18,612 ಕೋಟಿ ರೂ. ಅನುದಾನ
- ಲೋಕೋಪಯೋಗಿ ಇಲಾಖೆಗೆ 11,424 ಕೋಟಿ ರೂ. ಹಂಚಿಕೆ
- ಆಹಾರ ಇಲಾಖೆಗೆ 7,942 ಕೋಟಿ ರೂ. ಅನುದಾನ ಹಂಚಿಕೆ
- ಕೃಷಿ ಇಲಾಖೆಗೆ 8,373 ಕೋಟಿ ರೂ. ಅನುದಾನ ಹಂಚಿಕೆ
- ಪಶುಸಂಗೋಪನೆ, ಮೀನುಗಾರಿಕೆ ಇಲಾಖೆಗೆ 4,084 ಕೋಟಿ ರೂ.
- ಇತರೆ ಇಲಾಖೆಗಳಿಗೆ ಒಟ್ಟು 1,72,757 ಕೋಟಿ ರೂ. ಅನುದಾನ